ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ

ಬೆಂಗಳೂರು ಟ್ರಾಫಿಕ್ ಜಾಮ್ ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ಪೀಣ್ಯ ಫ್ಲೈ ಓವರ್ ಘನ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ ಒಂದು ಷರತ್ತನ್ನು ಕೂಡ ಅಧಿಕಾರಿಗಳು ಹೇಳಿದ್ದಾರೆ. ಅದೇನೆಂದು ತಿಳಿಯಲು ಮುಂದೆ ಓದಿ.

ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ
ಪೀಣ್ಯ ಮೇಲ್ಸೇತುವೆ
Follow us
|

Updated on:Jul 20, 2024 | 5:06 PM

ಬೆಂಗಳೂರು, ಜುಲೈ 20: ಸುಮಾರು ಮೂರು ವರ್ಷಗಳ ನಂತರ ಪೀಣ್ಯ ಮೇಲ್ಸೇತುವೆ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತವಾಗುವ ಸಮಯ ಸನ್ನಿಹಿತವಾಗಿದೆ. ಜುಲೈ ಅಂತ್ಯದಲ್ಲಿ ಪೀಣ್ಯ ಫ್ಲೈಓವರ್​​ ಭಾರಿ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದ್ದು, ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಸಿಮೆಂಟ್ ಗ್ರೌಟಿಂಗ್ ಕೆಲಸದ ಸಮಯದಲ್ಲಿ ಕಂಪನಗಳನ್ನು ತಡೆಗಟ್ಟಲು ಭಾರೀ ವಾಹನಗಳು ವಾರಕ್ಕೊಮ್ಮೆ (ಶುಕ್ರವಾರ ಬೆಳಿಗ್ಗೆ 6 ರಿಂದ ಶನಿವಾರ ಬೆಳಿಗ್ಗೆ 6 ರವರೆಗೆ) ಫ್ಲೈಓವರ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

15-ಮೀಟರ್ ಅಗಲ, 4.2-ಕಿಮೀ ಉದ್ದದ ಈ ಫ್ಲೈಓವರ್​​ನಲ್ಲಿ 2021 ರ ಡಿಸೆಂಬರ್​​ನಿಂದ ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸಂಚಾರ ನಿರ್ಬಂಧಿಸಲಾಗಿದೆ. ಮೇಲ್ಸೇತುವೆಯ ಮೂರು ವ್ಯಾಪ್ತಿಯಲ್ಲಿರುವ ಪ್ರಿಸ್ಟ್ರೆಸ್ಡ್ ಕೇಬಲ್‌ಗಳು ತುಕ್ಕು ಹಿಡಿದಿದ್ದು, ಘನ ವಾಹನಗಳ ಸಂಚಾರಕ್ಕೆ ಸೂಕ್ತವಲ್ಲ ಎಂಬ ತಜ್ಞರ ವರದಿಯ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು. ಪರಿಣಾಮವಾಗಿ ಕೆಳಗಿನ ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ದೈನಂದಿನ ಟ್ರಾಫಿಕ್​ ಜಾಮ್​ಗೂ ಕಾರಣವಾಗುತ್ತಿದೆ.

ಜನವರಿಯಲ್ಲಿ ನಡೆದಿತ್ತು ಪ್ರಾಯೋಗಿಕ ಸಂಚಾರ

ಮೇಲ್ಸೇತುವೆಯ ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಹೆಚ್ಚುವರಿ ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಾಗಿ ಸೇರಿಸಿ ಮತ್ತು ಫ್ಲೈಓವರ್ ಅನ್ನು ಬಲಪಡಿಸುವುದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 2023 ರಲ್ಲಿ, 38.5-ಕೋಟಿ ರೂಪಾಯಿಯ ದುರಸ್ತಿ ಯೋಜನೆಯನ್ನು ಪ್ರಾರಂಭಿಸಿತ್ತು. ಫ್ಲೈಓವರ್‌ನಲ್ಲಿ 120 ಸ್ಪ್ಯಾನ್‌ಗಳೊಂದಿಗೆ 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಸೇರಿಸಲಾಗಿದೆ. ಜನವರಿಯಲ್ಲಿ ಫ್ಲೈಓವರ್​​​ನಲ್ಲಿ ಲೋಡ್ ಪರೀಕ್ಷೆಗಳನ್ನು ಮಾಡಲಾಗಿತ್ತು.

ಇಷ್ಟೇ ಅಲ್ಲದೆ, ನಾಲ್ಕು ಸದಸ್ಯರ ತಜ್ಞರ ಸಮಿತಿಯು ಶಿಫಾರಸು ಮಾಡಿದಂತೆ ಭವಿಷ್ಯದಲ್ಲಿ ಸಮಸ್ಯೆಯಾಗದಂತೆ ಮತ್ತು ತುಕ್ಕು ಹಿಡಿಯುವುದನ್ನು ತಡೆಗಟ್ಟುವುದಕ್ಕಾಗಿ ಅಸ್ತಿತ್ವದಲ್ಲಿರುವ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲಾಗುತ್ತಿದೆ.

ಅಧಿಕಾರಿಗಳು ಹೇಳಿದ್ದೇನು?

ಜುಲೈ ಕೊನೆಯ ವಾರದಲ್ಲಿ ಭಾರಿ ವಾಹನಗಳಿಗೆ ಫ್ಲೈಓವರ್ ಮುಕ್ತವಾಗಲಿದೆ. ನಾವು ಪ್ರಸ್ತುತ ಸೈಟ್ ಮತ್ತು ಟ್ರಾಫಿಕ್ ಪರಿಸ್ಥಿತಿಗಳನ್ನು ವಿವರಿಸುವ ವರದಿಯನ್ನು ಹೆದ್ದಾರಿ ಪ್ರಾಧಿಕಾರದ ಪ್ರಧಾನ ಕಚೇರಿಗೆ ಸಲ್ಲಿಸಿದ್ದೇವೆ. ತಜ್ಞರ ಸಮಿತಿ ಮತ್ತು ಟ್ರಾಫಿಕ್ ಪೊಲೀಸರ ಅನುಮೋದನೆಯನ್ನು ಮುಂದಿನ ವಾರದ ಆರಂಭದಲ್ಲಿ ಪಡೆಯಲಿದ್ದೇವೆ ಎಂದು ಎನ್‌ಎಚ್‌ಎಐ ಬೆಂಗಳೂರು ಘಟಕದ ಯೋಜನಾ ನಿರ್ದೇಶಕ ಕೆಬಿ ಜಯಕುಮಾರ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಫ್ಲೈಓವರ್ ಅನ್ನು ಘನ ವಾಹನಗಳ ಸಂಚಾರಕ್ಕೆ ತೆರವುಗೊಳಿಸುತ್ತಿದ್ದೇವೆ. ಏಕೆಂದರೆ ಅದನ್ನು ಸಂಪೂರ್ಣವಾಗಿ ಬಲಪಡಿಸಲಾಗಿದೆ. ಅಸ್ತಿತ್ವದಲ್ಲಿರುವ 1,243 ಕೇಬಲ್‌ಗಳನ್ನು ಬಲಪಡಿಸಲು ಗ್ರೌಟಿಂಗ್ ಮಾಡಲು, ವಾರದಲ್ಲಿ ಒಂದು ದಿನ ಫ್ಲೈಓವರ್ ಮೇಲೆ ಯಾವುದೇ ಕಂಪನ ಇರಬಾರದು ಅಷ್ಟೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥರಾಗಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಪ್ರೊ.ಚಂದ್ರ ಕಿಶನ್ ಜೆಎಂ ತಿಳಿಸಿದ್ದಾರೆ.

ಶುಕ್ರವಾರ ಮಾತ್ರ ಘನ ವಾಹನಗಳ ಸಂಚಾರಕ್ಕಿಲ್ಲ ಅನುಮತಿ

ಶುಕ್ರವಾರದಂದು ಘನ ವಾಹನಗಳ ಸಂಚಾರ ನಿಷೇಧಿಸಲು ಸಂಚಾರ ಪೊಲೀಸರು ಸೂಚಿಸಿದ್ದಾರೆ ಎಂದೂ ಜಯಕುಮಾರ್ ಹೇಳಿದ್ದಾರೆ. ಸಾಮಾನ್ಯವಾಗಿ ವಾರಾಂತ್ಯದಲ್ಲಿ ಜನರು ಬೆಂಗಳೂರಿನಿಂದ ಹೊರಹೋಗುವುದರಿಂದ ಹೆಚ್ಚಿನ ದಟ್ಟಣೆ ಕಂಡುಬರುತ್ತದೆ. ಗ್ರೌಟಿಂಗ್ 14-15 ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಹೊಂದಿಸಲು ಸ್ವಲ್ಪ ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸೌಧದ ಗುಮ್ಮಟದಲ್ಲಿ ಕಾಣಿಸಿಕೊಂಡ ಬಿರುಕು; ದಿಢೀರ್ ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ಪ್ರತಿ ವಾರ ಒಂದು ಭಾರಿ ಘನ ವಾಹನಗಳನ್ನು ನಿಷೇಧಿಸುವಂತೆ ಎನ್‌ಎಚ್‌ಎಐ ಕೇಳಿಕೊಂಡಿರುವುದನ್ನು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sat, 20 July 24

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ