Bengaluru: ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು; ಕಾರಿನ ಗಾಜು ಒಡೆದುಹಾಕಿ ಪರಾರಿ

ಬೆಂಗಳೂರಿನಲ್ಲಿ ಪುಂಡರ ಗ್ಯಾಂಗ್​​​ ಅಟ್ಟಹಾಸ ಮುಂದುವರಿದಿದೆ. ಪೊಲೀಸರ ಭಯವಿಲ್ಲದಂತೆ ವರ್ತಿಸುತ್ತಿದ್ದು, ಇತ್ತೀಚಿಗೆ ವಿಲೀಂಗ್​ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರು. ಇದೀಗ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ, ಚಾಲಕನ ಮೇಲೆ ದರ್ಪ ತೋರಿದ ಘಟನೆ ನಡೆದಿದೆ.

Bengaluru: ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು; ಕಾರಿನ ಗಾಜು ಒಡೆದುಹಾಕಿ ಪರಾರಿ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 7:11 AM

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರ ಗ್ಯಾಂಗ್​​​ ಅಟ್ಟಹಾಸ ಮುಂದುವರಿದಿದೆ. ಪೊಲೀಸರ ಭಯವಿಲ್ಲದಂತೆ ವರ್ತಿಸುತ್ತಿದ್ದು, ಇತ್ತೀಚಿಗೆ ವಿಲೀಂಗ್​ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರು. ಇದೀಗ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ, ಚಾಲಕನ ಮೇಲೆ ದರ್ಪ ತೋರಿದ ಘಟನೆ ಇಂದು(ಜು.14) ರಾತ್ರಿ 2.30 ರ ಸಮಯದಲ್ಲಿ ವರ್ತೂರು(Varthur) ಬಳಿ ನಡೆದಿದೆ. ಹೌದು ರಸ್ತೆಯಲ್ಲಿ 3-4 ಬೈಕ್​​ ಸವಾರರು ಸೇರಿ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದರು. ಈ ವೇಳೆ ಕಾರು ಚಾಲಕ ದಾರಿ ಬಿಡುವಂತೆ ಹಿಂಬದಿಯಿಂದ ಹಾರ್ನ್ ಮಾಡಿದ್ದಾನೆ. ಇದಕ್ಕೆ ರೊಚ್ಚಿಗೆದ್ದ ಪುಂಡರು ಬೈಕ್ ನಿಲ್ಲಿಸಿ ಬಂದು ಚಾಲಕನ ಜತೆ ಗಲಾಟೆ ಮಾಡಿದ್ದಾರೆ.

ಕಾರಿನ ಗಾಜು ಒಡೆದುಹಾಕಿ ಪರಾರಿಯಾಗಿರುವ ಕಿಡಿಗೇಡಿಗಳು

ಇದೇ ವೇಳೆ ಮತ್ತೊಬ್ಬ ಪುಂಡ ಕಾರಿಗೆ ಬೈಕ್​​ನಿಂದ ಡಿಕ್ಕಿ ಹೊಡೆದು, ನಂತರ ಕಾರು ಫಾಲೋ ಮಾಡಿಕೊಂಡು ಬಂದಿದ್ದಾರೆ. ಗುಂಜೂರು ಗೇಟ್​​ನ ಅಪಾರ್ಟ್‌ಮೆಂಟ್ ಬಳಿ ಚಾಲಕನ ಜೊತೆ ಮತ್ತೆ ಗಲಾಟೆ ಶುರು ಮಾಡಿದ್ದು, ಕಾರಿನ ಗಾಜು ಒಡೆದಾಕಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಇನ್ನು ಕಿಡಿಗೇಡಿಗಳು ನಡೆಸಿರುವ ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪುಂಡರ ಕೃತ್ಯದ ಬಗ್ಗೆ ಚಾಲಕ ಟ್ವೀಟ್​ ಮೂಲಕ ದೂರು ನೀಡಿದ್ದಾನೆ.

ಇದನ್ನೂ ಓದಿ:ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬಿಬಿಎಂಪಿ ಕಸದ ಆಟೋ ಚಾಲಕನ ಮೇಲೆ ಮನಸೋ ಇಚ್ಚೆ ಥಳಿಸಿ ಹಲ್ಲೆ

ಓರ್ವನ ಜೊತೆಗೆ ಮತ್ತೆ ಮೂವರು ಜಮಾಯಿಸಿ ಗಲಾಟೆ

ಇನ್ನು ಹಾರ್ನ್ ಮಾಡಿದ್ದಕ್ಕೆ ನಡುರಸ್ತೆಯಲ್ಲಿ ಬೈಕ್ ನಿಲ್ಲಿಸಿ ಓರ್ವ ಅಸಾಮಿ ಬಂದಿದ್ದಾನೆ. ಇದಾದ ಬಳಿಕ ಆತನ ಜೊತೆಗೆ ಮತ್ತೆ ಮೂವರು ಜಮಾಯಿಸಿ ಕಾರು ಚಾಲಕನ ಮುಂದೆ ದರ್ಪ ತೋರಿದ್ದಾರೆ. ಅಷ್ಟೇ ಅಲ್ಲದೇ ಮತ್ತೊರ್ವ ಬೈಕ್​ನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಅಪಾರ್ಟ್‌ಮೆಂಟ್​ವರೆಗೂ ಕಾರು ಫಾಲೋ ಮಾಡಿಕೊಂಡು ಬಂದ ಗ್ಯಾಂಗ್ ಅಲ್ಲಿಯೂ ಕಾರು ಜಗಳಕ್ಕೀಳಿದು ಕಾರಿನ ಗಾಜು ಒಡೆದು ಪುಂಡಾಟ ಮೆರೆದಿದ್ದಾರೆ. ಆದಷ್ಡು ಬೇಗ ಪೊಲೀಸರು ಈ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ