ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ; ಪಂಚಮಸಾಲಿಯವರಿಗೇ ಸಿಎಂ ಸ್ಥಾನ ಕೊಡಬೇಕು: ಬಸವಜಯ ಮೃತ್ಯುಂಜಯಶ್ರೀ

ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಮುರುಗೇಶ್ ನಿರಾಣಿ ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಜುಲೈ 26ರ ನಂತರ ನಾನು ದೆಹಲಿಗೆ ಹೋಗುತ್ತೇನೆ ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ ನೀಡಿದ್ದಾರೆ.

ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ; ಪಂಚಮಸಾಲಿಯವರಿಗೇ ಸಿಎಂ ಸ್ಥಾನ ಕೊಡಬೇಕು:  ಬಸವಜಯ ಮೃತ್ಯುಂಜಯಶ್ರೀ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
Follow us
TV9 Web
| Updated By: preethi shettigar

Updated on:Jul 24, 2021 | 2:15 PM

ಬೆಂಗಳೂರು: ಪಂಚಮಸಾಲಿ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು. ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ. ಅದರಲ್ಲಿ ಮೂವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಮುರುಗೇಶ್ ನಿರಾಣಿ ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಜುಲೈ 26ರ ನಂತರ ನಾನು ದೆಹಲಿಗೆ ಹೋಗುತ್ತೇನೆ. ವರಿಷ್ಠರು ಕೇಳಿದರೆ ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ವಿಚಾರವನ್ನು ನಾವು ಪ್ರಶ್ನೆ ಮಾಡಲ್ಲ. ನರೇಂದ್ರ ಮೋದಿ ಯಾರನ್ನು ಸಿಎಂ ಮಾಡಿದರೂ ಸ್ವಾಗತಿಸುತ್ತೇವೆ. ನಾವು ಕೇವಲ ಸಲಹೆಯನ್ನು ಮಾತ್ರ ಕೊಡುತ್ತೇವೆ ಅಷ್ಟೇ. ನಾ‍ವು ಯಾರಿಗೂ ಬ್ಲ್ಯಾಕ್‌ಮೇಲ್ ಮಾಡಲು ಹೋಗಲ್ಲ. ಬೇರೆ ಸಮುದಾಯದವರಿಗೆ ಕೊಟ್ರೂ ವಿರೋಧಿಸಲ್ಲ ಎಂದು ಬಸವಜಯ ಮೃತ್ಯುಂಜಯಶ್ರೀ ತಿಳಿಸಿದ್ದಾರೆ.

ಆಗಸ್ಟ್ 30ರಿಂದ ಸೆಪ್ಟೆಂಬರ್ 15ರವರೆಗೆ ಹೋರಾಟ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯಿತಿ ಘೋಷಣೆಯಡಿ, ಆಗಸ್ಟ್ 30ರಿಂದ ಸೆಪ್ಟೆಂಬರ್ 15ರವರೆಗೆ ತಾಲೂಕು ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ತಿಳಿಸಿದ್ದಾರೆ.

ಬಸವಜಯ ಮೃತ್ಯುಂಜಯಶ್ರೀ ನೇತೃತ್ವದಲ್ಲಿ ಸಭೆ ಸಿಎಂ ರಾಜೀನಾಮೆ ಕೊಡುವುದಕ್ಕೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಿ, ಈ ಸಭೆಯಲ್ಲಿ 4 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಮೊದಲ ನಿರ್ಣಯ, ರಾಜೀನಾಮೆ ಕೊಡುವ ಮುನ್ನ ವಿಶೇಷ ಸಂಪುಟ ಸಭೆ ನಡೆಸಿ ಪಂಚಮಸಾಲಿ ಸಮುದಾಯಕ್ಕೆ 2A ಶಿಫಾರಸ್ಸು ಘೋಷಿಸಬೇಕು. ಎರಡನೆ ನಿರ್ಣಯ, ಅಕ್ಟೋಬರ್ 1 ರಿಂದ ಪುನಃ ಪಂಚಮಸಾಲಿ ಸಮುದಾಯದ 2A ಮೀಸಲು ಹೋರಾಟ ಆರಂಭ. ಮೂರನೆ ನಿರ್ಣಯ, ಆಗಸ್ಡ್ 15 ರಿಂದ ಸೆಪ್ಟಂಬರ್ 30 ರವರೆಗೆ ಪಂಚಮಸಾಲಿ ಪ್ರತಿಜ್ಞಾ ಪೂಜೆ ಅಭಿಯಾನ ರಾಜ್ಯದ ಉದ್ದಗಲಕ್ಕೆ ಅಭಿಯಾನಕ್ಕೆ ತೀರ್ಮಾನ. ನಾಲ್ಕನೆ ನಿರ್ಣಯ, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆದರೆ ಉತ್ತರ ಕರ್ನಾಟಕದ ಪಂಚಮಸಾಲಿ ಲಿಂಗಾಯತರನ್ನೆ ಮುಂದಿನ ಸಿಎಂ ಮಾಡಬೇಕು ಎಂದು ಒತ್ತಾಯಿಸಲು ಸಭಾ ನಿರ್ಣಯ ಎಂದು ಬಸವಜಯ ಮೃತ್ಯುಂಜಯಶ್ರೀ ಹೇಳಿದ್ದಾರೆ.

ಇದನ್ನೂ ಓದಿ: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಯಡಿಯೂರಪ್ಪ; 1800 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ

ಯಡಿಯೂರಪ್ಪರನ್ನು ಬದಲಾವಣೆ ಮಾಡಿದ್ರೆ ಕೋಟಾ ಶ್ರೀನಿವಾಸ ಪೂಜಾರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು: ಪ್ರಣವಾನಂದ ಸ್ವಾಮೀಜಿ ಒತ್ತಾಯ

Published On - 1:45 pm, Sat, 24 July 21

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ