ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ -ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

| Updated By: ಸಾಧು ಶ್ರೀನಾಥ್​

Updated on: Sep 17, 2022 | 2:08 PM

ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಲಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುವುದಿಲ್ಲ -ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us on

ಬೆಂಗಳೂರು: ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್(Towing) ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ ಚರ್ಚೆ ನಡೆಸಿದ್ದು ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:48 pm, Sat, 17 September 22