ತಾತ್ಕಾಲಿಕವಾಗಿ ಟೋಯಿಂಗ್ ನಿಲ್ಲಿಸುವಂತೆ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚನೆ

| Updated By: ganapathi bhat

Updated on: Jan 31, 2022 | 3:16 PM

ನಗರದಲ್ಲಿ ಅಂಗಲಾಚಿದರೂ ಬೈಕ್​ ಟೋಯಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಟೋಯಿಂಗ್ ಕರ್ತವ್ಯದಿಂದ ಎಎಸ್‌ಐ ಬದಲಾವಣೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು.

ತಾತ್ಕಾಲಿಕವಾಗಿ ಟೋಯಿಂಗ್ ನಿಲ್ಲಿಸುವಂತೆ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚನೆ
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ
Follow us on

ಬೆಂಗಳೂರು: ತಾತ್ಕಾಲಿಕವಾಗಿ ಟೋಯಿಂಗ್ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವವರೆಗೆ ಟೋಯಿಂಗ್ ನಿಲ್ಲಿಸಿ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚನೆ ನೀಡಿದ್ದಾರೆ. ನಗರದಲ್ಲಿ ಅಂಗಲಾಚಿದರೂ ಬೈಕ್​ ಟೋಯಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಟೋಯಿಂಗ್ ಕರ್ತವ್ಯದಿಂದ ಎಎಸ್‌ಐ ಬದಲಾವಣೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು.

ಸಂಚಾರ ವಿಭಾಗದ ಜಂಟಿ ಆಯುಕ್ತ ಬಿ.ಆರ್. ರವಿಕಾಂತೇಗೌಡ ಈ ಬಗ್ಗೆ ಪ್ರಕರಣದ ತನಿಖೆಗೆ ಆದೇಶ ನೀಡಿದ್ದರು. ತನಿಖೆ ಪೂರ್ಣಗೊಳ್ಳುವವರೆಗೆ ಟೋಯಿಂಗ್ ಕೆಲಸವಿಲ್ಲ. ಜೆ.ಬಿ. ನಗರ ಸಂಚಾರಿ ಠಾಣಾ ಎಎಸ್ಐ ಬದಲಾವಣೆ ಮಾಡಲಾಗಿದೆ. ಈ ಮೊದಲು ಟೋಯಿಂಗ್ ವಾಹನದ ಪೊಲೀಸರ ನಿರ್ದಾಕ್ಷಿಣ್ಯ ನಡೆ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಟೋಯಿಂಗ್ ಸಿಬ್ಬಂದಿ ನಡೆಗೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು.

ಬೆಂಗಳೂರಿನಲ್ಲಿ ಟೋಯಿಂಗ್ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಿಗದಿ

ಬೆಂಗಳೂರಿನಲ್ಲಿ ಟೋಯಿಂಗ್ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಜನವರಿ 31) ಸಭೆ ನಿಗದಿ ಮಾಡಲಾಗಿದೆ. ಇತ್ತೀಚೆಗೆ ಸಿಎಂ ಭೇಟಿ ವೇಳೆ ಬೆಂಗಳೂರಿನ ಬಿಜೆಪಿ ನಾಯಕರು ಈ ಬಗ್ಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಟೋಯಿಂಗ್ ನೀತಿ ಸರಿಪಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ ಹಾಕಿತ್ತು ಎನ್ನಲಾಗಿದೆ. ಬೇಕಾಬಿಟ್ಟಿ ಟೋಯಿಂಗ್ ನಿಂದಾಗಿ ಸರ್ಕಾರದ ವಿರುದ್ಧ ಜನ ವಿರೋಧಿ ನೀತಿ ಸೃಷ್ಟಿಯಾಗುತ್ತಿದೆ. ಸರಿಪಡಿಸದಿದ್ದರೆ ಬಿಬಿಎಂಪಿ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ. ಹೀಗೆಂದು ಟೋಯಿಂಗ್ ಬಗ್ಗೆ ಪರಿಷ್ಕರಣೆ ಮಾಡಬೇಕು ಎಂದು ಸಿಎಂ ಮೇಲೆ ಒತ್ತಾಯ ಹೇರಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಗೃಹ ಸಚಿವರಿಗೂ ಬಿಜೆಪಿ ನಾಯಕರು ಮನವಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಲ್ಲಿ ಟೋಯಿಂಗ್ ಕುರಿತ ವೀಡಿಯೋಗಳು ವೈರಲ್ ಆಗಿದ್ದವು. ಹೀಗಾಗಿ ಟೋಯಿಂಗ್ ಕಾರ್ಯಾಚರಣೆ ಬಗ್ಗೆ ಎಚ್ಚೆತ್ತುಕೊಂಡು ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ಅಂಗಲಾಚಿದ್ದರೂ ಬೈಕ್ ಟೋಯಿಂಗ್ ಮಾಡಿದ್ದ ಪ್ರಕರಣದ ತನಿಖೆಗೆ ಆದೇಶ, 4 ಲಕ್ಷ ಮೌಲ್ಯದ ಮದ್ಯ ನಾಶಪಡಿಸಿದ ಅಬಕಾರಿ ಇಲಾಖೆ

ಇದನ್ನೂ ಓದಿ: ಟೋಯಿಂಗ್ ವಿಚಾರಕ್ಕೆ ನಡುರಸ್ತೆಯಲ್ಲಿ ಅಂಗವಿಕಲೆಯ ಮೇಲೆ ಹಲ್ಲೆ ಮಾಡಿದ್ದ ASI ನಾರಾಯಣ್ ಅಮಾನತು

Published On - 3:06 pm, Mon, 31 January 22