ಮುಂದಿನ ಸಂಪುಟದಲ್ಲಿ ಯಡಿಯೂರಪ್ಪ ಪಾತ್ರ ಇರಲ್ಲ. ಇನ್ನು ಮಕ್ಕಳ ಪಾತ್ರ ಎಲ್ಲಿಂದ ಬಂತು?: ಸಂಸದ ಬಿ ವೈ ರಾಘವೇಂದ್ರ

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪರ ಪುತ್ರ, ಸಂಸದ ರಾಘವೇಂದ್ರ.. ಹೊಸ ಸಿಎಂ ಆಯ್ಕೆಯಲ್ಲಿ ಅಚ್ಚರಿ ಆಯ್ಕೆ ಆಗಬಹುದು. ಮಹಾರಾಷ್ಟ್ರ, ಉತ್ತರ ಪ್ರದೇಶ ಮಾದರಿಯಲ್ಲಿ ಫಡ್ನವಿಸ್, ಯೋಗಿ ಮಾದರಿಯಲ್ಲಿ ರಾಜ್ಯದಲ್ಲೂ ಅಚ್ಚರಿ ಆಯ್ಕೆಯಾಗಬಹುದು ಎಂದರು.

ಮುಂದಿನ ಸಂಪುಟದಲ್ಲಿ ಯಡಿಯೂರಪ್ಪ ಪಾತ್ರ ಇರಲ್ಲ. ಇನ್ನು ಮಕ್ಕಳ ಪಾತ್ರ ಎಲ್ಲಿಂದ ಬಂತು?: ಸಂಸದ ಬಿ ವೈ ರಾಘವೇಂದ್ರ
ಸಂಸದ ಬಿ ವೈ ರಾಘವೇಂದ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 27, 2021 | 12:08 PM

ಬೆಂಗಳೂರು: ಆಪರೇಷನ್‌ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನ ಉರುಳಿಸಿ ಪಟ್ಟಕ್ಕೇರಿದ ಬಿ.ಎಸ್‌. ಯಡಿಯೂರಪ್ಪ(BS Yediyurappa) ಎರಡೇ ವರ್ಷದಲ್ಲಿ ಪಟ್ಟದಿಂದ ಕೆಳಗಿಳಿದಿದ್ದಾರೆ. ಬಿಜೆಪಿ ಕಟ್ಟಿ ಬೆಳಸಿದ ರಾಜಾಹುಲಿ ಕಣ್ಣೀರಿನ ಮೂಲಕ ಸಿಎಂ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ. ಸದ್ಯ ಈ ಬಗ್ಗೆ ಸಂಸದ ರಾಘವೇಂದ್ರ( BY Raghavendra) ಪ್ರತಿಕ್ರಿಯೆ ನೀಡಿದ್ದು ಮುಂದಿನ ಸಂಪುಟದಲ್ಲಿ ಯಡಿಯೂರಪ್ಪ ಪಾತ್ರ ಇರಲ್ಲ. ಇನ್ನು ಮಕ್ಕಳ ಪಾತ್ರ ಎಲ್ಲಿಂದ ಬಂತು? ಎಂದಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪರ ಪುತ್ರ, ಸಂಸದ ರಾಘವೇಂದ್ರ.. ಹೊಸ ಸಿಎಂ ಆಯ್ಕೆಯಲ್ಲಿ ಅಚ್ಚರಿ ಆಯ್ಕೆ ಆಗಬಹುದು. ಮಹಾರಾಷ್ಟ್ರ, ಉತ್ತರ ಪ್ರದೇಶ ಮಾದರಿಯಲ್ಲಿ ಫಡ್ನವಿಸ್, ಯೋಗಿ ಮಾದರಿಯಲ್ಲಿ ರಾಜ್ಯದಲ್ಲೂ ಅಚ್ಚರಿ ಆಯ್ಕೆಯಾಗಬಹುದು. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಕ್ಕೆ ಸಂಕಲ್ಪ ಮಾಡಿದ್ದರು. ಅದರಂತೆ ನಿನ್ನೆ ಯಡಿಯೂರಪ್ಪ ರಾಜೀನಾಮೆ ನೀಡಿದರು. ಸಚಿವ ಸಂಪುಟದಲ್ಲಿ ಯಡಿಯೂರಪ್ಪನವರ ಪಾತ್ರವೇ ಇಲ್ಲ. ಇನ್ನು ಅವರ ಮಕ್ಕಳ ಪಾತ್ರ ಎಲ್ಲಿಂದ ಬರುತ್ತೆ. ಬಿ.ವೈ.ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಪಕ್ಷದ ಸೇತುವೆಯಾಗಿ ಕೆಲಸ ಮಾಡುತ್ತಾರೆ ಎಂದು ಕೆಐಎಬಿಯಲ್ಲಿ ಸಂಸದ ರಾಘವೇಂದ್ರ ಹೇಳಿದ್ರು.

ಒಂದೆರಡು ದಿನದಲ್ಲಿ ನೂತನ ನಾಯಕನ ಆಯ್ಕೆ ಮಾಡ್ತಾರೆ: ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಇನ್ನು ಮತ್ತೊಂದೆಡೆ ಮುಂದಿನ ನಾಯಕತ್ವದ ಬಗ್ಗೆ ಬಸವರಾಜ ಬೊಮ್ಮಾಯಿ(Basavaraj Bommai) ಮಾಹಿತಿ ನೀಡಿದ್ದಾರೆ. ಮುಂದಿನ ನಾಯಕತ್ವದ ( Next CM Of Karnataka) ಬಗ್ಗೆ ದೆಹಲಿಯಲ್ಲಿ ಚರ್ಚೆಯಾಗಿರುತ್ತೆ. ಯಾವ ಆಯಾಮದಲ್ಲಿ ಚರ್ಚೆ ಆಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಬೆಂಗಳೂರಲ್ಲಿ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವೀಕ್ಷಕರು ಏನು ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಯಾರನ್ನು ಭೇಟಿಯಾಗಬೇಕೆಂದು ಹೈಕಮಾಂಡ್ ಹೇಳುತ್ತದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುತ್ತೆ. ಬಳಿಕ ಬಿಜೆಪಿ ಕೋರ್ ಕಮಿಟಿ, ಹೈಕಮಾಂಡ್ ಚರ್ಚಿಸುತ್ತೆ. ಆ ಬಳಿಕ ಮುಂದಿನ ಸಿಎಂ ಆಯ್ಕೆ ಮಾಡ್ತಾರೆ. ಒಂದೆರಡು ದಿನದಲ್ಲಿ ನೂತನ ನಾಯಕನ ಆಯ್ಕೆ ಮಾಡ್ತಾರೆ ಎಂದರು.

ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಮ್ಮ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ. ಮುಂದಿನ ಸಿಎಂ ಯಾರೆಂದು ಆಯ್ಕೆಯೇ ಆಗಿಲ್ಲ. ಹೀಗಾಗಿ ಮುಂದಿನ ಸಿಎಂ ಬಗ್ಗೆ ಅವರು ಮಾತನಾಡಬಾರದು ಎಂದು ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: BS Yediyurappa: ಬಿಎಸ್ ಯಡಿಯೂರಪ್ಪ ತಮ್ಮ ವಿದಾಯವನ್ನು ದಕ್ಕಿಸಿಕೊಂಡ ಬಗೆಯೇ ಅಪೂರ್ವ!

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ