ಟಿಕೆಟ್​ ರಹಿತ ಪ್ರಯಾಣ ಸೇರಿದಂತೆ ಪ್ರಮಾಣಿಕರಿಂದ ರೂ. 6 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ, ಮಹಿಳಾ ಪ್ರಯಾಣಿಕರ ಸೀಟ್​ನಲ್ಲಿ ಕುಳಿತುಕೊಂಡಿರುವುದಕ್ಕೆ ಸೇರಿ ವಿವಿಧ ಪ್ರಕರಣಗಳಲ್ಲಿ ಜುಲೈ ತಿಂಗಳಲ್ಲಿ 3285 ಪ್ರಯಾಣಿಕರಿಂದ ಒಟ್ಟು 6,20,510 ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಟಿಕೆಟ್​ ರಹಿತ ಪ್ರಯಾಣ ಸೇರಿದಂತೆ ಪ್ರಮಾಣಿಕರಿಂದ ರೂ. 6 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಬಿಎಂಟಿಸಿ
ಪ್ರಾತಿನಿಧಿಕ ಚಿತ್ರ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Aug 10, 2023 | 8:57 PM

ಬೆಂಗಳೂರು, ಆಗಸ್ಟ್​ 10: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ, ಮಹಿಳಾ ಪ್ರಯಾಣಿಕರ ಸೀಟ್​ನಲ್ಲಿ ಕುಳಿತುಕೊಂಡಿರುವುದಕ್ಕೆ ಸೇರಿ ವಿವಿಧ ಪ್ರಕರಣಗಳಲ್ಲಿ ಜುಲೈ ತಿಂಗಳಲ್ಲಿ 3285 ಪ್ರಯಾಣಿಕರಿಂದ ಒಟ್ಟು 6,20,510 ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 15198 ಟ್ರಿಪ್​ಗಳನ್ನು ಬಿಎಂಟಿಸಿಯ ಅಧಿಕಾರಿಗಳು ತಪಾಸಣೆ ಮಾಡುವ ಮೂಲಕ ದಾಖಲೆಯ ಮೊತ್ತವನ್ನು ಸಂಗ್ರಹಿಸಿದ್ದಾರೆ.

ಬಿಎಂಟಿಸಿಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಂಡಿದೆ.

2953 ಟಿಕೆಟ್​ ರಹಿತ ಪ್ರಯಾಣಿಕರು ಪತ್ತೆ

ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜುಲೈ ತಿಂಗಳಲ್ಲಿ ಒಟ್ಟು 15198 ಟ್ರಿಪ್‌ಗಳನ್ನು ತಪಾಸಿಸಿ 2953 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 5,87,310 ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 925 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿಯೇ ಅತೀ ಹೆಚ್ಚು ತ್ರಿವರ್ಣ ಧ್ವಜದ ತಯಾರಿ; ಕಳೆದ ವರ್ಷ 28 ಸಾವಿರಕ್ಕೂ ಅಧಿಕ ಧ್ವಜಗಳ ಮಾರಾಟ

ಮಹಿಳಾ ಪ್ರಯಾಣಿಕರಿ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 332 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 33,200, ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ ಜುಲೈ ತಿಂಗಳಿನಲ್ಲಿ 3285 ಪ್ರಯಾಣಿಕರಿಂದ 6,20,510 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಸಾರ್ವಜನಿಕರಲ್ಲಿ ಬಿಎಂಟಿಸಿ ಮನವಿ

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್​, ದಿನದ ಪಾಸು ಅಥವಾ ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕು ಎಂದು ಮನವಿ ಮಾಡಿದೆ. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯುವುದರೊಂದಿಗೆ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ.

ಇದನ್ನೂ ಓದಿ: ಮುಗಿಯದ 108 ಸಿಬ್ಬಂದಿಯ ವೇತನ ಸಮಸ್ಯೆ: ಆ 18 ರೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಂದ ನೌಕರರು

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Thu, 10 August 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್