Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಆಡಳಿತ ಮಂಡಳಿ‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಆರೋಪ; ಮುಗಿಲು ಮುಟ್ಟಿದ ತಾಯಿಯ ಆಕ್ರಂಧನ

ಎಎಂಸಿ ಕಾಲೇಜಿನಲ್ಲಿ ಪ್ರಥಮ‌ ವರ್ಷದ ಹೋಟೆಲ್ ಮೆನೇಜ್ಮೆಂಟ್ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾದರೂ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ. ಈ ಹಿನ್ನಲೆ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದ್ದು, ಮಗನ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಆರೋಪ; ಮುಗಿಲು ಮುಟ್ಟಿದ ತಾಯಿಯ ಆಕ್ರಂಧನ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಖಿಲ್​
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 29, 2023 | 2:54 PM

ಬೆಂಗಳೂರು, ಡಿ.29: ಮಾತ್ರೆ ಸೇವಿಸಿ ಎಎಂಸಿ ಕಾಲೇಜು ವಿದ್ಯಾರ್ಥಿ(College Student) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಎಂಸಿ ಕಾಲೇಜಿನಲ್ಲಿ ಪ್ರಥಮ‌ ವರ್ಷದ ಹೋಟೆಲ್ ಮೆನೇಜ್ಮೆಂಟ್ ವಿಭಾಗದಲ್ಲಿ ಓದುತ್ತಿದ್ದ ನಿಖಿಲ್​ಗೆ ಕಳೆದ ಒಂದು ತಿಂಗಳಿಂದ ಕಾಲೇಜು‌ ಡೀನ್ ಕಿರುಕುಳ ನೀಡುತ್ತಿದ್ದರಂತೆ. ಜೊತೆಗೆ ನನ್ನಎದುರೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇವೆಲ್ಲದರಿಂದ ಬೇಸತ್ತಿದ್ದ ನನ್ನ ಮಗ ಮನೆಯಲ್ಲಿದ್ದ ಮಾತ್ರೆಗಳನ್ನ ಸೇವಿಸಿದ್ದ. ಕೂಡಲೇ ನಾಗರಬಾವಿ(Nagarabhavi) ಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು‌ ಮಾಡಿದ್ದೇವು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಾಯಿ ಕಾಲೇಜು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಲೇಜು ಆಡಳಿತ ಮಂಡಳಿ‌ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಲೇಜು ವಿರುದ್ದ ಮಗನನ್ನು ಕಳೆದುಕೊಂಡ ತಾಯಿ ಹಾಗೂ ಕುಟುಂಬದ ಆಕ್ರೋಶ

ಮಗನನ್ನ ಕಳೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ ತಾಯಿ ‘ಈ ರೀತಿ ಯಾರಿಗೂ ಆಗಬಾರದು, ತನ್ನ ಮಗನನ್ನು ಕಾಲೇಜಿನವರೆ ಕೊಂದರು. ಈ ಹಿಂದೆ ಬೇರೆ ರಾಜ್ಯದ ಒಂದು ಹುಡುಗಿಯನ್ನ ಇವನ ಜೊತೆಗೆ ಹಾಕಿದ್ದರು. ಅವಳಿಗೂ ನಮ್ಮ ಹುಡುಗನಿಗೂ ವ್ಯತ್ಯಾಸ ಆಗಿದೆ. ಈ ವಿಚಾರಕ್ಕೆ ನನ್ನ ಮಗನನ್ನು ಸ್ಪೆಸ್ಪೆಂಡ್ ಮಾಡಿದ್ದರು. ಹದಿನೈದು ದಿನ ಬಿಟ್ಟು ಕರೆದುಕೊಂಡು ಬನ್ನಿ ಎಂದಿದ್ದರು. ಮತ್ತೆ ಹೋದಾಗ ಅವಮಾನ ಮಾಡಿ, ನನ್ನ ಮುಂದೆಯೇ ಮಗನಿಗೆ ಹೊಡೆದರು. ಅದಕ್ಕೆ ತನ್ನ ಮಗ ಸತ್ತು ಹೋದ ಎಂದಿದ್ದಾರೆ. ಇನ್ನು ಯಾರಿಗೂ ಈ ರೀತಿಯಲ್ಲಿ ಆಗಬಾರದು ಎಂದು ಮಗನ ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

ಕಾಲೇಜು ಬಳಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಲು ಕುಟುಂಬ ತೀರ್ಮಾನ

ಸದ್ಯ ಮೃತ ದೇಹವನ್ನು ಕಾಲೇಜು ಬಳಿ ತೆಗೆದುಕೊಂಡು ಹೋಗಿ ಪ್ರತಿಭಟನೆ ಮಾಡಲು ಕುಟುಂಬ ತೀರ್ಮಾನ ಮಾಡಿದೆ. ಆದರೆ, ಕಾನೂನು ಸುವ್ಯವಸ್ಥೆ ಹಾಗೂ ಉಳಿದ ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ಕಾಲೇಜು ಬಳಿ ಮೃತದೇಹ ಬೇಡ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಮಗನನ್ನು ಕಳೆದುಕೊಂಡ ತಾಯಿಯ ಕಣ್ಣೀರು ಮಾತ್ರ ನಿಲ್ಲುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ