ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ, ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ

ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ 5ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೇ ಏರಿಯಾದ ಮೂವರು ಪುಂಡರು ಗಾಂಜಾ ನಶೆಯಲ್ಲಿ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ, ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ
ದೊಣ್ಣೆ ಹಿಡಿದು ಪುಂಡರ ಅಟ್ಟಹಾಸ

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡನೋರ್ವನ ಅಟ್ಟಹಾಸಕ್ಕೆ 5 ವಾಹನಗಳು ಜಖಂ ಆಗಿದ್ದ ಘಟನೆ ನಡೆದಿತ್ತು. ಹುಡುಗಿ ಕೈ ಕೊಟ್ಳು ಅಂತ ಕುಡಿದ ಮತ್ತಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿ ಯುವಕನೋರ್ವ ವಿಕೃತಿ ಮೆರೆದಿದ್ದ. ಅದರಂತೆ ಮತ್ತೊಂದು ಘಟನೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಪುಂಡರು ಬೆಂಗಳೂರಿನಲ್ಲಿ ಅಟ್ಟಹಾಸ ಮೆರೆದಿದ್ದಾರೆ.

ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ 5ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೇ ಏರಿಯಾದ ಮೂವರು ಪುಂಡರು ಗಾಂಜಾ ನಶೆಯಲ್ಲಿ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ. ಸ್ಥಳೀಯರ ವಿರೋಧ ಹಿನ್ನೆಲೆ ಕಲ್ಲುತೂರಿ ಪುಂಡರು ಪರಾರಿಯಾಗಿದ್ದಾರೆ. ಪುಂಡರ ಅಟ್ಟಹಾಸದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಡವರ ಕಾರುಗಳ ಗಾಜು ಪುಡಿ ಪುಡಿ