3ನೇ ಸಿಎಂ ಎಂಬ ಕಾಂಗ್ರೆಸ್ ಟ್ವೀಟ್ನಲ್ಲಿ ಸತ್ಯಾಂಶ ಇಲ್ಲ, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ -ಯಡಿಯೂರಪ್ಪ ಸ್ಪಷ್ಟನೆ
ಕೇವಲ ಏಳೆಂಟು ತಿಂಗಳಿಗೆ ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸಲ್ಲ. ಸಿಎಂ ಬೊಮ್ಮಾಯಿ ಉಳಿದ ಅವಧಿಯನ್ನು ಪೂರೈಸುತ್ತಾರೆ.
ಬೆಂಗಳೂರು: ಇತ್ತೀಚೆಗಷ್ಟೇ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರ ಒಂದು ವರ್ಷ ಪೂರೈಸಿದೆ. ಆದ್ರೆ ಬೊಮ್ಮಾಯಿ ಆಡಳಿತದಲ್ಲಿ ಕಾಂಗ್ರೆಸ್(Congress) ಹೊಸ ಬಾಂಬ್ ಹಾಕಿದೆ. ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರೈಸ್ತಿದ್ದಂತೆ, ಸಿಎಂ ಬದಲಾವಣೆ ಮಾಡಲಾಗುತ್ತೆ ಎಂಬ ಸ್ಫೋಟಕ ಟ್ವೀಟ್ ಮಾಡಿದೆ. ಸದ್ಯ ಈಗ ಇದರದೇ ಚರ್ಚೆ ಜೋರಾಗಿದೆ. ಆದ್ರೆ ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
3ನೇ ಸಿಎಂ ಎಂಬ ಕಾಂಗ್ರೆಸ್ ಟ್ವೀಟ್ನಲ್ಲಿ ಸತ್ಯಾಂಶ ಇಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಬದಲಾವಣೆ ಆದರೆ ಆಗಬಹುದು. ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಕೇವಲ ಏಳೆಂಟು ತಿಂಗಳಿಗೆ ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸಲ್ಲ. ಸಿಎಂ ಬೊಮ್ಮಾಯಿ ಉಳಿದ ಅವಧಿಯನ್ನು ಪೂರೈಸುತ್ತಾರೆ. ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಅನಗತ್ಯ. ಯಾರು ಏನೇ ಹೇಳಿದರೂ ನಾಯಕತ್ವ ಬದಲಾವಣೆ ಇಲ್ಲ. ಅಮಿತ್ ಶಾ ಜೊತೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ. ಅಮಿತ್ ಶಾ ಜೊತೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಿಎಂ ಬೊಮ್ಮಾಯಿ ಪೂರ್ಣಾವಧಿ ಪೂರೈಸುವ ವಿಶ್ವಾಸವಿದೆ. ವದಂತಿಗಳಿಗೆ ಕಿವಿಗೊಡುವ ಅಗತ್ಯ ಇಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶೀಘ್ರವೇ ಸಂಪುಟ ವಿಸ್ತರಣೆ, ಇತರೆ ವಿಚಾರಗಳ ಬಗ್ಗೆ ಸಿಎಂ ಗಮನ ಕೊಡುತ್ತಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ
ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗುತ್ತಿರುವ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಬದಲಾವಣೆ ಆದರೆ ಆಗಬಹುದು. ಯಾರನ್ನು ಮಾಡುತ್ತಾರೆ ಅಂತಾ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮಂತ್ರಾಲಯಕ್ಕೆ ಹೋಗಿ ಬಂದ ಬಳಿಕ ಮುಖಂಡರು ಸೇರಿ ರಾಜ್ಯದಲ್ಲಿ ಪ್ರವಾಸ ಪ್ರಾರಂಭ ಮಾಡುತ್ತೇವೆ. ಯಾವ ಕಾರಣಕ್ಕೂ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು, ಬಿಜೆಪಿ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ. ನೂರಕ್ಕೆ ನೂರು ಸಿಎಂ ಆಗುತ್ತೇನೆ ಅಂತಾ ಭ್ರಮೆಯಲ್ಲಿ ಇರುವವರಿಗೆ ಅವಕಾಶ ಇಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಸಿಎಂ. 135 ಸೀಟು ಗೆದ್ದೇ ಗೆಲ್ಲುತ್ತೇವೆ. ಮೋದಿ, ಶಾ ಸಹಕಾರದಿಂದ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ