AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಮರಗಳ ಮಾರಣಹೋಮಕ್ಕೆ ಸಜ್ಜಾದ ಸರ್ಕಾರ?: ಪರಿಸರ ವಾದಿಗಳಿಂದ ತೀವ್ರ ವಿರೋಧ

ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದ ಮೈಸೂರು ಲ್ಯಾಂಪ್ಸ್​ ಆವರಣದಲ್ಲಿ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸಾವಿರಾರು ಮರಗಳನ್ನು ಕಡಿಯುವ ನಿರ್ಧಾರದ ಬಗ್ಗೆ ಸುದ್ದಿಯಾಗಿರುವ ಹಿನ್ನೆಲೆ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಹವಾಮಾನ ಬದಲಾವಣೆ ಸಂಕಷ್ಟದಲ್ಲಿರುವ ಬೆಂಗಳೂರು, ಇನ್ನಷ್ಟು ಮರ ಕಳೆದುಕೊಂಡರೆ ಪರಿಸರ ಸಮತೋಲನ ಹಾಳಾಗಿ ತಾಪಮಾನ ಹೆಚ್ಚಳವಾಗುತ್ತದೆ ಎಂಬ ಆತಂಕ ವ್ಯಕ್ತವಾಗಿದೆ.

ಸಾವಿರಾರು ಮರಗಳ ಮಾರಣಹೋಮಕ್ಕೆ ಸಜ್ಜಾದ ಸರ್ಕಾರ?: ಪರಿಸರ ವಾದಿಗಳಿಂದ ತೀವ್ರ ವಿರೋಧ
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on:Mar 09, 2026 | 3:44 PM

Share

ಬೆಂಗಳೂರು, ಮಾರ್ಚ್​ 09: ಅಭಿವೃದ್ಧಿಯ ಹೆಸರಲ್ಲಿ ಪರಿಸರದ ನಾಶದಿಂದಾಗಿ ಪ್ರಾಕೃತಿಕ ಸಮತೋಲನ ಹಾಳಾಗಿ ಈಗಾಗಲೇ ಸಾಲು ಸಾಲು ಸಂಕಷ್ಟಗಳನ್ನು ಜನ ಅನುಭವಿಸುತ್ತಿದ್ದಾರೆ. ಪರಿಸರವನ್ನು ಉಳಿಸುವ ಸಲುವಾಗಿ ಅದೆಷ್ಟೋ ಸಂಘ-ಸಂಸ್ಥೆಗಳು ಗಿಡಗಳನ್ನು ನೆಡುವ ಜೊತೆಗೆ ಪರಿಣಾಮಕಾರಿ ಕೆಲಸಗಳನ್ನು ಮಾಡುತ್ತಿವೆ. ಪರಿಸರ ನಾಶದಿಂದ ಉಂಟಾಗುತ್ತಿರುವ ಅನಾಹುತಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಕೈಹಾಕಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಅಂತಾರಾಷ್ಟ್ರೀಯ ಕನ್ವೆನ್ಷನ್ ಹಾಲ್ ಹೆಸರಲ್ಲಿ ಸಾವಿರಾರು ಮರಗಳ ಮಾರಾಣಹೋಮಕ್ಕೆ ಸರ್ಕಾರ ಸಜ್ಜಾಗಿದೆ ಎಂಬ ವಿಚಾರ ಹರಿದಾಡಿದ್ದು, ಈ ಬಗ್ಗೆ ಪರಿಸರ ಪ್ರಿಯರಿಂದ ಭಾರಿ ವಿರೋಧ ಕೇಳಿಬಂದಿದೆ.

ಮಲ್ಲೇಶ್ವರದಲ್ಲಿರುವ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ ಆವರಣದ 22 ಎಕರೆ ಜಾಗದಲ್ಲಿ ಕನ್ವೆನ್ಶನ್ ಸೆಂಟರ್ ಮತ್ತು ಎಕ್ಸಿಬಿಷನ್ ಸೆಂಟರ್ ನಿರ್ಮಿಸುವ ಬಗ್ಗೆ ಬಜೆಟ್​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ಹಲವು ವರ್ಷಗಳಿಂದ ಈ ಕಾರ್ಖಾನೆಯ ಕೆಲಸ ಸ್ಥಗಿತಗೊಂಡಿದೆ. ಸದ್ಯ ಈ ಕಾರ್ಖಾನೆ ಪ್ಲಾಂಟೆಷನ್ ತುಂಬೆಲ್ಲ ಸಾವಿರಾರು ಮರಗಳಿದ್ದು, ಇವುಗಳನ್ನ‌ ಕಡಿದು ಆ ಜಾಗದಲ್ಲಿ 10 ಸಾವಿರ ಜನರಿಗೆ ವ್ಯವಸ್ಥೆಯಾಗುವಂತೆ ಅಂತಾರಾಷ್ಟ್ರೀಯ ಕನ್ಷೆಷನ್ ಸೆಂಟರ್, ಎಕ್ಸಿಬಿಷನ್ ಸೆಂಟರ್, 5 ಸ್ಟಾರ್ ಹೊಟೇಲ್‌ಗಳು, ಮಲ್ಟಿಪ್ಲೆಕ್ಸ್ ಹಾಲ್ ಮತ್ತು 50 ವರ್ಷ ಬಾಳಿಕೆ ಬರುವ ಅಂಡರ್ ಗ್ರೌಂಡ್ ಪಾರ್ಕಿಂಗ್ ಮಾಡಲು ನಿರ್ಧಾರ ಮಾಡಲಾಗಿದೆ. ಬೇರೆ ದೇಶದ ಗಣ್ಯರು ಬಂದ್ರೆ ಉಳಿದುಕೊಳ್ಳಲು ವ್ಯವಸ್ಥೆಯಾಗುವ ರೀತಿ ಯೋಜನೆ ನಿರ್ಮಿಸಲು ಪ್ಲ್ಯಾನ್ ನಡೆದಿದೆ.

ಇದನ್ನೂ ಓದಿ: ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಆದರೆ ಅಂತಾರಾಷ್ಟ್ರೀಯ ಕನ್ವೆನ್ಷನ್ ಹಾಲ್ ಹೆಸರಲ್ಲಿ ಮರಗಳ ಮಾರಣ ಹೋಮಕ್ಕೆ ಪರಿಸರವಾದಿ ಜೋಸೆಫ್ ಆಕ್ಷೇಪ ವ್ಯಕ್ತಪಡಿಸಿದ್ದು, ದಯವಿಟ್ಟು ಮರಗಳನ್ನು ಕಡಿಯೋದನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಈಗಾಗಲೇ ಶೇ. 93ರಷ್ಟು ಮರಗಳನ್ನು ಕಡಿದು ಹಾಕಿದ್ದೇವೆ. ನಗರದಲ್ಲಿ ಈಗಾಗಲೇ ಮರಗಳ ಸಂಖ್ಯೆ ಸಹ ಕಡಿಮೆಯಾಗಿದೆ. ಕೆರೆಗಳ ನಿರ್ವಹಣೆ ಇಲ್ಲದೆ ಬೆಂಗಳೂರು ಡೆಡ್ ಸಿಟಿ ಆಗಿದೆ. ಇದರ ಜೊತೆಗೆ ಮತ್ತೆ ಸರ್ಕಾರ ಮರಗಳಿಗೆ ಕೊಡಲಿ ಹಾಕಿ ಬಿಲ್ಡಿಂಗ್ ಕಟ್ಟಲು ಮುಂದಾಗ್ತಿದೆ. ಈಗಾಗಲೇ ದೆಹಲಿಯನ್ನು ಮೀರಿಸುವ ಮಟ್ಟದಲ್ಲಿ ಬೆಂಗಳೂರು ವಾತಾವರಣ ಬದಲಾವಣೆ ಆಗಿದೆ. ಉಸಿರಾಟದ ತೊಂದರೆಗಳು, ತಾಪಮಾನದಲ್ಲಿ ಬದಲಾವಣೆ ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಅಭಿವೃದ್ಧಿ ಹೆಸರಿನಲ್ಲಿ ಮರಗಳಿಗೆ ಕೊಡಲಿ ಹಾಕೋದು ತಪ್ಪು ಎಂದು ಅವರು ತಿಳಿಸಿದ್ದಾರೆ.

ವರದಿ: ಅರುಣ್​​ ಕುಮಾರ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:44 pm, Mon, 9 March 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!