ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು ಮಳೆImage Credit source: Sky Meter
Follow us
TV9 Web
| Updated By: sandhya thejappa

Updated on:May 21, 2022 | 9:23 AM

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇನ್ನೂ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯಾಗುವ (Bengaluru Rains) ಸಾಧ್ಯತೆಯಿದೆ. ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಂದು ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪ್ರತಿದಿನ ಮಳೆಯಾಗುತ್ತಿರುವುದರಿಂದ ಉಷ್ಣತೆ ಇಳಿಕೆಯಾಗುತ್ತಿದೆ. ಬೇಸಿಗೆಯಲ್ಲಿ 40 ಡಿಗ್ರಿಗಿಂತ ಹೆಚ್ಚು ತಾಪ ಕಾಣುತ್ತಿದ್ದ ಕಲಬುರಗಿಯಲ್ಲಿ ಗರಿಷ್ಠ 35.5 ಡಿಗ್ರಿ ಸೆಲ್ಸಿಯಸ್‌ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ  ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಆದರೂ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ಇದನ್ನೂ ಓದಿ
Image
ಮಾಂಸದೂಟ, ಗೋರಿ ಪೂಜೆ ಬಳಿಕ ದತ್ತಾತ್ರೇಯ ಪೀಠದಲ್ಲಿ ಮತ್ತೊಂದು ವಿವಾದ: ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
Image
Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
Image
ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ
Image
PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ಇದನ್ನೂ ಓದಿ: ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ

ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 21 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ