ಸದ್ಯ 1 ರಿಂದ 5ರವರೆಗೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

| Updated By: preethi shettigar

Updated on: Sep 04, 2021 | 11:07 AM

ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ರಿಂದ ಟ್ರಯಲ್ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ತಿಳಿಸಿದ್ದಾರೆ.

ಸದ್ಯ 1 ರಿಂದ 5ರವರೆಗೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪ್ರಾಥಮಿಕ ಶಾಲೆ ಆರಂಭಿಸದಿರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಅಲ್ಲದೆ ಈ ನಡುವೆ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ತಿಳಿಸಿದ್ದಾರೆ.

ಈಗಾಗಲೇ ಆರಂಭವಾದ ಕಾಲೇಜುಗಳಲ್ಲಿ ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. ಹೀಗಾಗಿ ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭ ಬೇಡ ಎಂದು ನಿರ್ಧರಿಸಲಾಗಿದೆ. ಆದರೆ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಶಾಲೆ ಆರಂಭಿಸುವ ಆತುರ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ. ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ರಿಂದ ಟ್ರಯಲ್ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ತಿಳಿಸಿದ್ದಾರೆ.

ಪರಿಸ್ಥಿತಿ ನೋಡಿಕೊಂಡು ಪ್ರಾಥಮಿಕ ಶಾಲೆ ಆರಂಭ:ಸಿಎಂ ಬಸವರಾಜ ಬೊಮ್ಮಾಯಿ
ಸದ್ಯ 6, 7, 8ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಪರಿಸ್ಥಿತಿ ನೋಡಿಕೊಂಡು ಪ್ರಾಥಮಿಕ ಶಾಲೆ ಆರಂಭ ಮಾಡಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

6 ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ:
1 ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೆಗೆದುಕೊಂಡಿದೆ. 6- 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆಪ್ಟೆಂಬರ್ 6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುವುದು. ವಾರದಲ್ಲಿ 5 ದಿನ (ಸೋಮವಾರದಿಂದ ಶುಕ್ರವಾರದವರೆಗೆ) ಶಾಲೆ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಉಳಿದ 2 ದಿನ (ಶನಿವಾರ, ಭಾನುವಾರ) ಶಾಲೆ ಸ್ವಚ್ಛಗೊಳಿಸಲು ಅವಕಾಶವಿರುತ್ತದೆ. ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಅಂದರೆ, ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬಹುದು ಎಂದು ಸರ್ಕಾರ ನಿರ್ಧರಿಸಿದೆ.

ಆದರೆ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ ಅಂತಹ ಆಲೋಚನೆಗಳಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು. 2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್​ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ತಜ್ಞ ವೈದ್ಯರಾದ ಡಾ.ಎಂ.ಕೆ.ಸುದರ್ಶನ್, ಡಾ.ದೇವಿ ಶೆಟ್ಟಿ, ಡಾ.ಸಿ.ಎನ್.ಮಂಜುನಾಥ್, ವೈರಾಲಜಿಸ್ಟ್ ಡಾ.ರವಿ, ಸಚಿವರಾದ ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹಾಗೂ ತಜ್ಞರು ಭಾಗಿಯಾಗಿದ್ದರು.

ಇದನ್ನೂ ಓದಿ:

School Open: 6ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ: ಸಚಿವ ಆರ್ ಅಶೋಕ್ ಘೋಷಣೆ

2 ಹಂತಗಳಲ್ಲಿ ಸೆಪ್ಟೆಂಬರ್​ನಲ್ಲಿಯೇ ಪ್ರಾಥಮಿಕ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ; ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸೂಚಿಸುವುದೇ ಬಾಕಿ

 

Published On - 10:22 am, Sat, 4 September 21