ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ
ವರ್ಷಕ್ಕೆ ಕನಿಷ್ಠ 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯತೆಯಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆ ಮಾಡಲಾಗುತ್ತದೆ.
ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ (kuchalakki rice) ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಭೆ ನಡೆಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಕುಚ್ಚಲಕ್ಕಿ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯತೆಯಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆ ಮಾಡಲಾಗುತ್ತದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಮತ್ತು ತೆಲಂಗಾಣ ರಾಜ್ಯಗಳಿಂದ ಭತ್ತ ಪೂರೈಸಿಕೊಳ್ಳಲು ಚಿಂತನೆ ನಡೆಯುತ್ತಿದ್ದು, ಈ ಸಂಬಂಧ ಈ ವಾರಾಂತ್ಯದಲ್ಲಿ ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ.
ಇದನ್ನೂ ಓದಿ; ತುಂಗಭದ್ರಾ ಜಲಾಶಯ ಭರ್ತಿ: ನದಿ ಪಾತ್ರದ ಗ್ರಾಮಗಳ ಜನರಿಗೆ ಆತಂಕ, ಬಾಗಿನ ಅರ್ಪಣೆ
ಈಗಾಗಲೇ ಕೇರಳಕ್ಕೆ ಭೇಟಿ ನೀಡಿರುವ ಒಂದು ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಸಿಎಂ ಭೇಟಿಗೆ ನಿರ್ಧಾರ ಮಾಡಲಾಗಿದೆ. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ಜಂಟಿ ನಿರ್ದೇಶಕ ವಿಜಯಕುಮಾರ್, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಅಹಾರ ನಿಗಮದ ಎಂಡಿ ಬಸವರಾಜ ಸೋಮಣ್ಣನವರ ಭಾಗಿಯಾಗಿದ್ದರು.
ಇದನ್ನೂ ಓದಿ: Shocking Video: ಫೋಟೋ ಆಸೆಯಿಂದ ಸಮುದ್ರದಲ್ಲಿ ಕೊಚ್ಚಿ ಹೋದ ಕುಟುಂಬ; ಶಾಕಿಂಗ್ ವಿಡಿಯೋ ವೈರಲ್
ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ
ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಇನ್ನೂ ನಾಲ್ಕು ದಿನ ಮಳೆ (Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಇಂದು (ಜುಲೈ 14) ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಇನ್ನು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿ ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ 5 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಹಾಸನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದ್ದು, ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯಲ್ಲಿ ವರ್ಷಧಾರೆ ಹಿನ್ನೆಲೆ, ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕಕಡಿತವಾಗಿದ್ದು, ಭಾಗಮಂಡಲ-ತಲಕಾವೇರಿ ರಸ್ತೆಗೆ ಎರಡು ಮರಗಳು ಉರುಳಿವೆ. ಮಡಿಕೇರಿ ತಾಲೂಕಿನ ಭಾಗಮಂಡಲ-ತಲಕಾವೇರಿ ರಸ್ತೆ ಸಂಚಾರವೂ ಸ್ಥಗಿತಗೊಂಡಿದ್ದು, ಜನರ ಪರದಾಡುತ್ತಿದ್ದಾರೆ.