ಆನೇಕಲ್​​ ಬಳಿ ಬಸ್ಸನ್ನೇ ಕದಿಯಲು ಹೋದ ಕುಡುಕರು: ಮುಂದಾಗಿದ್ದು ಅನಾಹುತ

ಕುಡಿದ ಮತ್ತಿನಲ್ಲಿ ಬಸ್ ಕದಿಯಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಬಸ್​​​ ಅಪಘಾತವಾಗಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಮುಂಭಾಗ ಜಖಂಗೊಂಡಿದ್ದು, ರಾತ್ರಿ ವೇಳೆ ಅಪಘಾತ ನಡೆದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಪ್ರಕರಣ ಸಂಬಂಧ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂವರು ತಪ್ಪಿಸಿಕೊಂಡು ಎಸ್ಕೇಪ್​​ ಆಗಿದ್ದಾರೆ.

ಆನೇಕಲ್​​ ಬಳಿ ಬಸ್ಸನ್ನೇ ಕದಿಯಲು ಹೋದ ಕುಡುಕರು: ಮುಂದಾಗಿದ್ದು ಅನಾಹುತ
ಅಪಘಾತವಾದ ಬಸ್​​
Updated By: ಪ್ರಸನ್ನ ಹೆಗಡೆ

Updated on: Dec 14, 2025 | 10:09 AM

ಆನೇಕಲ್​​, ಡಿಸೆಂಬರ್​​ 14: ಕುಡಿದ ಮತ್ತಿನಲ್ಲಿ ಬಸ್ ಕದ್ದು ಎಸ್ಕೇಪ್ ಆಗಲು ಯತ್ನಿಸಿದ್ದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್​​ ಕಂಬಗಳಿಗೆ ಬಸ್ ಡಿಕ್ಕಿಯಾಗಿರುವ ಘಟನೆ ನಿನ್ನೆ ರಾತ್ರಿ ​​ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​​ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ ಕಡಿಮೆ ಇದ್ದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ಓರ್ವನಿಗೆ ಥಳಿತ, ಮೂವರು ಎಸ್ಕೇಪ್​​

ಎಂದಿನಂತೆ ಥಳಿ ರಸ್ತೆ ಬದಿ ಬಸ್ ಪಾರ್ಕ್ ಮಾಡಿ ಚಾಲಕ ಹೋಗಿದ್ದು, ಈ ವೇಳೆ ಕುಡಿದ ಮತ್ತಿನಲ್ಲಿ ಬಂದ ನಾಲ್ವರು ಅಸಾಮಿಗಳು ಬಸ್ಸಿನ ವೈರ್ ಕಟ್ ಮಾಡಿ ಕದ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ ನಿಯಂತ್ರಣ ಕಳೆದುಕೊಂಡ ಬಸ್​​ ಎರಡು ವಿದ್ಯುತ್​​ ಕಂಬಗಳು ಮತ್ತು ರಸ್ತೆಬಿದಿ ನಡೆದು ಹೋಗುತ್ತಿದ್ದ ವ್ಯಕ್ತಿಗೂ ಗುದ್ದಿದೆ. ಕೂಡಲೇ ಸಾರ್ವಜನಿಕರು ಬಸ್ ತಡೆದು ನಿಲ್ಲಿಸಿದ್ದು, ಈ ವೇಳೆ ಮೂವರು ಎಸ್ಕೇಪ್ ಆಗಿದ್ದಾರೆ. ಸಿಕ್ಕಿಬಿದ್ದ ಓರ್ವನನ್ನು ಥಳಿಸಲಾಗಿದ್ದು, ಬಳಿಕ ಆರೋಪಿಯನ್ನ ಆನೇಕಲ್ ಪೊಲೀಸರ ವಶಕ್ಕೆ ನೀಡಲಾಗಿದೆ

ಇದನ್ನೂ ಓದಿ: ಹೊಸ ವರ್ಷಕ್ಕೆ ಕೌಂಟ್​​​​ಡೌನ್​​; ಬೆಂಗಳೂರಲ್ಲಿ ಅದಾಗಲೇ ಫೀಲ್ಡ್​​ಗೆ ಇಳಿದಿದ್ದೇಕೆ ಖಾಕಿ?

ಬಸ್​​ ಅಡ್ಡಗಟ್ಟಿ ಪ್ರಯಾಣಿಕನ ಮೇಲೆ ಹಲ್ಲೆ: ಇಬ್ಬರ ಬಂಧನ

ಖಾಸಗಿ ಬಸ್ ಅಡ್ಡಗಟ್ಟಿ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿಯ ಕಮ್ಮಸಂದ್ರ ನಿವಾಸಿಗಳಾದ ಚರಣ್ ಮತ್ತು ಮದನ್ ಬಂಧಿತ ಆರೋಪಿಗಳು. ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್ ಒಳಗೆ ವ್ಹೀಲಿಂಗ್ ಮಾಡಿಕೊಂಡು ಬಂದಿದ್ದ ಆರೋಪಿಗಳು, ಬಸ್ಸಿಗೆ ನುಗ್ಗಿ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ನಡೆಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ದೃಶ್ಯ ವೈರಲ್ ಆಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:04 am, Sun, 14 December 25