AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿರುವ ಸವಾಲುಗಳು ಏನು ಗೊತ್ತಾ?

ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆ ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಭಾರೀ ಚರ್ಚೆಯಾಗುತ್ತಿತ್ತು. ಸದ್ಯ ಈ ಚರ್ಚೆಗೆ ಪೂರ್ಣ ವಿರಾಮ ಬಿದ್ದಿದೆ.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿರುವ ಸವಾಲುಗಳು ಏನು ಗೊತ್ತಾ?
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Edited By: |

Updated on: Jul 28, 2021 | 8:41 AM

Share

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ನಿನ್ನೆ (ಜುಲೈ 27) ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ಸಿಎಂ ಎಂದು ಬೊಮ್ಮಾಯಿ ಹೆಸರನ್ನು ಘೋಷಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ರಾಜಭವನದಲ್ಲಿ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಅವರ ಮೇಲೆ ರಾಜ್ಯದ ಅಭಿವೃದ್ಧಿ ಹೊಣೆ ಬೀಳಲಿದೆ. ಅಲ್ಲದೇ ಕೆಲವು ಸವಾಲುಗಳು ಬೊಮ್ಮಾಯಿಯವರ ಮುಂದಿವೆ.

ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂಬ ಸುಳಿವು ಸಿಗುತ್ತಿದ್ದಂತೆ ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಭಾರೀ ಚರ್ಚೆಯಾಗುತ್ತಿತ್ತು. ಸದ್ಯ ಈ ಚರ್ಚೆಗೆ ಪೂರ್ಣ ವಿರಾಮ ಬಿದ್ದಿದೆ. ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೆಸರು ಘೋಷಣೆಯಾಗುತ್ತಿದ್ದಂತೆ ಬೆಂಬಲಿಗರು ನಾಡಿನ ವಿವಿಧೆಡೆ ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಪ್ರಮಾಣವಚನ ಸ್ವೀಕರಿಸಲಿರುವ ನೂತನ ಸಿಎಂಗೆ ಹೆಚ್ಚು ಸವಾಲುಗಳು ಮುಂದಿವೆ.

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಮುಂದಿರುವ ಸವಾಲುಗಳು: * ಹೊಸದಾದ ಆ್ಯಕ್ಟಿವ್ ಆದ ಸಚಿವ ಸಂಪುಟ ರಚನೆ. * ಅತ್ಯುತ್ತಮ ತಂಡ ರಚನೆ. * ಸಂಪುಟ ಸಹೋದ್ಯೋಗಿಗಳನ್ನ ಒಟ್ಟಿಗೆ ತೆಗೆದುಕೊಂಡು ಹೋಗಬೇಕಾಗಿರುವುದು. * ಬಿಎಸ್​ವೈ ವಿರೋಧಿ ಬಣ ಬೊಮ್ಮಾಯಿ ವಿರೋಧಿ ಬಣವಾಗಿಯೂ ಕಾಡುವ ಸಾಧ್ಯತೆ. * ಪ್ರವಾಹ ಪೀಡಿತ ಪ್ರದೇಶಗಳಿಗೆ ಆದ್ಯತೆಯ ಭೇಟಿ. * ಕೊರೊನಾ 3ನೇ ಅಲೆ ಎದುರಿಸುವುದು. * ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ. * ಬಿಬಿಎಂಪಿ ಚುನಾವಣೆ. * ಸರ್ಕಾರದ ಇಮೇಜ್ ಹೆಚ್ಚಿಸಬೇಕಾಗಿರುವುದು. * 2023ರ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯುವುದು. * ಯಡಿಯೂರಪ್ಪ ರಬ್ಬರ್ ಸ್ಟಾಂಪ್ ಆಗದ ರೀತಿ ಆಡಳಿತ ನಡೆಸಬೇಕಿರುವುದು.

ಇದನ್ನೂ ಓದಿ

Karnataka Politics: ಯಡಿಯೂರಪ್ಪ ಸರ್ಕಾರದಲ್ಲಿ ಸಿ.ಪಿ ಯೋಗೀಶ್ವರ್​ಗೆ ಇದ್ದ ಸಮಸ್ಯೆ ಏನಾಗಿತ್ತು?

Basavaraj Bommai Oath Taking: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ, ದೇವಸ್ಥಾನ ದರ್ಶನ ಬಳಿಕ ಬಿಎಸ್​ವೈ ಭೇಟಿ

(There are challenges ahead for Chief Minister Basavaraj Bommai)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್