ಬಿಎಸ್​​ವೈ ಮತ್ತು ಕುಟುಂಬಸ್ಥರ ವಿರುದ್ಧ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿದ್ದ ರಿಟ್ ಅರ್ಜಿ ಹಿಂಪಡೆದ ಟಿ.ಜೆ.ಅಬ್ರಹಾಂ

ಬಿಎಸ್​​ವೈ ಮತ್ತು ಕುಟುಂಬಸ್ಥರ ವಿರುದ್ಧ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿದ್ದ ರಿಟ್ ಅರ್ಜಿ ಹಿಂಪಡೆದ ಟಿ.ಜೆ.ಅಬ್ರಹಾಂ
ಬಿ.ಎಸ್.ಯಡಿಯೂರಪ್ಪ

ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಟಿ.ಜೆ.ಅಬ್ರಹಾಂ ಸಿಬಿಐ ಅಥವಾ ಎಸ್ಐಟಿ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಹೈಕೋರ್ಟ್ ಬಿಎಸ್​ವೈ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಲಾಗಿದೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Aug 06, 2021 | 4:13 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸಿಬಿಐ ಅಥವಾ ಎಸ್ಐಟಿ ತನಿಖೆಗೆ ಕೋರಿದ್ದ ರಿಟ್ ಅರ್ಜಿಯನ್ನು ದೂರುದಾರ ಟಿ.ಜೆ.ಅಬ್ರಹಾಂ ವಾಪಸ್ ಪಡೆದಿದ್ದಾರೆ. ಬಿಎಸ್‌ವೈ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಟಿ.ಜೆ.ಅಬ್ರಹಾಂ ತಾಂತ್ರಿಕ ಕಾರಣದಿಂದ ರಿಟ್ ಅರ್ಜಿ ಹಿಂಪಡೆದಿದ್ದಾರೆಂದು ತಿಳಿದುಬಂದಿದೆ. ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಬಿಎಸ್‌ವೈ ಸೇರಿದಂತೆ ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಡಾ.ಜಿ.ಸಿ.ಪ್ರಕಾಶ್, ಎಸ್​​.ಟಿ.ಸೋಮಶೇಖರ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಟಿ.ಜೆ.ಅಬ್ರಹಾಂ ಸಿಬಿಐ ತನಿಖೆ ಕೋರಿದ್ದ ರಿಟ್ ಅರ್ಜಿ ವಾಪಸ್ ಪಡೆದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಟಿ.ಜೆ.ಅಬ್ರಹಾಂ ಸಿಬಿಐ ಅಥವಾ ಎಸ್ಐಟಿ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಮತ್ತೊಂದು ಅರ್ಜಿಯಲ್ಲಿ ಈಗಾಗಲೇ ಹೈಕೋರ್ಟ್ ಬಿಎಸ್​ವೈ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದು, ಆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಕೋರಿದ್ದ ರಿಟ್ ಅರ್ಜಿ ವಾಪಸ್ ತೆಗೆದುಕೊಂಡಿದ್ದಾರೆ.

ಈ ಹಿಂದೆ ಟಿ.ಜೆ. ಅಬ್ರಹಾಂ ಈ ವಿಚಾರದ ಕುರಿತಾಗಿ ಖಾಸಗಿ ದೂರು ಸಲ್ಲಿಸಿದ್ದರು. ಆದರೆ, ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೂರು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿದ್ದ ಅರ್ಜಿ ಸಂಬಂಧ ನೋಟಿಸ್ ಜಾರಿಯಾದ ಹಿನ್ನೆಲೆ ಸಿಬಿಐ ತನಿಖೆ ಕೋರಿದ್ದ ರಿಟ್ ಅರ್ಜಿಯನ್ನು ಟಿ.ಜೆ. ಅಬ್ರಹಾಂ ಹಿಂಪಡೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.  ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.

ಅದೇ ವೇಳೆ, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್‌ರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ಬಿ.ಎಸ್ ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ 

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

(TJ Abraham Withdraws case against BS Yediyurappa and family over alleged corruption case)

Follow us on

Related Stories

Most Read Stories

Click on your DTH Provider to Add TV9 Kannada