AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸರು; 3.36 ಲಕ್ಷ ರೂ. ದಂಡ ವಸೂಲಿ

ಆಟೋ ಚಾಲಕರು ಕರೆದಿದ್ದ ಕಡೆ ಬರಲ್ಲ, ಹೆಚ್ಚು ಹಣ ಕೇಳ್ತಾರೆ ಎಂದು ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದವು. ಈ ಬೆನ್ನಲ್ಲೇ ಉತ್ತರ ವಿಭಾಗದ ಸಂಚಾರಿ ಪೊಲೀಸರು ಸ್ಪೆಷಲ್ ಡ್ರೈವ್ ಕೈಗೊಂಡು ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ದಂಡ ವಿಧಿಸಿದ್ದಾರೆ.

ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸರು; 3.36 ಲಕ್ಷ ರೂ. ದಂಡ ವಸೂಲಿ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Sep 24, 2023 | 11:02 AM

Share

ಬೆಂಗಳೂರು, ಸೆ.24: ಇತ್ತೀಚೆಗೆ ನಗರದಲ್ಲಿ ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಂದ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆ ಸಂಚಾರಿ ಪೊಲೀಸರು (Traffic Police) ವಿಶೇಷ ಕಾರ್ಯಾಚರಣೆ ನಡೆಸಿ ಆಟೋ ಚಾಲಕರಿಗೆ (Auto Drivers) ಬಿಸಿ ಮುಟ್ಟಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ (Bengaluru) ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಂದ ಪದೇ ಪದೇ ದೂರುಗಳು ಬರುತ್ತಿದ್ದವು. ಹೀಗಾಗಿ ಫೀಲ್ಡ್​ಗಿಳಿದ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೆ.14ರಿಂದ 23ರವರೆಗೆ ಒಟ್ಟು 670 ಪ್ರಕರಣಗಳನ್ನು ದಾಖಲಿಸಿ 3.36 ಲಕ್ಷ ರೂ ದಂಡ ವಸೂಲಿ ಮಾಡಿದ್ದಾರೆ.

ಆಟೋ ಚಾಲಕರು ಕರೆದಿದ್ದ ಕಡೆ ಬರಲ್ಲ, ಹೆಚ್ಚು ಹಣ ಕೇಳ್ತಾರೆ ಎಂದು ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದವು. ಈ ಬೆನ್ನಲ್ಲೇ ಉತ್ತರ ವಿಭಾಗದ ಸಂಚಾರಿ ಪೊಲೀಸರು ಸ್ಪೆಷಲ್ ಡ್ರೈವ್ ಕೈಗೊಂಡು ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ದಂಡ ವಿಧಿಸಿದ್ದಾರೆ. ಈಶಾನ್ಯ ಉಪ ವಿಭಾಗದಲ್ಲಿ ಹೆಚ್ಚು ಹಣ ಪಡೆದ ಆರೋಪದಡಿ ಒಟ್ಟು 141 ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದ್ದು 72,000 ರೂ. ದಂಡ ಹಾಕಲಾಗಿದೆ. ಉತ್ತರ ಉಪ ವಿಭಾಗದಲ್ಲಿ 221 ಆಟೋ ಚಾಲಕರ ವಿರುದ್ಧ ಕೇಸ್ ದಾಖಲಾಗಿದ್ದು ಒಟ್ಟು 1 ಲಕ್ಷದ 10 ಸಾವಿರದ 500 ರೂ. ದಂಡ ಸಂಗ್ರಹವಾಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು

ಬೆಂಗಳೂರಿನಲ್ಲಿ ಬಹುತೇಕ ಆಟೋಗಳ ಚಾಲಕರ ಪ್ರಯಾಣಿಕರು ಕರೆದಲ್ಲಿ ಬರುವುದಿಲ್ಲ. ಹಾಗೇ ಆಟೋ ಬುಕ್ ಮಾಡಿದರೆ ಕ್ಯಾನ್ಸಲ್ ಮಾಡ್ತಾರೆ. ಇಲ್ಲ ಅಂದ್ರೆ ಪ್ರಯಾಣಿಕರ ಪಿಕ್ ಅಪ್ ಜಾಗಕ್ಕೆ ಬರಲು ತಡ ಮಾಡಿ ಪ್ರಯಾಣಿಕರೇ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಳ್ಳುವಂತೆ ಮಾಡ್ತಾರೆ. ಅದರಲ್ಲೂ 10 ಗಂಟೆ ಆಯ್ತು ಅಂದ್ರೆ ಅವರು ಹೇಳಿದಷ್ಟು ಹಣ ಕೊಟ್ಟು ಪ್ರಯಾಣಿಸಬೇಕು. ಓಲಾ, ಓವರ್​ಗಳ ಮೊರೆ ಹೋಗೋಣ ಎಂದರೆ ಅವರು ಕೂಡ ಬೇಗ ಅಕ್ಸೆಪ್ಟ್ ಮಾಡುವುದಿಲ್ಲ. ಹೀಗಾಗಿ ಆಟೋ ಚಾಲಕರ ವರ್ತನೆಯಿಂದ ಬೇಸತ್ತ ಪ್ರಯಾಣಿಕರು ಸಂಚಾರಿ ಪೊಲೀಸರಿಗೆ ದೂರು ನೀಡಿದ್ದು ಚಾಲಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ