CM BS Yediyurappa: ಇವತ್ತಿನ ಕ್ಯಾಬಿನೆಟ್ ಸಭೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊನೆಯ ಸಭೆ?

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬದಲಾವಣೆಯನ್ನು ಗಮನಿಸಿದರೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರ ಎಂಬ ಕುತೂಹಲ ಮೂಡಿದೆ. ಬಿ.ಎಸ್. ಯಡಿಯೂರಪ್ಪ ಸುಳಿವಿನ ಬಳಿಕ ಕ್ಯಾಬಿನೆಟ್ ಸಭೆ ಮಹತ್ವ ಪಡೆದುಕೊಂಡಿದೆ.

CM BS Yediyurappa: ಇವತ್ತಿನ ಕ್ಯಾಬಿನೆಟ್ ಸಭೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊನೆಯ ಸಭೆ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 22, 2021 | 12:02 PM

ಬೆಂಗಳೂರು: ಇಷ್ಟು ದಿನದಿಂದ ನಡೆಸುತ್ತಿದ್ದ ನಾಯಕತ್ವ ಬದಲಾವಣೆಯ ಚರ್ಚೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ನಾಯಕತ್ವ ಚರ್ಚೆಯ ಬಗ್ಗೆ ಮೌನ ತಾಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನಲ್ಲಿ ಮಹತ್ವದ ಸುಳಿವು ನೀಡಿದ್ದಾರೆ. ಇದೇ ಬೆನ್ನಲ್ಲೆ ಇಂದು ನಿಗದಿಯಾಗಿದ್ದ ಸಂಪುಟ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಹಾಗೂ ಇವತ್ತಿನ ಕ್ಯಾಬಿನೆಟ್ ಸಭೆಯೇ ಸಿಎಂ ಬಿಎಸ್ವೈಗೆ ಕೊನೆಯ ಸಭೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಸದ್ಯ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬದಲಾವಣೆಯನ್ನು ಗಮನಿಸಿದರೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರ ಎಂಬ ಕುತೂಹಲ ಮೂಡಿದೆ. ಬಿ.ಎಸ್. ಯಡಿಯೂರಪ್ಪ ಸುಳಿವಿನ ಬಳಿಕ ಕ್ಯಾಬಿನೆಟ್ ಸಭೆ ಮಹತ್ವ ಪಡೆದುಕೊಂಡಿದೆ. ಕ್ಯಾಬಿನೆಟ್ನಲ್ಲಿ ಪದತ್ಯಾಗದ ವಿಚಾರವನ್ನು ಸಚಿವರ ಜೊತೆ ಪ್ರಸ್ತಾಪಿಸುತ್ತಾರಾ ಸಿಎಂ ಎಂಬ ಅನುಮಾನ ಹುಟ್ಟಿದೆ. ದೆಹಲಿ ಪ್ರವಾಸದ ಬಳಿಕ ಇದೇ ಮೊದಲ ಬಾರಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದರು. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿಗದಿ ಮಾಡಲಾಗಿದೆ. ತಮ್ಮ ಮುಂದಿನ ನಡೆ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸುವ ಸಾಧ್ಯತೆ ಇದೆ.

ಮೊದಲ ಸಲ ರಾಜೀನಾಮೆ ಸುಳಿವು ನೀಡಿದ ಸಿಎಂ ಬಿಎಸ್‌ವೈ? ಇನ್ನು ಹೋಮದ ಬಳಿಕ ಬೆಂಗಳೂರಿನಲ್ಲಿ ಸಿಎಂ ರಾಜೀನಾಮೇ ಬಗ್ಗೆ ಮೌನ ಮುರಿದಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಆ ತೀರ್ಮಾನ ನನ್ನದು. ಜು.25ರಂದು ಹೈಕಮಾಂಡ್ ನೀಡುವ ಸೂಚನೆಯಂತೆ ಕೆಲಸ ಮಾಡುತ್ತೇನೆ. ಜುಲೈ 26ರಿಂದ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.

ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರವನ್ನು ಕೊಟ್ಟಿದ್ದಾರೆ. ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಸಂಕಲ್ಪ ನನ್ನದು. ಪಕ್ಷದ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೆ ನನಗೆ ಉತ್ತಮ ರೀತಿಯಲ್ಲಿ ಸಹಕಾರವನ್ನು ಕೊಡಬೇಕು. ನನ್ನ ಪರ ಹೇಳಿಕೆ, ಪ್ರತಿಭಟನೆ ಮಾಡದಂತೆ ಮನವಿ ಮಾಡುವೆ. ಮಠಾಧೀಶರು ನನಗೆ ಅಭೂತಪೂರ್ವ ಬೆಂಬಲ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 26ರಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ರು.

ಇದನ್ನೂ ಓದಿ: CM BS Yediyurappa ರಾಜೀನಾಮೆ ಸುಳಿವಿಗೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?

Published On - 11:48 am, Thu, 22 July 21