AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್

Bangalore News: ಬೆಂಗಳೂರಿನ 18 ಸಾವಿರ ಪೌರಕಾರ್ಮಿಕರನ್ನು ರಾಜ್ಯದ ವಿವಿಧ ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (ಬಿಎಸ್‌ಡಬ್ಲ್ಯುಎಂಎಲ್) ಯೋಜನೆ ರೂಪಿಸಿದೆ. ತ್ಯಾಜ್ಯ ನಿರ್ವಹಣೆಯ ಉತ್ತಮ ಮಾದರಿಗಳನ್ನು ಕಲಿತು ಅಳವಡಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದ್ದರೂ, ಆಕ್ಷೇಪವೂ ವ್ಯಕ್ತವಾಗಿದೆ.

ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್
ಪೌರ ಕಾರ್ಮಿಕರು (ಸಾಂದರ್ಭಿಕ ಚಿತ್ರ)Image Credit source: Karnataka Govt
ಗಣಪತಿ ಶರ್ಮಾ
|

Updated on: Jul 20, 2026 | 9:14 AM

Share

ಬೆಂಗಳೂರು, ಜುಲೈ 20: ಬೆಂಗಳೂರು (Bengaluru) ನಗರದ ಸ್ವಚ್ಛತಾ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮಹತ್ವದ ಯೋಜನೆ ರೂಪಿಸಿದೆ. ಇದರಡಿ ಬೆಂಗಳೂರಿನ ಸುಮಾರು 18 ಸಾವಿರ ಪೌರಕಾರ್ಮಿಕರನ್ನು ಕರ್ನಾಟಕದ ಆರು ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ. ‘ಸ್ವಚ್ಛ ಭಾರತ್ ಮಿಷನ್ (ನಗರ) 2.0’ ಯೋಜನೆಯಡಿ ಹಂತ ಹಂತವಾಗಿ ಈ ಕಾರ್ಯಕ್ರಮ ಜಾರಿಯಾಗಲಿದ್ದು, ಇದೇ ತಿಂಗಳಿಂದ ಪ್ರವಾಸ ಆರಂಭವಾಗುವ ನಿರೀಕ್ಷೆಯಿದೆ.

ಪೌರ ಕಾರ್ಮಿಕರಿಗೇಕೆ ಪ್ರವಾಸ?

ಮೊದಲ ಹಂತದಲ್ಲಿ ಮೈಸೂರು, ದಾವಣಗೆರೆ ಮತ್ತು ಹೊಸಪೇಟೆ ಸೇರಿದಂತೆ ಘನತ್ಯಾಜ್ಯದ ಉತ್ತಮ ನಿರ್ವಹಣೆಗೆ ಹೆಸರಾಗಿರುವ ನಗರಗಳಿಗೆ ಪೌರಕಾರ್ಮಿಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಬಳಿಕ ಉಳಿದ ನಗರಗಳಿಗೂ ಅಧ್ಯಯನ ಪ್ರವಾಸ ಆಯೋಜಿಸಲಾಗುತ್ತದೆ. ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಗರಗಳ ತ್ಯಾಜ್ಯ ವಿಂಗಡಣೆ, ಮರುಬಳಕೆ, ಸ್ವಚ್ಛತೆ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ನಾಗರಿಕರ ಸಹಭಾಗಿತ್ವದ ಮಾದರಿಗಳನ್ನು ಪರಿಚಯಿಸುವುದು ಯೋಜನೆಯ ಉದ್ದೇಶವಾಗಿದೆ.

1.96 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಟೆಂಡರ್

ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಸುಮಾರು 1.96 ಕೋಟಿ ರೂ. ಅಂದಾಜು ವೆಚ್ಚದ ಟೆಂಡರ್ ಆಹ್ವಾನಿಸಿದ್ದು, ಆಯ್ಕೆಯಾಗುವ ಸಂಸ್ಥೆ ಪ್ರವಾಸದ ಸಂಪೂರ್ಣ ಯೋಜನೆ, ಸಾರಿಗೆ ಹಾಗೂ ಇತರೆ ವ್ಯವಸ್ಥೆಗಳನ್ನು ನಿರ್ವಹಿಸಲಿದೆ. ಮೊದಲ ಹಂತದ ಕಾರ್ಯಕ್ರಮವು ಸುಮಾರು ಆರು ತಿಂಗಳ ಅವಧಿಯಲ್ಲಿ ನಡೆಯಲಿದೆ.

‘ಪ್ರವಾಸಕ್ಕಿಂತ ಸಿಬ್ಬಂದಿ ಹೆಚ್ಚಿಸಿ’: ಪೌರಕಾರ್ಮಿಕರ ಆಗ್ರಹ

ಆದರೆ, ಈ ಯೋಜನೆಗೆ ಪೌರಕಾರ್ಮಿಕರ ಸಂಘದ ಒಂದು ವಲಯ ಆಕ್ಷೇಪ ವ್ಯಕ್ತಪಡಿಸಿದೆ. ‘ಬೆಂಗಳೂರಿನಷ್ಟು ದೊಡ್ಡ ನಗರಕ್ಕೆ ಅಧ್ಯಯನ ಪ್ರವಾಸಕ್ಕಿಂತ ಹೆಚ್ಚುವರಿ ಸಿಬ್ಬಂದಿಯ ಅಗತ್ಯವಿದೆ. ಪ್ರತಿದಿನ 5,000 ಟನ್‌ಗಿಂತ ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗುವ ನಗರದಲ್ಲಿ ಎಲ್ಲರನ್ನೂ ಪ್ರವಾಸಕ್ಕೆ ಕಳುಹಿಸುವ ಬದಲು, ಪ್ರತಿ ವಾರ್ಡ್‌ನಿಂದ ಕೆಲವರನ್ನು ಮಾತ್ರ ಕಳುಹಿಸಿ ಅವರು ಕಲಿತ ವಿಷಯವನ್ನು ಇತರರೊಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದರೆ ಸಾಕು’ ಎಂದು ಗ್ರೇಟರ್ ಬೆಂಗಳೂರು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಿ.ಎನ್. ಮುತ್ತ್ಯಾಲಪ್ಪ ಅಭಿಪ್ರಾಯಪಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?