ಹುಲಿ ಉಗುರು ವಿವಾದ: ಈಗ ಅರಣ್ಯಾಧಿಕಾರಿ ಸರದಿ, ಆರ್​ಎಫ್​ಒ ವಿರುದ್ಧ ಕೇಳಿಬಂತು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ

ಕಾನೂನು ಪಾಲಿಸಬೇಕಾದ ಅರಣ್ಯಾಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ ಆರೋಪ ಈಗ ಕೇಳಿಬಂದಿದೆ. ವಲಯ ಅರಣ್ಯಾಧಿಕಾರಿ (RFO) ಮುನಿರಾಜ್ ಕೂಡ ಹುಲಿ ಉಗುರು ಧರಿಸಿರುವ ಕುರಿತು ದೂರು ದಾಖಲಾಗಿದೆ. ಈ ವಿಚಾರವಾಗಿ ವನ್ಯಜೀವಿ ಸ್ವಯಂ ಸೇವಕ ಬಾಬು ಎಂಬವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.

ಹುಲಿ ಉಗುರು ವಿವಾದ: ಈಗ ಅರಣ್ಯಾಧಿಕಾರಿ ಸರದಿ, ಆರ್​ಎಫ್​ಒ ವಿರುದ್ಧ ಕೇಳಿಬಂತು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ
ವಲಯ ಅರಣ್ಯಾಧಿಕಾರಿ ಮುನಿರಾಜ್ & ಅವರ ವಿರುದ್ಧ ನೀಡಿದ ದೂರಿನ ಇ-ಮೇಲ್ ಕಾಪಿಯ ಪ್ರತಿ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Oct 27, 2023 | 10:49 AM

ಬೆಂಗಳೂರು, ಅಕ್ಟೋಬರ್ 26: ರಾಜ್ಯದಾದ್ಯಂತ ಈಗ ಹುಲಿ ಉಗುರಿನ ಸದ್ದೇ ಜೋರಾಗಿದೆ. ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ ಪ್ರಕರಣದ (Tiger Claw Locket Row) ಬೆನ್ನಲ್ಲೇ ಚಿತ್ರರಂಗದ ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಪೆಂಡೆಂಟ್​ ವಶಪಡಿಸಿ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಇದೀಗ ಅರಣ್ಯಾಧಿಕಾರಿಗಳ (Forest Department Officers) ವಿರುದ್ಧವೇ ಆರೋಪ ಕೇಳಿಬಂದಿದೆ!

ಕಾನೂನು ಪಾಲಿಸಬೇಕಾದ ಅರಣ್ಯಾಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ ಆರೋಪ ಈಗ ಕೇಳಿಬಂದಿದೆ. ವಲಯ ಅರಣ್ಯಾಧಿಕಾರಿ (RFO) ಮುನಿರಾಜ್ ಕೂಡ ಹುಲಿ ಉಗುರು ಧರಿಸಿರುವ ಕುರಿತು ದೂರು ದಾಖಲಾಗಿದೆ. ಈ ವಿಚಾರವಾಗಿ ವನ್ಯಜೀವಿ ಸ್ವಯಂ ಸೇವಕ ಬಾಬು ಎಂಬವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇಮೇಲ್ ಮುಖಾಂತರ ದೂರು ನೀಡಲಾಗಿದ್ದು, ವಲಯ ಅರಣ್ಯಾಧಿಕಾರಿ ಮುನಿರಾಜ್ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಉಲ್ಲಂಘನೆಗಾಗಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಹುಲಿ ಉಗುರುಗಳು ಮತ್ತು ಇತರ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಅನೇಕ ಅರಣ್ಯ ಅಧಿಕಾರಿಗಳು ಇಲಾಖೆಯಲ್ಲಿದ್ದಾರೆ. ವ್ಯನ್ಯ ಜೀವಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆಯ ಸಮಯದಲ್ಲಿ ಒಂದಿಬ್ಬರು ಪಶುವೈದ್ಯರು ಆನೆಯ ಬಾಲದಿಂದ ಕೂದಲನ್ನು ತೆಗೆದುಕೊಂಡಿದ್ದಾರೆ. ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಮರಣೋತ್ತರ ಪರೀಕ್ಷೆ ವೇಳೆ ಪಶುವೈದ್ಯರೊಬ್ಬರು ಎರಡು ಹುಲಿ ಮರಿಗಳ ಭ್ರೂಣವನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರಕಾರ ಹುಲಿಯ ಸಂಪೂರ್ಣ ಮೃತದೇಹವನ್ನು ಸುಡಬೇಕು. ಆದರೆ ಡಾ.ವಿನಯ್ ಅವರು ಎನ್ ಟಿಸಿಎ ಅನುಮತಿ ಪಡೆಯದೇ ಭ್ರೂಣ ತೆಗೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹುಲಿ ಉಗುರು ವಿವಾದ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಎಂದ ಅಧಿಕಾರಿ

ಮಾಜಿ ಎಸಿಎಫ್ ಬಂಡೀಪುರದಲ್ಲಿ ಸತ್ತ ಹುಲಿಯಿಂದ ಹುಲಿ ಉಗುರುಗಳನ್ನು ಕದ್ದಿದ್ದರು.  ಇಲಾಖೆಯಲ್ಲಿಯೇ ಸಂಶಯಾಸ್ಪದ ವ್ಯಕ್ತಿಗಳಿರುವಾಗ, ಅವರು ನಮ್ಮ ಹುಲಿಗಳು ಮತ್ತು ಚಿರತೆಗಳನ್ನು ಹೇಗೆ ರಕ್ಷಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ (DRFO) ದರ್ಶನ್‌ ವಿರುದ್ಧ ಕೂಡ ಹುಲಿ ಉಗುರು ಧರಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತಂತೆಯೂ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.

ಈ ಮಧ್ಯೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್‌, ಅಳಿಯ ರಜತ್‌ ಉಳ್ಳಾಗಡ್ಡಿಮಠ ಕೊರಳಲ್ಲೂ ಹುಲಿ ಉಗುರು ಇದೆ ಎಂದು ಆರೋಪಿಸಲಾಗಿದೆ. ಈ ಮಧ್ಯೆ ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್‌ ಪುತ್ರ ಶಾಶ್ವತಗೌಡ ಹುಲಿ ಉರುಳಲ್ಲಿ ಸಿಲುಕಿದ್ದಾರೆ. ಆದರೆ ಇದು ಅಸಲಿ ಅಲ್ಲ ಎಂದು ವಿಜುಗೌಡ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:14 pm, Thu, 26 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್