AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಬೆನ್ನಲ್ಲೇ ರಾಜ್ಯಪಾಲರನ್ನ ಭೇಟಿಯಾದ ಟಿ.ಜೆ ಅಬ್ರಹಾಂ ಹೇಳಿದ್ದಿಷ್ಟು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದೀಗ ಸೋಮವಾರ ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕೆಪಿಸಿಸಿ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಬೆನ್ನಲ್ಲೇ ರಾಜ್ಯಪಾಲರನ್ನ ಭೇಟಿಯಾದ ಟಿ.ಜೆ ಅಬ್ರಹಾಂ ಹೇಳಿದ್ದಿಷ್ಟು
ಟಿ.ಜೆ ಅಬ್ರಹಾಂ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 17, 2024 | 5:08 PM

Share

ಬೆಂಗಳೂರು, ಆ.17: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರ ಅನುಮತಿ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ(Abraham T.J), ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ರಾಜಭವನದ ಬಳಿ ಮಾತನಾಡಿದ ಅವರು, ‘ಸೋಮವಾರ ಕೇವಿಯಟ್‌ ಹಾಕುತ್ತೇನೆ. ಸಣ್ಣ ಸ್ಪಷ್ಟನೆ, ಕ್ಲಾರಿಟಿ ಬೇಕಿತ್ತು ಅದಕ್ಕೆ ನನ್ನ ನೋಡಬೇಕು ಎಂದು ಗವರ್ನರ್ ಕರೆದಿದ್ದರು. ರಾಜ್ಯಪಾಲರನ್ನು ಭೇಟಿಯಾಗಿ ಆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ ಎಂದರು.

ಇನ್ನು ಪ್ರಾಸಿಕ್ಯೂಷನ್​​ಗೆ ಗವರ್ನರ್ ಅನುಮತಿ ನೀಡಿದ ಪ್ರತಿಯನ್ನು ಕೋರ್ಟ್​ಗೆ ಸಲ್ಲಿಸುತ್ತೇನೆ. ಆ ಬಳಿಕ ಕೋರ್ಟ್ ನಿರ್ದೇಶನದಂತೆ ಎಫ್​ಐಆರ್ ದಾಖಲಾಗಲಿದೆ. ಈಗಾಗಲೆ ಕೋರ್ಟ್​ನಲ್ಲಿ ಈ ವಿಚಾರ ಇದೆ. ಲೋಕಾಯುಕ್ತಕ್ಕೆ ಸ್ಯಾಂಕ್ಷನ್ ಕಾಪಿಯನ್ನ ಕಳಿಸಲಾಗುತ್ತದೆ. ಈ ಹಿಂದೆ ಎಸ್ ಎಂ ಕೃಷ್ಣ, ಧರ್ಮಸಿಂಗ್, ಹೆಚ್‌ಡಿಕೆ, ನಿರಾಣಿ, ಜೊಲ್ಲೆ ಮೇಲೂ ಸಹ ದೂರು ನೀಡಿದ್ದೆ. ಆ ಕೇಸ್‌ನಲ್ಲಿ ಅನುಮತಿ ನೀಡದ ವಿಚಾರವಾಗಿ ಮಾತನಾಡಿ, ‘ ಅದು ನನಗೆ ಸಂಬಂಧ ಪಡದ ವಿಚಾರ ಮತ್ತು ರಾಜಕೀಯ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಇದನ್ನೂ ಓದಿ:ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​​: ಸಿದ್ದರಾಮಯ್ಯ ವಿರುದ್ಧ ಯಾವೆಲ್ಲಾ ಸೆಕ್ಷನ್? ಇಲ್ಲಿದೆ ವಿವರ

ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ನಾವು ಕೇಳಿಲ್ಲ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿ ಎಂದು ಕೇಳಿದ್ದೆವು. ಜೊತೆಗೆ ನಾನು ಕೇಸ್​ನಲ್ಲಿರುವ ಅಕ್ರಮವನ್ನ ಮನವರಿಕೆ ಮಾಡಿದ್ದೀನಿ. ನಮ್ಮ ಮನವಿಯಂತೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ