ಇಂದು ಆರ್ಎಸ್ಎಸ್-ಬಿಜೆಪಿ ಸಮನ್ವಯ ಸಭೆ: ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಆಯ್ದ ಪದಾಧಿಕಾರಿಗಳು ಭಾಗಿ
ಆರ್‌ಎಸ್‌ಎಸ್‌ನ ಚಿಂತನ ಮಂಥನ ಸಭೆಗೂ ಮುನ್ನ ಜುಲೈ 11 ರಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿತ್ತು.
ಬೆಂಗಳೂರು: ಇಂದು (ಜುಲೈ 14) ಸಂಜೆ ನಗರದ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ (RSS) ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ಸಮನ್ವಯ ಸಭೆ ನಡೆಯುವ ಸಾಧ್ಯತೆಯಿದೆ. ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಬಿಜೆಪಿಯ ಆಯ್ದ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮುಂದಿನ ನೀತಿ ನಿರೂಪಣೆಗಳ ಬಗ್ಗೆ ಚರ್ಚೆ ನಡೆಯಲಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯ ಬಿಜೆಪಿ ಪ್ರಮುಖ ನಾಯಕರ ಸಭೆ ನಡೆಯಲಿದೆ. ಬೆಂಗಳೂರು ಹೊರವಲಯದ ರೆಸಾರ್ಟ್ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಭೆ ಸೇರುವ ಸಾಧ್ಯತೆಯಿದ್ದು, ಇಂದು ರಾತ್ರಿಯೇ ತೆರಳಿ ವಾಸ್ತವ್ಯ ಹೂಡಿ ನಾಳೆ ಸುದೀರ್ಘ ಸಭೆ ನಡೆಸುವ ಸಾಧ್ಯತೆಯಿದ್ದು, ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ, ಸಚಿವರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಪ್ರಮುಖ ನಾಯಕರು ಮತ್ತು ಸ್ಥಳವನ್ನು ಬಿಜೆಪಿ ಇನ್ನೂ ಗುಪ್ತವಾಗಿ ಇಟ್ಟಿದೆ.
ಇದನ್ನೂ ಓದಿ: ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ
ಕುತೂಹಲ ಮೂಡಿಸಿದ ಮಾದಾರ ಚನ್ನಯ್ಯ ಸ್ವಾಮೀಜಿ ಭೇಟಿ:
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜುಲೈ 11ರಂದು ಚಿತ್ರದುರ್ಗದ ಶಿವಶರಣರ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಲಿದ್ದರು. ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಶಿವಶರಣ ಮಾದಾರ ಚನ್ನಯ್ಯ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದು, ಜುಲೈ 12ರಂದು ಬೆಳಿಗ್ಗೆ ವಿವಿಧ ಮಠಾಧೀಶರನ್ನು ಭೇಟಿ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗ: ಹಿಂದುಳಿದ, ದಲಿತ ಸಮುದಾಯದ ಮಠಾಧೀಶರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಚರ್ಚೆ
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ಚಿಂತನ ಮಂಥನ ಸಭೆಗೂ ಮುನ್ನ ಜುಲೈ 11 ರಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿತ್ತು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಮೋಹತ್ ಭಾಗವತ್ ಅವರ ಜೊತೆಗಿರಲ್ಲಿದ್ದು, ಮಾದಾರ ಚನ್ನಯ್ಯ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ದಲಿತ ಧಾರ್ಮಿಕ ಮುಖಂಡರೊಂದಿಗೆ ಅವರು ಗುರುಪೀಠದಲ್ಲಿ ವಾಪಸಾಗುವ ಸಾಧ್ಯತೆಯಿದೆ. ಚುನಾವಣೆ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಎಡ ಸಮುದಾಯವನ್ನು ಸೆಳೆಯುವುದು ಈ ಭೇಟಿಯ ಕಾರ್ಯತಂತ್ರವಾಗಿದೆ ಎಂದು ಮೂಲಗಳು ತಿಳಿಸಿವೆ.
Published On - 9:02 am, Thu, 14 July 22