AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ: ಘಟನೆಯ ಸ್ಫೋಟಕ ಅಂಶ ಬಿಚ್ಚಿಟ್ಟ ಅರಣ್ಯ ಸಚಿವ ರಾಮಲಿಂಗಾರೆಡ್ಡಿ

Forest Staff Shootout: ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಜಿಂಕೆ ಬೇಟೆಗಾರರು ಬಲಿಯಾಗಿದ್ದು, ಈ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿಗಳು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಮಧ್ಯಂತರ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ: ಘಟನೆಯ ಸ್ಫೋಟಕ ಅಂಶ ಬಿಚ್ಚಿಟ್ಟ ಅರಣ್ಯ ಸಚಿವ ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿImage Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on:Aug 15, 2026 | 4:50 PM

Share

ಬೆಂಗಳೂರು, ಆಗಸ್ಟ್​​ 15: ಚಾಮರಾಜನಗರದಲ್ಲಿ (chamarajanagar) ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಬಲಿಯಾಗಿದ್ದಾರೆ. ಹನೂರು ತಾಲೂಕಿನ ಹೊಳೆದಟ್ಟಿ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ, ಮೂವರು ಸಾವನ್ನಪ್ಪಿದ್ದು (death), ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಸಿಎಂ ಡಿಕೆ ಶಿವಕುಮಾರ್​ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಸಮಗ್ರ ತನಿಖೆಯ ಬಳಿಕವೇ ಸಂಪೂರ್ಣ ಸತ್ಯಾಂಶ ಹೊರಬರಲಿದೆ’ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.

ವರದಿ ಕೈಸೇರಿದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಕ್ರಮ: ರಾಮಲಿಂಗಾರೆಡ್ಡಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಘಟನೆಯ ಸ್ಫೋಟಕ ಅಂಶ ಬಿಚ್ಚಿಟ್ಟಿದ್ದಾರೆ. ‘ಬೆಳಗ್ಗೆ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ನನಗೆ ಘಟನೆಯ ಮಾಹಿತಿ ಲಭಿಸಿತು. ನಾಲ್ವರು ನಾಡಬಂದೂಕು ಹಿಡಿದು ಇಡೀ ರಾತ್ರಿ ಪ್ರಾಣಿಗಳನ್ನು ಬೇಟೆಯಾಡಿ, ಜಿಂಕೆ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಶೇಖರಪ್ಪ, ರೋಹಿತ್ ಹಾಗೂ ಶಿವರಾಜ್ ಅವರನ್ನು ತಡೆದಿದ್ದಾರೆ’ ಎಂದರು.

ಎರಡೂ ಕಡೆಯಿಂದ ಫೈರಿಂಗ್

ಇನ್ನು ಈ ವೇಳೆ ‘ಬೇಟೆಗಾರರ ಬಳಿ‌ ಎರಡು ಲೈಸೆನ್ಸ್ ಇಲ್ಲದ ನಾಡಬಂದೂಕು ಇತ್ತು. ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಈ ಹಂತದಲ್ಲಿ ಎರಡೂ ಕಡೆಯ ನಡುವೆ ಫೈರಿಂಗ್ ನಡೆದಿದ್ದು, ಅಂಟೋನಿಸ್ವಾಮಿ, ಜಾನ್ ಪೀಟರ್ ಹಾಗೂ ಸವಾರಿಯಪ್ಪನ್ ಎಂಬುವವರು ಮೃತಪಟ್ಟಿದ್ದಾರೆ. ಮಹಿಮ್ ದಾಸ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಗ್ರಾಮದ ಜನರು ಹೇಳುವುದು ಬೇರೆ ಇದೆ. ನಾಲ್ಕು ಬ್ಯಾಗ್ ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಚಾಮರಾಜನಗರ ಅರಣ್ಯದಲ್ಲಿ ಎನ್‌ಕೌಂಟರ್: ಮೂವರು ಬಲಿ, DRFO ಕಚೇರಿ ಧ್ವಂಸ

‘ಇನ್ನು ಪ್ರಕರಣದ ಮಧ್ಯಂತರ ತನಿಖಾ ವರದಿ ಕೈಸೇರಿದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ನಿರ್ಧರಿಸಲಾಗುವುದು. ಹಾಗೆಯೇ ತನಿಖಾ ವರದಿಯ ಆಧಾರದ ಮೇಲೆ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವಾಗಿಯೂ ಚರ್ಚೆ ನಡೆಸಲಾಗುವುದು’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Sat, 15 August 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು