ಬೆಂಗಳೂರು: ಹಬ್ಬದ ದಿನಗಳಲ್ಲಿ ಟಿಕೆಟ್ ದರ ಹೆಚ್ಚಳ; ಖಾಸಗಿ ಬಸ್ ಮಾಲೀಕರು, ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಖಡಕ್ ಎಚ್ಚರಿಕೆ
ಹೆಚ್ಚಿನ ಟಿಕೆಟ್ ದರ ಪ್ರಕರಣಗಳು ಕಂಡುಬಂದಲ್ಲಿ, ವಾಹನ ಮಾಲೀಕರ ಹಾಗೂ ಆನ್ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸಾರಿಗೆ ಇಲಾಖೆಯ ಆಯುಕ್ತ ಯೋಗಿಶ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಸೆ.13: ಹಬ್ಬ ಹರಿದಿನಗಳಲ್ಲಿ, ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ (Ticket price) ವಸೂಲಿ ಮಾಡುತ್ತಿರುವ ಖಾಸಗಿ ಬಸ್ ಮಾಲೀಕರಿಗೆ ಹಾಗೂ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತ ಯೋಗಿಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು, ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುತ್ತಿರುವ ಬಗ್ಗೆ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಇಂತಹ ಪ್ರಕರಣಗಳು ಕಂಡುಬಂದಲ್ಲಿ ಪ್ರಕರಣ ದಾಖಲು
ಜೊತೆಗೆ ಪ್ರಯಾಣಿಕರ ವಾಹನಗಳಲ್ಲಿ ಇತರೆ ಸರಕುಗಳನ್ನು ಅನಧಿಕೃತವಾಗಿ ಸಾಗಿಸದಿರಲು ತಿಳಿಸಲಾಗಿದೆ. ಮುಂದುವರೆದು ಇಂತಹ ಪ್ರಕರಣಗಳು ಕಂಡುಬಂದಲ್ಲಿ, ವಾಹನ ಮಾಲೀಕರ ಹಾಗೂ ಆನ್ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸಾರಿಗೆ ಇಲಾಖೆಯ ಆಯುಕ್ತ ಯೋಗಿಶ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ
ಹಬ್ಬದ ದಿನಗಳಲ್ಲಿ ಎರುವ ಟಿಕೆಟ್ ದರ
ಹೌದು, ದೀಪಾವಳಿ, ಗಣೇಶ ಚತುರ್ಥಿ, ದಸರಾ ಸೇರಿದಂತೆ ಇನ್ನೀತರ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಇನ್ನೀತರ ಪ್ರದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದಿನನಿತ್ಯ ಇರುವ ದರಕ್ಕಿಂತ ಹೆಚ್ಚುವರಿ ದರವನ್ನು ನಿಗದಿಪಡಿಸಲಾಗುತ್ತಿತ್ತು. ಈ ಹಿಂದೆ ಸಾರಿಗೆ ಸಚಿವರಾಗಿದ್ದ ಶ್ರೀರಾಮುಲು ಈ ಕುರಿತು ಮಾತನಾಡಿ ‘ಇಂತಹ ಘಟನೆಗಳು ನಡೆದಲ್ಲಿ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ಖಾಸಗಿ ಬಸ್ ಮಾಲೀಕರಿಗೆ ವಾರ್ನಿಂಗ್ ನೀಡಿದ್ದರು. ಇದೀಗ ಮುಂದೆ ದಸರಾ, ಗಣೇಶನ ಹಬ್ಬವಿರುವ ಹಿನ್ನಲೆ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತ ಯೋಗಿಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ