ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು

ಕಾಮಾಕ್ಷಿಪಾಳ್ಯದ ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ.

ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು
ಸಾಂಕೇತಿಕ ಚಿತ್ರ
TV9kannada Web Team

| Edited By: sadhu srinath

Jun 30, 2022 | 5:05 PM

ಬೆಂಗಳೂರು: ಸುಮನಹಳ್ಳಿ ಜಂಕ್ಷನ್ ಬಳಿ (sumanahalli junction) ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳದಲ್ಲೇ 65 ವರ್ಷದ ವೃದ್ದೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ (kamakshipalya) ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಟಿಪ್ಪರ್ ಲಾರಿ, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟ್ಟೆ ನೋವು ಎಂದು ಬಂದ ಅಜ್ಜಿಯ ಹೊಟ್ಟೆ ಕೊಯ್ದು, ಅದೇ ಕೂಡಿಕೊಳ್ಳುವುದು ಎಂದು ಬಿಟ್ಟ ವೈದ್ಯ: ವೃದ್ಧೆ ಸಾವು

ದಾವಣಗೆರೆ: ವೈದ್ಯನ ನಿರ್ಲಕ್ಷ್ಯದಿಂದ(Doctor Negligence) ವೃದ್ಧೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಕೆಆರ್ ರಸ್ತೆಯಲ್ಲಿರುವ ಗುರುನಾಥ್ ಬೊಂದಡೆ ಆಸ್ಪತ್ರೆಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ಮುಂದೆ ಮೃತದೇಹವನ್ನು ಇಟ್ಟು ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ತಾಯಿ ಜೀವ ಕಳೆದಿದ್ದಾನೆ ಎಂದು ವೃದ್ಯರ ವಿರುದ್ಧ ಕಿಡಿಕಾರಿದ್ದಾರೆ.

65 ವರ್ಷದ ಅನ್ನಪೂರ್ಣಮ್ಮ ಎಂಬ ಅಜ್ಜಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವೈದ್ಯ ದೀಪಕ್ ಬೊಂದಡೆ ಅಜ್ಜಿಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟು ಯಡವಟ್ಟು ಮಾಡಿದ್ದಾರೆ. ಆಪರೇಷನ್ ಮಾಡಿ 15 ದಿನ ಆದರೂ ಹೊಲಿಗೆ ಹಾಕಿಲ್ಲ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಕೇಳಿದರೆ ತನ್ನಷ್ಟಕ್ಕೆ ತಾನೇ ಕೂಡಿಕೊಳ್ಳುವುದು ಎಂದಿದ್ದಾರೆ. ಅದಕ್ಕೆ ಆಸ್ಪತ್ರೆ ಸಿಬ್ಬಂದಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು ಮತ್ತೊಂದು ಕಡೆ ಆಸ್ಪತ್ರೆಯವರು ಯಾವುದೇ ಬಿಲ್ ನೀಡದೆ 3 ಲಕ್ಷಕ್ಕೂ ಅಧಿಕ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮಕ್ಕಳು ವೃದ್ದೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. 15 ದಿನಗಳಿಂದ ಜೀವಂತ ಶವವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದೆ ಇಂದು ಬೆಳಗ್ಗೆ ಮೃತಪಟ್ಟಿದ್ದು ಖಾಸಗಿ ಆಸ್ಪತ್ರೆಯ ಮುಂದೆ ಶವ ಇಟ್ಟು ಆಕ್ರೋಶ ಹೊರ ಹಾಕಲಾಗುತ್ತಿದೆ. ಸ್ಥಳಕ್ಕೆ ಬಸವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಇದನ್ನೂ ಓದಿ:

ಕೋರ್ಟ್ ನಿಗಾದಲ್ಲಿ ಪಿಎಸ್ಐ ನೇಮಕಾತಿ ಹಗರಣ ತನಿಖೆ ಹೊಣೆಯನ್ನು ಸಿಐಡಿ ಡಿಜಿಪಿಗೆ ವಹಿಸಿದ ರಾಜ್ಯ ಹೈಕೋರ್ಟ್

ಇದನ್ನೂ ಓದಿ:

ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada