ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇನ್ನೂ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯಾಗುವ (Bengaluru Rains) ಸಾಧ್ಯತೆಯಿದೆ. ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಂದು ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರತಿದಿನ ಮಳೆಯಾಗುತ್ತಿರುವುದರಿಂದ ಉಷ್ಣತೆ ಇಳಿಕೆಯಾಗುತ್ತಿದೆ. ಬೇಸಿಗೆಯಲ್ಲಿ 40 ಡಿಗ್ರಿಗಿಂತ ಹೆಚ್ಚು ತಾಪ ಕಾಣುತ್ತಿದ್ದ ಕಲಬುರಗಿಯಲ್ಲಿ ಗರಿಷ್ಠ 35.5 ಡಿಗ್ರಿ ಸೆಲ್ಸಿಯಸ್ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಆದರೂ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.
ಇದನ್ನೂ ಓದಿ: ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್ಗೆ ಹೋಗ್ತಾರಾ ಕಂಗನಾ? ಖಡಕ್ ಉತ್ತರ ನೀಡಿದ ‘ಧಾಕಡ್’ ನಟಿ
ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:18 am, Sat, 21 May 22