ಬೆಂಗಳೂರು-ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ; ಇಲ್ಲಿದೆ ಮಾಹಿತಿ

ಬೆಂಗಳೂರು-ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಬೆಂಗಳೂರು-ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ; ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 31, 2023 | 10:19 PM

ಬೆಂಗಳೂರು, ಆ.31: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ (Rain) ಇಲ್ಲದೆ ರೈತರು ಕಂಗಾಲಾಗಿದ್ದರೆ, ಇತ್ತ ಬೆಂಗಳೂರು(Bengaluru), ಮಂಡ್ಯ, ಕೋಲಾರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಹೌದು, ಬೆಂಗಳೂರಿನಲ್ಲಿ ವರುಣನ ಸಿಂಚನವಾಗಿದ್ದು, ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕೆಲವು ಕಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಎಲ್ಲೆಲ್ಲಿ ಮಳೆ?

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಹೆಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಮಂಡ್ಯದಲ್ಲಿ ಮಳೆಯ ಸಿಂಚನ; ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಮಂಡ್ಯದಲ್ಲೂ ವರುಣನ ದರ್ಶನವಾಗಿದೆ. ಬಿರು ಬಿಸಿಲಿನ ಮಧ್ಯೆ ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರೋ ಮಳೆಗೆ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ವಾಹನ ಸವಾರರ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಯ ಪಕ್ಕದಲ್ಲೇ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿಕೊಂಡಿದ್ದಾರೆ. ಇನ್ನು ಮಳೆಯಿಲ್ಲದೇ ಪರದಾಡುತ್ತಿದ್ದ ರೈತರಿಗೆ ಏಕಾಏಕಿ ಸುರಿದ ಮಳೆಯಿಂದ ಮಂಡ್ಯ ಜಿಲ್ಲೆಯ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ:ನೆಲಮಂಗಲ: ಮಳೆಗಾಗಿ ಮಳೆರಾಯನ ಮೂರ್ತಿ ಮೇಲೆ ನೀರು ಸುರಿಸಿಕೊಂಡು ಪ್ರಾರ್ಥನೆ, ವಿಡಿಯೋ ವೈರಲ್​

ರಾಮನಗರ ಸುತ್ತಾಮುತ್ತಾ ಗಾಳಿ‌ ಜೊತೆ ಮಳೆ

ಕಳೆದೊಂದು ತಾಸಿನಿಂದ ರಾಮನಗರ ಸುತ್ತಾಮುತ್ತಾ ಬಿರುಸಿನ‌ ಮಳೆ ಆಗುತ್ತಿದೆ. ದಿಡೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಶಾಕ್ ಆಗಿದ್ದು, ಕಡು ಬಿಸಿಲಿನ‌ ಮಧ್ಯೆ ಮಳೆ‌ರಾಯ ತಂಪೆರೆದಿದ್ದಾನೆ. ಇನ್ನು ಕೋಲಾರದಲ್ಲಿ ತುಂತುರು ಮಳೆಯಾಗಿದೆ. ಮಳೆ ಇಲ್ಲದೆ ಬರಗಾಲದ ಛಾಯೆ ಆವರಿಸಿರುವ ಕೋಲಾರ ಜಿಲ್ಲೆಯಲ್ಲಿ ಒಂದು ತಿಂಗಳ ನಂತರ ತುಂತುರು ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆಗಾಲದಲ್ಲೂ ಬೇಸಿಗೆಯ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನಲೆ ಬಿತ್ತನೆ ಕುಂಠಿತವಾಗಿ ಮಳೆ‌ ಇಲ್ಲದೆ ಬೆಳೆಗಳು ಒಣಗುತ್ತಿತ್ತು.

ಗದಗ, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ

ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಚಿಕ್ಕಮಗಳೂರಿನಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ಗದಗದಲ್ಲಿ ಧೋ ಎಂದು ಮಳೆ ಸುರಿಯುತ್ತಿದೆ. ಕಾಫಿನಾಡಿನಲ್ಲೂ ಕೂಡ ಕಳೆದ ಅರ್ಧ ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆ ಇಲ್ಲದೇ ಕಂಗಾಲಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಮೂಲಕ ರೈತರ ಮುಖದಲ್ಲಿ‌ ಮಂದಹಾಸ ಮೂಡಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Thu, 31 August 23

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು