ಬೆಂಗಳೂರು, ನ.09: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ (Theft) ನಡೆದಿದೆ. ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ತಕ್ರಮದಲ್ಲಿ ಗಣ್ಯತಿ ಗಣ್ಯರು ಕೂಡ ಭಾಗಿಯಾಗಿದ್ದರು. ಇಂತಹ ದೊಡ್ಡ ಕಾರ್ಯಕ್ರಮದಲ್ಲೇ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಪರ್ಸ್ ಕದ್ದು ಎಸ್ಕೇಪ್ ಆಗಿದ್ದಾನೆ.
ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಅಜಿತಾ ಎನ್ನುವವರು ಕೂಡ ಬಂದಿದ್ದರು. ಅಜಿತಾ ಅವರು ಫೋಟೋ ತೆಗೆಸಿಕೊಳ್ಳಲು ಹೋದಾಗ ಕಳ್ಳ ಪರ್ಸ್ ಕದ್ದು ಪರಾರಿಯಾಗಿದ್ದಾನೆ. ಪರ್ಸ್ನಲ್ಲಿ 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಕಳ್ಳನ ಕೈಚಳಕ ಹೋಟೆಲ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳನ ಚಲನ ವಲನದ ಎಲ್ಲಾ ಸಿಸಿಟಿವಿ ವಿಡಿಯೋ ನೀಡಿ ಟ್ವೀಟರ್ನಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.
ಇದನ್ನೂ ಓದಿ: ಜಾಮೀನು ಸಿಕ್ಕರೂ ಮುರುಘಾಶ್ರೀಗೆ ಶಿಕ್ಷೆ ಆಗೇ ಆಗುತ್ತೆ: ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಗ್ರಾಮದಲ್ಲಿ ಫಸಲಿಗೆ ಬಂದಿದ್ದ 25 ಕ್ವಿಂಟಾಲ್ ಹಸಿ ಅಡಕೆ ಕದ್ದಿದ್ದ ಮಂಡ್ಯ ಮೂಲದ ರವಿ, ಅಭಿಜಿತ್, ಅಭಿಷೇಕ್, ಬಿ.ಕೆ.ಮಂಜುನಾಥ್, ಮನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಯೋಗೇಶ್ ಎಂಬುವರು ನೀಡಿದ ದೂರಿನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1 ಟಾಟಾ ಏಸ್, 6,000 ರೂ. ನಗದು ಜಪ್ತಿ ಮಾಡಲಾಗಿದೆ. ಖದೀಮರು ಸುಮಾರು ಒಂದೂವರೆ ಲಕ್ಷದ ಅಡಿಕೆಯನ್ನ ಕದ್ದಿದ್ದರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಕುಣಿಗಲ್ ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:06 am, Thu, 9 November 23