AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಸಿಐಡಿ ಪೊಲೀಸರ ತನಿಖೆಯಲ್ಲಿ ಪತ್ತೆಯಾದ ಅಕ್ರಮಗಳಿವು!

ಕೆಎಸ್ಆರ್​ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್​ನನ್ನು ನಿನ್ನೆ ರಾತ್ರಿಯಿಂದ ವಿಚಾರಣೆ ಮಾಡಲಾಗುತ್ತಿದೆ. ರುದ್ರಗೌಡ ಜತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತನಿಖೆ ನಡೆಯುತ್ತಿದೆ.

PSI Recruitment Scam: ಸಿಐಡಿ ಪೊಲೀಸರ ತನಿಖೆಯಲ್ಲಿ ಪತ್ತೆಯಾದ ಅಕ್ರಮಗಳಿವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 07, 2022 | 8:46 AM

Share

ಬೆಂಗಳೂರು: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆಯನ್ನ ಸಿಐಡಿ ಪೊಲೀಸರು (CID Police) ಚುರುಕುಗೊಳಿಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ಮಾಡಿ ಆರೋಪಿಗಳನ್ನ ಬಂಧಿಸುತ್ತಿದ್ದಾರೆ. ತನಿಖೆ ಹೆಚ್ಚಾದಂತೆ ಒಂದೊಂದು ಅಕ್ರಮ ಬೆಳಕಿಗೆ ಬರುತ್ತಿದೆ. ಕೆಎಸ್ಆರ್​ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್​ನನ್ನು ನಿನ್ನೆ ರಾತ್ರಿಯಿಂದ ವಿಚಾರಣೆ ಮಾಡಲಾಗುತ್ತಿದೆ. ರುದ್ರಗೌಡ ಜತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತನಿಖೆ ನಡೆಯುತ್ತಿದೆ. ಸದ್ಯ ಸಿಐಡಿ ತನಿಖೆಯಲ್ಲಿ ಪತ್ತೆಯಾದ ಅಕ್ರಮಗಳ ಬಗ್ಗೆ ತನಿಖಾ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

1. ಬ್ಲೂಟೂತ್ ಬಳಕೆ ಮಾಡಿ ಎಕ್ಸಾಂ ಬರೆದಿದ್ದಾರೆ. 2. ಒಎಂಆರ್ ಪ್ರತಿಯನ್ನ ಎಕ್ಸಾಂ ಸೆಂಟರ್​ನಲ್ಲಿ ತಿದ್ದುಪಡಿ ಮಾಡಿದ್ದಾರೆ. 3. ನೇಮಕಾತಿ ವಿಭಾಗದಲ್ಲಿ ಒಎಂಆರ್ ಪ್ರತಿಯಲ್ಲಿ ಅಕ್ರಮ ತಿದ್ದುಪಡಿ ಮಾಡಿದ್ದಾರೆ. 4. ಸೀಟಿಂಗ್ ವ್ಯವಸ್ಥೆ ಮಾಡಿ ಅಕ್ರಮ ಎಸಗಿ ಬರೆಯಲಾಗಿದೆ. 5. ಫಿಸಿಕಲ್ ವೇಳೆ ಹಣ ನೀಡಿ ಅಕ್ರಮ ಎಸಗಿದ್ದಾರೆ. 6. ಸಂಪೂರ್ಣ ಹುದ್ದೆಯನ್ನು ಡೀಲ್ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. 7. ಮೊದಲ ಪ್ರಶ್ನೆ ಪತ್ರಿಕೆ ಡೀಲ್ ಮಾಡಿ ಬರೆಯಲಾಗಿದೆ. 8. ಎರಡನೆ ಪ್ರಶ್ನೆ ಪತ್ರಿಕೆ ಡೀಲ್ ಮಾಡಿ ಪರೀಕ್ಷೆ ಬರೆಯಲಾಗಿದೆ. 9. ಎಕ್ಸಾಂ ಸೆಂಟರ್ ಬುಕ್ ಮಾಡಿ ಅಕ್ರಮ ಎಸಗಿರುವುದು ಪತ್ತೆಯಾಗಿದೆ.

ಕೆಲವರ ಪತ್ತೆಗೆ ಮುಂದಾಗಿರುವ ಸಿಐಡಿ ಅಧಿಕಾರಿಗಳು: ಇನ್ನೂ ಕೆಲವರ ಪತ್ತೆಗೆ ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ. ಬಂಧನದ ಭೀತಿಯಿಂದ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿಐಡಿ ತಂಡ ಬಂದಿರುವ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಮರಳು ಮಾಫಿಯಾ ನಂಟು: ಬಂಧಿತ ಬೆರಳಚ್ಚು ವಿಭಾಗದ ಸಿಪಿಐ ಆನಂದ್​ಗೆ ಮರಳು ಮಾಫಿಯಾದ ನಂಟು ಇದೆ ಎಂದು ಹೇಳಲಾಗುತ್ತಿದೆ. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಭೀಮಾ ನದಿಯಲ್ಲಿನ ಮರಳು ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಜೊತೆ ಸಂಪರ್ಕ ಹೊಂದಿದ್ದಾನೆ. ಅನೇಕ ಅಕ್ರಮ ಮರಳುಗಳ್ಳರಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಇದೆ.

ಇದನ್ನೂ ಓದಿ

ಖ್ಯಾತ ನಟ ಮೋಹನ್​ ಜುನೇಜ ನಿಧನ; ‘ಕೆಜಿಎಫ್​’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

Published On - 8:41 am, Sat, 7 May 22

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?