Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸ್ಥಳಕ್ಕೆ ವಿರೋಧ ಪಕ್ಷದ ನಾಯಕ R.ಆಶೋಕ್ ಭೇಟಿ, ಏನಂದ್ರು ಗೊತ್ತಾ?

ಅಂಧ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್(Toilet Cleaning) ಮಾಡಿಸಿದ ವಿಚಾರ ‘ಸರ್ಕಾರ ಈ ಕುರಿತು ಯಾಕೆ ಎಚ್ಚೆತ್ತುಕೊಂಡಿಲ್ಲ. ಮೊನ್ನೆ ಅಧಿವೇಶನ ನಡೆಯುವಾಗಲೇ ಭ್ರೂಣ ಹತ್ಯೆ, ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೆಲ್ಲ ನೋಡುತ್ತಿದ್ದರೆ, ಸರ್ಕಾರ ಸತ್ತು ಹೋಗಿದೆಯಾ? ಎಂಬ ಪ್ರಶ್ನೆ ಮೂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ ಕಿಡಿಕಾರಿದ್ದಾರೆ.

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸ್ಥಳಕ್ಕೆ ವಿರೋಧ ಪಕ್ಷದ ನಾಯಕ R.ಆಶೋಕ್ ಭೇಟಿ, ಏನಂದ್ರು ಗೊತ್ತಾ?
ಆರ್​ ಅಶೋಕ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 22, 2023 | 2:59 PM

ಬೆಂಗಳೂರು, ಡಿ.22: ನಗರದ ಅಂಧ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್(Toilet Cleaning) ಮಾಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ‘ ಚಾಕ್ಲೆಟ್, ಚಿಕ್ಕಿ ಕೊಟ್ಟು ಟಾಯ್ಲೆಟ್ ಕ್ಲೀನ್ ಮಾಡುವುದಕ್ಕೆ ಹೇಳುತ್ತಿದ್ದರಂತೆ ಎಂದು ವಿರೋಧ ಪಕ್ಷದ ನಾಯಕ R.ಆಶೋಕ್(R Ashoka) ಹೇಳಿದ್ದಾರೆ. ಇಂದು ಶಾಲೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ‘ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಪೊಲೀಸರು ಕೂಡ ಬಂದಿದ್ದಾರೆ. ನಾನು ಶಿಕ್ಷಕರ ಜೊತೆ ಮಾತನಾಡಿದ್ದೇನೆ. ಕಳೆದ ಹಲವು ತಿಂಗಳಿಂದ ಎಸ್​ಡಿಎಂ ಇಲ್ಲದ ಕಾರಣ, ಶೌಚಾಲಯ ಸ್ವಚ್ಛತೆ ಮಾಡುವವರು ಇರಲಿಲ್ಲ. ಹಾಗಾಗಿ ಮಕ್ಕಳಿಂದ ಕ್ಲಿನಿಂಗ್​ ಮಾಡಿಸಿದ್ದಾಗಿ ಹೇಳಿದ್ದಾರಂತೆ.

ಇನ್ನು ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ 600 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಎಸ್​ಸಿ, ಎಸ್​ಟಿ ಹಾಗೂ ಹಿಂದೂಳಿದ‌ ಸಮುದಾಯಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ ಇದ್ದಾರೆ. ಶಿಕ್ಷಕರು ಬಂದು ನಿತ್ಯ ಶೌಚಾಲಯ ಯಾರು ಕ್ಲೀನ್ ಮಾಡುತ್ತಿರಾ ಎಂದು ಕೇಳುತ್ತಿದ್ದರಂತೆ, ಮಕ್ಕಳಿಗೆ ಗ್ಲೌಸ್ ಇಲ್ಲದೆ, ಚಪ್ಪಲಿ ಇಲ್ಲದೆ ಪೆನಾಯಿಲ್ ಕೊಟ್ಟಿದ್ದಾರೆ. ಇದರಿಂದ ಕಳೆದ ಹಲವು ದಿನಗಳಿಂದ ಮಕ್ಕಳ ಕೈ ಉರಿತಾಯಿದೆಯಂತೆ. ಮಕ್ಕಳು ಭಯ ಇಲ್ಲದೆ ನಮ್ಮ‌ ಮುಂದೆ ದೂರು ನೀಡಿದ್ದಾರೆ. ಮೊನ್ನೆ ಕೋಲಾರದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಈಗ ಈ ಘಟನೆ ನಡೆದಿದೆ ಎಂದು ಸರ್ಕಾರದ ವಿರುದ್ದ ಆರ್​ ಅಶೋಕ ಫುಲ್​ ಗರಂ ಆಗಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸಿದ್ದರಾಮಯ್ಯ ಕಾಲದಲ್ಲೇ ಇವೆಲ್ಲ ನಡೆಯೋದು ಎಂದ ಆರ್ ಅಶೋಕ್

ಇಂತಹ ಘಟನೆಗಳನ್ನೇಲ್ಲ ನೋಡುತ್ತಿದ್ದರೆ, ಸರ್ಕಾರ ಮಲಗಿದ್ದೇಯಾ? ಎಂಬ ಪ್ರಶ್ನೆ ಮೂಡಿದೆ. ಸರ್ಕಾರ ಈ ಕುರಿತು ಯಾಕೆ ಎಚ್ಚೆತ್ತುಕೊಂಡಿಲ್ಲ. ಮೊನ್ನೆ ಅಧಿವೇಶನ ನಡೆಯುವಾಗಲೇ ಭ್ರೂಣ ಹತ್ಯೆ, ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೆಲ್ಲ ನೋಡುತ್ತಿದ್ದರೆ, ಸರ್ಕಾರ ಸತ್ತುಹೋಗಿದೆಯಾ?, ಸರ್ಕಾರಕ್ಕೆ ಇದೊಂದು ಛಿಮಾರಿ ಹಾಕಿದ ಹಾಗೇ ಎಂದು ಆರ್​ ಅಶೋಕ  ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ