ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 28, 2024 | 9:49 PM

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ(Teachers appointment) ಹೊರಗುತ್ತಿಗೆಯನ್ನು ಬಿಬಿಎಂಪಿ ಸೆಕ್ಯೂರಿಟಿ ಸಂಸ್ಥೆಗೆ ಟೆಂಡರ್ ನೀಡಿತ್ತು. ಈ ಕುರಿತು ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸೂಚನೆಯಂತೆ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದು ಮಾಡಿ ಆದೇಶಿಸಿದೆ.

ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು
ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು
Follow us on

ಬೆಂಗಳೂರು, ಮೇ.28: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ(Teachers appointment) ಹೊರಗುತ್ತಿಗೆಯನ್ನು ಬಿಬಿಎಂಪಿ ಸೆಕ್ಯೂರಿಟಿ ಸಂಸ್ಥೆಗೆ ಟೆಂಡರ್ ನೀಡಿತ್ತು. ಇದರಿಂದ ಇದರಿಂದ ರಾಜ್ಯ ಸರ್ಕಾರ ಭಾರೀ ಮುಜುಗರಕ್ಕೆ ಒಳಗಾಗಿತ್ತು. ಮಾಜಿ ಶಿಕ್ಷಣ ಸಚಿವರು ಸೇರಿದಂತೆ ಹಲವರು ಟೀಕೆ ಮಾಡಿದ್ದರು.  ಇದೀಗ ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ಬಿಬಿಎಂಪಿ ಶಿಕ್ಷಣ ಇಲಾಖೆ ರದ್ದು ಮಾಡಿದೆ.

SDMC ಮೂಲಕ ಶಿಕ್ಷಕರ ನೇಮಕಾತಿಗೆ ತಯಾರಿ

ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸೂಚನೆಯಂತೆ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದು ಮಾಡಿ ಆದೇಶಿಸಿದೆ. ಜೊತೆಗೆ ಏಜೆನ್ಸಿ ಬದಲು SDMC ಮೂಲಕ ಶಿಕ್ಷಕರ ನೇಮಕಾತಿಗೆ ತಯಾರಿ ನಡೆಸಲಾಗಿದೆ.

ಇದನ್ನೂ ಓದಿ:ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ

ಘಟನೆ ವಿವರ

ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ 700 ಶಿಕ್ಷಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಅದರಂತೆ ಶಿಕ್ಷಕರ ನೇಮಕಾತಿ ಹೊರಗುತ್ತಿಗೆಯನ್ನು ಪಾಲಿಕೆ ಸೆಕ್ಯೂರಿಟಿ ಸಂಸ್ಥೆಗೆ ನೀಡಿತ್ತು. ಇದರಿಂದ ರಾಜ್ಯ ಸರ್ಕಾರ ನಗೆಪಾಟಲಿಗೆ ಈಡಾಗಿದ್ದಲ್ಲದೆ, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಪೋಷಕರ ಆಕ್ರೋಶಕ್ಕೂ ಕಾರಣವಾಗಿತ್ತು. ಜೊತೆಗೆ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಕೂಡ ಆಕ್ರೋಶ ವ್ಯಕ್ತಪಡಿಸಿ, ‘ಶಿಕ್ಷಕರ ಮತ್ತು ಸೇವಾ ಪೂರೈಕೆ ಮಾಡಲು ಸೆಕ್ಯೂರಿಟಿ ಏಜೆನ್ಸಿಗೆ ಗುತ್ತಿಗೆ ನೀಡಲಾಗಿದೆ. ನಮ್ಮ ವ್ಯವಸ್ಥೆ ಎಂತಹ ಸ್ಥಿತಿ ತಲುಪಿತು. ಬಿಬಿಎಂಪಿ ಕೈಗೊಂಡಿರುವ ನಿರ್ಧಾರ ವಿಚಿತ್ರ ವೈಖರಿ ಎಂದು ಶಿಕ್ಷಕರ ಸಾಮಾಜಿಕ ಜಾಲತಾಣದ ಮೂಲಕ ಮಾಜಿ ಸಚಿವ ಸುರೇಶ್​ ಕುಮಾರ್​ ವಾಗ್ದಾಳಿ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ