ಕ್ರಿಸ್​​​ಮಸ್​​, ಹೊಸವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ -BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

| Updated By: Digi Tech Desk

Updated on: Dec 20, 2023 | 3:34 PM

ನಗರದಲ್ಲಿ ಕೊರೊನಾ ಆತಂಕ ಹಿನ್ನೆಲೆ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇತ್ತು. ಆದರೆ ಈ ಬಗ್ಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಳವಾಗಿಲ್ಲ. ಹೀಗಾಗಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಕ್ರಿಸ್​​​ಮಸ್​​, ಹೊಸವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ -BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us on

ಬೆಂಗಳೂರು, ಡಿ.20: ಹೊಸ ವರ್ಷ (New Year) ಹೊಸ್ತಿಲಲ್ಲಿರುವಾಗಲೇ ಮಹಾಮಾರಿ ಕೊರೊನಾ (Coronavirus) ಈಗ ಮತ್ತೆ ತನ್ನ ಆರ್ಭಟ ಶುರು ಮಾಡಿದೆ. ಜಾಗತಿಕವಾಗಿ ಕೊರೊನಾ ಮತ್ತೆ ಅಬ್ಬರಿಸಲು ಕಾಯುತಿದ್ದು, ನೆರೆರಾಜ್ಯ ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಅಲರ್ಟ್ ಆಗಿರುವ ರಾಜ್ಯ ಆರೋಗ್ಯ ಇಲಾಖೆ (Karnataka Health Department) ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಮೇಲಿಂದ ಮೇಲೆ ಸಭೆಗಳನ್ನು ಮಾಡುತ್ತಿದೆ. ಇನ್ನು ಮತ್ತೊಂದೆಡೆ ಹೊಸ ವರ್ಷಾಚರಣೆ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದ್ದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್​ಲೈನ್ಸ್​ ಇರಲ್ಲ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ನಗರದಲ್ಲಿ ಕೊರೊನಾ ಆತಂಕ ಹಿನ್ನೆಲೆ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇತ್ತು. ಆದರೆ ಈ ಬಗ್ಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಳವಾಗಿಲ್ಲ. ಹೀಗಾಗಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ SARI, ILI ಕೇಸ್​ಗಳ ಮೇಲೆ ಬಿಬಿಎಂಪಿ ನಿಗಾವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿ PHC, ನಮ್ಮ ಕ್ಲಿನಿಕ್ ಕೋವಿಡ್ ಸಿದ್ಧತೆಗಳ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ SARI, ILI ಕೇಸ್ ಮೇಲೆ ನಿಗಾ ಇಡಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಂಬಂಧ ಆರೋಗ್ಯಾಧಿಕಾರಿಗಳ ಸಭೆ ನಡೆಸಲು ಸೂಚನೆ ಕೊಟ್ಟಿದೆ. ನ್ಯೂ ಇಯರ್ ಗೆ ಯಾವುದೇ ಪ್ರತ್ಯೇಕ ಗೈಡ್ ಲೈನ್ಸ್ ಇರುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು: ದಿನೇಶ್ ಗುಂಡೂರಾವ್ ಮಾಹಿತಿ

ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟ ಆರೋಗ್ಯ ಇಲಾಖೆ

ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟ ಆರೋಗ್ಯ ಇಲಾಖೆ. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೊವಿಡ್ ಪಾಸಿಟಿವ್ ಬಂದ್ರೆ RTPCR ಪಾಸಿಟಿವ್ ಬಂದ್ರೆ ಜೆನೆಮಿಕ್ ಸೀಕ್ವೆನ್ಸ್ ಗೆ ಸ್ಯಾಂಪಲ್ ಕಳಿಸಲು ಮುಂದಾಗಿದೆ. ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲು ಇಲಾಖೆ ಮುಂದಾಗಿದ್ದು ಅಂತಾರಾಷ್ಟ್ರೀಯ ಪ್ರಯಾಣಿಕರ ಸಿಟಿ ವ್ಯಾಲ್ಯೂ ಹೆಚ್ಚಿದ್ರು ಜೆನೆಮಿಕ್ ಸೀಕ್ವೆನ್ಸ್ ಗೆ ಕಳಿಸಲು ಸೂಚನೆ ನೀಡಿದೆ. ಇನ್ನು ರಾಜ್ಯದಲ್ಲಿ ಕೊವಿಡ್ ಟೆಸ್ಟಿಂಗ್ ಏರಿಕೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಏರಿಕೆ ಮಾಡ್ತೀದೆ. ಬೆಂಗಳೂರಿಗೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಕೊವಿಡ್ ಟೆಸ್ಟಿಂಗ್ ಟಾರ್ಗೇಟ್ ನಿರ್ಧಾರಕ್ಕೆ ಮುಂದಾಗಿದ್ದು ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲು ಮುಂದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:34 pm, Wed, 20 December 23