ತಮಿಳುನಾಡಿನಂತೆ ನಮ್ಮ ರಾಜ್ಯದಲ್ಲೇನೂ ಪೆಟ್ರೋಲ್ ಬೆಲೆ ಕಡಿತ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಪೆಟ್ರೋಲ್ ಬೆಲೆ ತಮಿಳುನಾಡಿನಲ್ಲಿ 3 ರೂಪಾಯಿ ಕಡಿತವಾಗಿರುವ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

ತಮಿಳುನಾಡಿನಂತೆ ನಮ್ಮ ರಾಜ್ಯದಲ್ಲೇನೂ ಪೆಟ್ರೋಲ್ ಬೆಲೆ ಕಡಿತ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: preethi shettigar

Updated on:Aug 17, 2021 | 11:14 AM

ಬೆಂಗಳೂರು: ಪೆಟ್ರೋಲ್ ಬೆಲೆ ತಮಿಳುನಾಡಿನಲ್ಲಿ 3 ರೂಪಾಯಿ ಕಡಿತವಾಗಿರುವ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

ಹೆಬ್ಬಾಳ ವಿಧಾನ ಸಭಾ ಕ್ಷೇತ್ರಕ್ಕೆ ಸಿಎಂ ಭೇಟಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ನೂತನ ಸಿಎಂಗೆ ಭೇಟಿ ಮಾಡಿ ಸನ್ಮಾನ ಮಾಡಿದ್ದಾರೆ. ಮಾಜಿ ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಾರ್ಡ್ ಸದಸ್ಯರು ಸೇರಿದಂತೆ ನೂರಾರು ಕಾರ್ಯಕರ್ತರು ಸಿಎಂ ಸ್ವಗೃಹ ಆರ್.ಟಿ ನಗರದ ಬಳಿ ಬಂದು ಸಿಎಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿರೋದು ತುಂಬಾ ಖುಷಿಯಾಗಿದೆ. ಅವರು ಅಭಿವೃದ್ಧಿ ಕೆಲಸ ಮಾಡ್ತಾರೆ ಅಂತಾ ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಜೈಕಾರ ಹಾಕಿದ್ದಾರೆ.

ಬಿಜೆಪಿ ಕಾರ್ಯಕರ್ತರ ಅಭಿಮಾನಕ್ಕೆ ಸಂತೋಷಪಟ್ಟ ಸಿಎಂ ಬಸವರಾಜ್ ಬೊಮ್ಮಾಯಿ, ಹೆಬ್ಬಾಳ ಕ್ಷೇತ್ರದ ಒಂದು ರಸ್ತೆಯಲ್ಲಿ ಐದು ಜನ ಮುಖ್ಯಮಂತ್ರಿಗಳಾಗಿದ್ದಾರೆ, ನಾನೂ ನಿಮ್ಮಲ್ಲಿ ಒಬ್ಬ ಎಂದಿದ್ದಾರೆ. ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಗರ. ನರೇಂದ್ರ ಮೋದಿ ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕು ಅಂತಾ ತಿಳಿಸಿದ್ದಾರೆ. ಟೂರಿಸಂ, ಕಲ್ಚರ್ ಎಲ್ಲವೂ ಬೆಂಗಳೂರಿಗೆ ಬರಲಿದೆ. ಹೆಬ್ಬಾಳ ಕ್ಷೇತ್ರದ ಇದೇ ರಸ್ತೆಯಲ್ಲಿ ಐದು ಜನ ಮುಖ್ಯಮಂತ್ರಿಗಳಾಗಿದ್ದಾರೆ. ನಂದೂ ಇದೇ ರೆಸಿಡೆನ್ಸಿ ನಾನು ನಿಮ್ಮಲ್ಲಿ ಒಬ್ಬ. ಬರುವಂತಹ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಬರಲಿದೆ. ಹೆಬ್ಬಾಳದ ಎಂಟು ವಾರ್ಡ್ಗಳಲ್ಲೂ ಬಿಜೆಪಿ ಬರಬೇಕು. ಆ ರೀತಿ ಕೆಲಸ ಮಾಡಬೇಕು. ನಿಮ್ಮ ಅಭಿಮಾನಕ್ಕೆ ಚಿರಖುಣಿ ಎಂದ ಹೇಳಿದ್ರು.

ಇವತ್ತು ಹೆಬ್ಬಾಳ ಕ್ಷೇತ್ರದ ಎಲ್ಲಾ ಅಧ್ಯಕ್ಷರು ಪದಾದಿಕಾರಿಗಳು ಮಾಜಿ ಶಾಸಕರು ಬಂದಿದ್ದಾರೆ. ಈ ಕ್ಷೇತ್ರದ ಅಭಿವೃದ್ಧಿಗೆ ನಾನು ಕೂಡ ಸಹಕಾರ ನೀಡುತ್ತೇನೆ. ಇವತ್ತು ಮೂರು ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡ್ತಿದ್ದೇನೆ. ನಾಳೆ ಮೂರು ಇಲಾಖೆಗಳ ಸಭೆಯನ್ನ ಮಾಡ್ತೇನೆ. ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸುತ್ತೇನೆ. ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆ ಮಾಡಬೇಕು. ಸ್ವಾತಂತ್ರ್ಯ ಘೋಷಣೆ ಮಾಡಿದ ಯೋಜನೆಗಳು ಬೇಗ ಅನುಷ್ಠಾನಕ್ಕೆ ಬರಲಿದೆ. ಜನರ ಪರ ಅಧಿಕಾರಿವರ್ಗ ಕೆಲಸ ಮಾಡಲಿದೆ ಎಂದು ಈ ವೇಳೆ ಅವರು ಹೇಳಿದರು.

ಇದನ್ನೂ ಓದಿ: Petrol Price Today: ಒಂದು ತಿಂಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

Published On - 11:10 am, Tue, 17 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್