ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಳ್ಳತನ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು​​​ ಭಾಗಿಯಾಗಿದ್ದ ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್​ನ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಕಳ್ಳತನ ನಡೆದಿದೆ. 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಪರ್ಸ್ ಕದ್ದು ಖದೀಮ ಎಸ್ಕೇಪ್ ಆಗಿದ್ದಾನೆ. ಕಳ್ಳನ ಕೈಚಳಕ ಹೋಟೆಲ್​​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Follow us
TV9 Web
| Updated By: ಆಯೇಷಾ ಬಾನು

Updated on:Nov 09, 2023 | 11:16 AM

ಬೆಂಗಳೂರು, ನ.09: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು​​​ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ (Theft) ನಡೆದಿದೆ. ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು​​​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ತಕ್ರಮದಲ್ಲಿ ಗಣ್ಯತಿ ಗಣ್ಯರು ಕೂಡ ಭಾಗಿಯಾಗಿದ್ದರು. ಇಂತಹ ದೊಡ್ಡ ಕಾರ್ಯಕ್ರಮದಲ್ಲೇ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಪರ್ಸ್ ಕದ್ದು ಎಸ್ಕೇಪ್ ಆಗಿದ್ದಾನೆ.

ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಅಜಿತಾ ಎನ್ನುವವರು ಕೂಡ ಬಂದಿದ್ದರು. ಅಜಿತಾ ಅವರು ಫೋಟೋ ತೆಗೆಸಿಕೊಳ್ಳಲು ಹೋದಾಗ ಕಳ್ಳ ಪರ್ಸ್ ಕದ್ದು ಪರಾರಿಯಾಗಿದ್ದಾನೆ. ಪರ್ಸ್​ನಲ್ಲಿ 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಕಳ್ಳನ ಕೈಚಳಕ ಹೋಟೆಲ್​​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳನ ಚಲನ ವಲನದ ಎಲ್ಲಾ ಸಿಸಿಟಿವಿ ವಿಡಿಯೋ ನೀಡಿ ಟ್ವೀಟರ್​ನಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಜಾಮೀನು ಸಿಕ್ಕರೂ ಮುರುಘಾಶ್ರೀಗೆ ಶಿಕ್ಷೆ ಆಗೇ ಆಗುತ್ತೆ: ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ

ಅಡಿಕೆ ತೋಟಗಳಲ್ಲಿ ಅಡಿಕೆ‌ ಕಳವು ಮಾಡ್ತಿದ್ದ ಆರೋಪಿಗಳ ಬಂಧನ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಗ್ರಾಮದಲ್ಲಿ ಫಸಲಿಗೆ ಬಂದಿದ್ದ 25 ಕ್ವಿಂಟಾಲ್ ಹಸಿ ಅಡಕೆ ಕದ್ದಿದ್ದ ಮಂಡ್ಯ ಮೂಲದ ರವಿ, ಅಭಿಜಿತ್, ಅಭಿಷೇಕ್, ಬಿ.ಕೆ.ಮಂಜುನಾಥ್, ಮನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಯೋಗೇಶ್ ಎಂಬುವರು ನೀಡಿದ ದೂರಿನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1 ಟಾಟಾ ಏಸ್, 6,000 ರೂ. ನಗದು ಜಪ್ತಿ ಮಾಡಲಾಗಿದೆ. ಖದೀಮರು ಸುಮಾರು ಒಂದೂವರೆ ಲಕ್ಷದ ಅಡಿಕೆಯನ್ನ ಕದ್ದಿದ್ದರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಕುಣಿಗಲ್ ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:06 am, Thu, 9 November 23

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ