ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಸ್ಥಳದಲ್ಲಿ ಬ್ಯಾಟರಿ ಜತೆ ಟೈಮರ್ ಪತ್ತೆ, ಟೈಂ ಬಾಂಬ್‌ ಶಂಕೆ?

| Updated By: ರಮೇಶ್ ಬಿ. ಜವಳಗೇರಾ

Updated on: Mar 01, 2024 | 7:09 PM

Blast in Rameshwaram Cafe: ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು ನಾಗರಿಕರನ್ನು ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಇದೀಗ ಟೈಮರ್​ ಸಹ ಪತ್ತೆಯಾಗಿದ್ದು, ತನಿಖೆಯನ್ನು ಚುರುಕುಗೊಂಡಿದೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಸ್ಥಳದಲ್ಲಿ ಬ್ಯಾಟರಿ ಜತೆ ಟೈಮರ್ ಪತ್ತೆ, ಟೈಂ ಬಾಂಬ್‌ ಶಂಕೆ?
Follow us on

ಬೆಂಗಳೂರು, (ಮಾರ್ಚ್ 01): ಇಲ್ಲಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು (Blast in Rameshwaram Cafe) ನಾಗರಿಕರನ್ನು ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ, ಟೈಮರ್(Timer) ಪತ್ತೆಯಾಗಿದೆ. ಹೀಗಾಗಿ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಶಂಕೆ ವ್ತಕ್ತವಾಗಿದೆ. ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ( time bomb)ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಜಿಲೇಟಿನ್ ಕಡ್ಡಿಗಳಿಂದ ಸ್ಪೋಟವಾಗಿದೆಯಾ? ಮೈಕ್ರೊ ಓವನ್‌ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದೆಯಾ ಎಂಬುದನ್ನು ಸಹ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಅಂತಹ ಯಾವುದೇ ಸ್ಫೋಟ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದ್ರೆ, ಇದೀಗ ಟೈಮರ್​ ಸಿಕ್ಕಿದ್ದು, ಟೈಮರ್ ಇಟ್ಟ ಬ್ಲಾಸ್ ಮಾಡಲಾಗಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ. ಎಫ್‌ಎಸ್‌ಎಲ್ ಅಧಿಕಾರಿಗಳಿಂದಲೇ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಬಯಲಾಗಬೇಕಿದೆ. ಇತ್ತ ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ಕೆಫೆ ಎಂಡಿ!

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ 9 ಜನರಿಗೆ ಗಾಯಾಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳುಗಳ ಕಂಡೀಷನ್ ಹೇಗಿದೆ?

ಗಾಯಾಳುಗಳ ಬಗ್ಗೆ ಬ್ರೂಕ್​ಫೀಲ್ಡ್​ ಆಸ್ಪತ್ರೆಯ ವೈದ್ಯ ಪ್ರದೀಪ್ ಕುಮಾರ್​ ಮಾತನಾಡಿ, ಗಾಯಾಳುಗಳ ದೇಹದಲ್ಲಿ ಪತ್ತೆಯಾದ ವಸ್ತುಗಳನ್ನು FSLಗೆ ನೀಡುತ್ತೇವೆ. ಬ್ರೂಕ್​ಫೀಲ್ಡ್​ ಆಸ್ಪತ್ರೆಯಲ್ಲಿ 3 ಗಾಯಾಳುಗಳು ದಾಖಲಾಗಿದ್ದಾರೆ. 45 ವರ್ಷದ ಮಹಿಳೆಗೆ ಶೇ.40ರಷ್ಟು ಗಾಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಮೂವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಸ್ಫೋಟದ ಶಬ್ದದಿಂದ ಮೂವರ ಕಿವಿ ಪರದೆಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಇಬ್ಬರ ಕಿವಿ ಪರದೆಗೆ ಸ್ವಲ್ಪ. ಈ ಪೈಕಿ ಗಾಯಾಳು ಮಹಿಳೆಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಿದೆ ಎಂದು ಮಾಹಿತಿ ನೀಡಿದರು.

ಡಿಜಿ & ಐಜಿಪಿ ಅಲೋಕ್ ಮೋಹನ್ ಹೇಳಿದ್ದೇನು?

ಇನ್ನು ಘಟನಾ ಸ್ಥಳಕ್ಕೆ ಡಿಜಿ & ಐಜಿಪಿ ಅಲೋಕ್ ಮೋಹನ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳಕ್ಕೆ ಎಫ್​ಎಸ್​​ಎಲ್ ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ. ಬಾಂಬ್ ಸ್ಫೋಟದಲ್ಲಿ ಒಟ್ಟು 9 ಜನರಿಗೆ ಗಂಭೀರ ಗಾಯಗಳಾಗಿವೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಮಾಹಿತಿ ಪಡೆದಿದ್ದಾರೆ/ ಎಫ್ಎಸ್​ಎಲ್ ತಂಡ ಸಂಪೂರ್ಣ ಪರಿಶೀಲನೆ ಬಳಿಕ ಮಾಹಿತಿ ನೀಡ್ತೇವೆ. ತನಿಖೆ ಬಳಿಕ ಆರೋಪಿ ಏನು ತಂದಿದ್ದಾನೆ ಎನ್ನುವುದು ಗೊತ್ತಾಗಲಿದೆ. ಎನ್​ಐಎ ಮತ್ತು ಐಬಿಗೆ ಮಾಹಿತಿ ನೀಡಿದ್ದೇವೆ, ತನಿಖೆ ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ