AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ವಿಚಾರ ಚರ್ಚೆಗಾಗಿ ಶುಕ್ರವಾರ ಸಂಜೆ ವಿಧಾನ ಮಂಡಲ ಸದನ ನಾಯಕರ ಸಭೆ

ನಾಳೆ (ಮಾರ್ಚ್​ 18) ಸಂಜೆ 4 ಗಂಟೆಗೆ ವಿಧಾನ ಮಂಡಲ ಸದನ ನಾಯಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಚರ್ಚೆ ನಡೆಸಲಾಗುತ್ತದೆ. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ.

ಮೇಕೆದಾಟು ಯೋಜನೆ ವಿಚಾರ ಚರ್ಚೆಗಾಗಿ ಶುಕ್ರವಾರ ಸಂಜೆ ವಿಧಾನ ಮಂಡಲ ಸದನ ನಾಯಕರ ಸಭೆ
ವಿಧಾನ ಮಂಡಲ ಸದನ ನಾಯಕರ ಸಭೆ
TV9 Web
| Edited By: |

Updated on:Mar 17, 2022 | 7:08 PM

Share

ಬೆಂಗಳೂರು: ನಾಳೆ (ಮಾರ್ಚ್​ 18) ಸಂಜೆ 4 ಗಂಟೆಗೆ ವಿಧಾನ ಮಂಡಲ(Karnataka Legislature)  ಸದನ ನಾಯಕರ(Leaders) ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಚರ್ಚೆ ನಡೆಸಲಾಗುತ್ತದೆ. ವಿಧಾನಸೌಧದ (Vidhana Soudha) ಸಮ್ಮೇಳನ‌ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ.

ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಬೊಮ್ಮಾಯಿ ಆದೇಶ

ಏಪ್ರಿಲ್ 1ರಿಂದ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ. ಅನುಷ್ಠಾನಕ್ಕೆ ಸರ್ಕಾರಿ ಆದೇಶ ಹೊರಡಿಸಲು ಸಿಎಂ ಸೂಚನೆ ನೀಡಿದ್ದಾರೆ. ಎಲ್ಲ ಇಲಾಖೆಗಳ ಎಸಿಎಸ್, ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಸರ್ಕಾರಿ ಆದೇಶ ಹೊರಡಿಸಲು ತಿಳಿಸಿ, ಸಿಎಂ ಪತ್ರ ಬರೆದು ಎಲ್ಲ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಜೆಟ್ ಘೋಷಿತ ಯೋಜನೆಗಳ ಬಗ್ಗೆ ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶಗಳನ್ನು ಹೊರಡಿಸಿ ಎಂದು ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ಕೊರೊನಾ ಬಿಕ್ಕಟ್ಟು ಕಾಡಿದ್ದು ನಿಜ, ಆರ್ಥಿಕ ಶಿಸ್ತು ಮೀರಿಲ್ಲ, ಸಾಲ ಅನಿವಾರ್ಯ: ಬಜೆಟ್ ಸಮರ್ಥಿಸಿಕೊಂಡ ಬೊಮ್ಮಾಯಿ

ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ರಾಜ್ಯದಲ್ಲಿ 50 ಅಂಬೇಡ್ಕರ್​ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಧಾರವಾಡ, ಮೈಸೂರು, ಕಲಬುರಗಿ, ಮಂಗಳೂರಿನಲ್ಲಿ ಹೊಸ ವಸತಿ ನಿಲಯಗಳು ಕಾರ್ಯಾರಂಭ ಮಾಡಲಿವೆ. ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳು ಓದಲು ಹಾಸ್ಟೆಲ್​ಗಳಲ್ಲಿ ಅನುಕೂಲ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಸತಿ ಸಮುಚ್ಚಯ ನಿರ್ಮಿಸುತ್ತೇವೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ನಮ್ಮ ಸರ್ಕಾರ ಎಲ್ಲ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯ ಮುಂದಿದೆ. ಪ್ರತಿಷ್ಠಿತ ಸಂಸ್ಥೆ ಸೇರಬೇಕೆಂದು ಐಐಟಿ ಪರೀಕ್ಷೆ ಬರೆಯುತ್ತಾರೆ. 100 ಸೀಟ್ ಇದ್ದರೆ 2-3 ವಿದ್ಯಾರ್ಥಿಗಳು ಸೀಟ್ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಎನ್​ಐಟಿ, ಐಐಟಿ ಮಟ್ಟದ ಕಾಲೇಜುಗಳನ್ನು ಕಟ್ಟಲು ನಾವೆಲ್ಲರೂ ಮುಂದಾಗಬೇಕಿದೆ. ಕರ್ನಾಟದಲ್ಲಿರುವ 6 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುತ್ತೇವೆ. ಅದು ಐಐಟಿ ಆಗಿದ್ದರೆ ನಮ್ಮದು ಕೆಐಟಿ. ಇನ್ನು ಐದೇ ವರ್ಷದಲ್ಲಿ ಐಐಟಿ ಗುಣಮಟ್ಟದ ಶಿಕ್ಷಣ ಕರ್ನಾಟಕದಲ್ಲಿ ಲಭ್ಯವಾಗಲಿದೆ ಎಂದರು.

ವಿಶ್ವವಿದ್ಯಾಲಯ ಅಂದ್ರೆ ದೊಡ್ಡ ಜಿಲ್ಲೆಗೆ ಒಂದು ಇದ್ದರೆ ಸಾಕು ಎನ್ನುವ ಭಾವನೆ ಇತ್ತು. ಇಂದು ಜನಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹಾಗಾಗಿ 7 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸುತ್ತೇವೆ. ಯಾವ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಇಲ್ಲವೋ ಅಲ್ಲಿ ವಿವಿಗಳನ್ನು ಆರಂಭಿಸಲು ಪ್ರಯೋಗ ನಡೆಸುತ್ತೇವೆ ಎಂದು ಉತ್ತರಿಸಿದರು.

ಇದನ್ನೂ ಓದಿ:

ಹಿಜಾಬ್ ವಿಚಾರವಾಗಿ ಹೈಕೋರ್ಟ್‌ ತೀರ್ಪು ಬೆನ್ನಲ್ಲೆ ವಿಧಾನಸೌಧದಲ್ಲಿ ಅನೌಪಚಾರಿಕ ಸಭೆ ನಡೆಸುತ್ತಿರುವ ಮುಸ್ಲಿಂ ನಾಯಕರು

ಸದನದಲ್ಲಿ ಪರಸ್ಪರ ಪರಮ ವೈರಿಗಳಂತೆ ಆಡುವ ಬಿಜೆಪಿ-ಕಾಂಗ್ರೆಸ್ ನಾಯಕರು ಹೊರಗಡೆ ಆತ್ಮೀಯ ಸ್ನೇಹಿತರು!

Published On - 6:52 pm, Thu, 17 March 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್