AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2011ನೇ ಸಾಲಿನ ವಿವಾದಿತ ನೇಮಕಾತಿ ಸಿಂಧುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ

ಇಂದು( ಫೆಬ್ರವರಿ 18) ವಿಧಾನಸಭೆಯಲ್ಲಿ ಸರ್ಕಾರ ವಿಧೇಯಕ ಮಂಡನೆ ಮಾಡಲಿದೆ. 2022ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ 2011 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ವಿಧೇಯಕ ಮಂಡನೆ, ವಿಧೇಯಕಕ್ಕೆ ಅನುಮೋದನೆ ಪಡೆಯುವ ಮೂಲಕ 362 ಅಧಿಕಾರಿಗಳ ನೇಮಕಾತಿ ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

2011ನೇ ಸಾಲಿನ ವಿವಾದಿತ ನೇಮಕಾತಿ ಸಿಂಧುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Feb 18, 2022 | 1:08 PM

Share

ಬೆಂಗಳೂರು: 2011ನೇ ಸಾಲಿನಲ್ಲಿ ನೇಮಕವಾದ ಗೆಜೆಟೆಡ್ ಪ್ರೋಬೆಷನರಿ ಅಧಿಕಾರಿಗಳ ನೇಮಕಾತಿ ಸಿಂಧುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಶೇಷ ಕಾಯಿದೆ ಮೂಲಕ ನೇಮಕಾತಿಯನ್ನು ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂದು( ಫೆಬ್ರವರಿ 18) ವಿಧಾನಸಭೆಯಲ್ಲಿ ಸರ್ಕಾರ ವಿಧೇಯಕ ಮಂಡನೆ ಮಾಡಲಿದೆ. 2022ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ 2011 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ವಿಧೇಯಕ ಮಂಡನೆ, ವಿಧೇಯಕಕ್ಕೆ ಅನುಮೋದನೆ ಪಡೆಯುವ ಮೂಲಕ 362 ಅಧಿಕಾರಿಗಳ ನೇಮಕಾತಿ ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈ ಕುರಿತು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಕಾಗೇರಿ ಕಸರತ್ತು

ವಿಧಾನಸಭೆಯಲ್ಲಿ ಕಾಂಗ್ರೆಸ್​ನಿಂದ​ ಅಹೋರಾತ್ರಿ ಧರಣಿ ಹಿನ್ನೆಲೆ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಕಾಗೇರಿ ಕಸರತ್ತು ಮಾಡುವಂತಾಗಿದೆ. ಧರಣಿ ಬಿಟ್ಟು ಕಲಾಪದಲ್ಲಿ ಭಾಗಿಯಾಗುವಂತೆ ಸ್ಪೀಕರ್​ ಮನವಿ ಮಾಡಿದ್ದಾರೆ. ಸಿಎಂ, ಮಾಜಿ ಸಿಎಂ ಮಾತಿಗೂ ಕಾಂಗ್ರೆಸ್ ನಾಯಕರು ಜಗ್ಗದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಮುಂದಾಗಿದ್ದಾರೆ. ಸ್ಪೀಕರ್ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

ವಿಧಾನಸಭೆ: ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡ ಸ್ಪೀಕರ್

ಸದನದಲ್ಲಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದ್ದು, ಸ್ಪೀಕರ್ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡಿದ್ದಾರೆ. ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರಿದಿದ್ದು, ಗದ್ದಲದ ನಡುವೆಯೇ ಪ್ರಶ್ನೋತ್ತರ ‌ಕಲಾಪ ಶುರುವಾಗಿದೆ.

ಕಲಾಪ ನಡೆಯಲು ಬಿಡಲ್ಲ ಎನ್ನುವುದು ಸರಿಯಲ್ಲ: ಸಚಿವ ಜೆ.ಸಿ.ಮಾಧುಸ್ವಾಮಿ

ಕಲಾಪ ನಡೆಯಲು ಬಿಡಲ್ಲ ಎನ್ನುವುದು ಸರಿಯಲ್ಲ. ನಾವು ಹೇಳಿದ್ದೇ ನಡೆಯಬೇಕು ಎನ್ನುವುದು ಸರಿಯಲ್ಲ. ವಿಧಾನಸಭೆ ಪ್ರಜಾಪ್ರಭುತ್ವದ ದೇವಸ್ಥಾನವಾಗಿದೆ. ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಸಚಿವರ ರಾಜೀನಾಮೆಗೆ ಆಗ್ರಹಿಸಿ ಧರಣಿ, ವಿಧಾನಸಭೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು. ಆದರೆ ಸದನದ ಹೊರಗೆ ಎಲ್ಲಿಬೇಕಾದರೂ ಪ್ರತಿಭಟನೆ ಮಾಡಿ. ಒಂದು ವಿಚಾರಕ್ಕಾಗಿ ಕಲಾಪ ಹಾಳುಮಾಡುವುದು ಸರಿಯಲ್ಲ. ಇದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಿ ಎಂದು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವಿಧಾನಸಭೆಯಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬಸವರಾಜ ಬೊಮ್ಮಾಯಿ: ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ

ಮುಂದಿನ ವಿಧಾನ ಸಭೆ ಚುನಾವಣೆಯನ್ನು ಬಿಜೆಪಿ ಮುಖ್ಯಮಂತ್ರಿ ಬೊಮ್ಮಾಯಿಯವರ ನೇತೃತ್ವದಲ್ಲಿ ಎದುರಿಸಲಿದೆ: ರಮೇಶ್ ಜಾರಕಿಹೊಳಿ

Published On - 11:54 am, Fri, 18 February 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ