AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೇಡಿಂಗ್ ಹೆಸರಿನಲ್ಲಿ 93 ಲಕ್ಷ ರೂ ವಂಚನೆ: ಮ್ಯೂಲ್ ಅಕೌಂಟ್​ಗಳಿಗೆ ಹಣ ವರ್ಗಾವಣೆ; ಮೂವರ ಬಂಧನ

ಟ್ರೇಡಿಂಗ್ ಹೆಸರಿನಲ್ಲಿ 93 ಲಕ್ಷ ರೂ ವಂಚಿಸಿದ್ದ ಮೂವರು ಅಂತಾರಾಜ್ಯ ವಂಚಕರನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 6 ಮೊಬೈಲ್‌ಗಳು, 507 ಮ್ಯೂಲ್ ಅಕೌಂಟ್ ವಿವರಗಳು ಪತ್ತೆಯಾಗಿದ್ದು, ಎಲ್ಲವನ್ನು ಜಪ್ತಿ ಮಾಡಲಾಗಿದೆ. ಇನ್ನು ಪ್ರಕರಣದ ಕಿಂಗ್‌ಪಿನ್‌ಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಟ್ರೇಡಿಂಗ್ ಹೆಸರಿನಲ್ಲಿ 93 ಲಕ್ಷ ರೂ ವಂಚನೆ: ಮ್ಯೂಲ್ ಅಕೌಂಟ್​ಗಳಿಗೆ ಹಣ ವರ್ಗಾವಣೆ; ಮೂವರ ಬಂಧನ
ಬಂಧಿತರು Image Credit source: tv9 kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on: Sep 20, 2026 | 4:45 PM

Share

ಬೆಂಗಳೂರು, ಸೆಪ್ಟೆಂಬರ್​ 20: ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಸಾರ್ವಜನಿಕರಿಗೆ ಬಲೆ ಬೀಸಿ ಲಕ್ಷಾಂತರ ರೂ ವಂಚಿಸುತ್ತಿದ್ದ ಮೂವರು ಅಂತಾರಾಜ್ಯ ಸೈಬರ್ ವಂಚಕರನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಮೂಲದ ಅಮಿತ್ ಮಿಶ್ರಾ ಹಾಗೂ ಬೆಂಗಳೂರಿನ ತೌಸಿಫ್ ಅಹ್ಮದ್ ಮತ್ತು ಪರಶುರಾಮ್ ಬಂಧಿತ ಆರೋಪಿಗಳು. ಹರೀಶ್ ಎಂಬುವರಿಗೆ ಟ್ರೇಡಿಂಗ್ ಹೆಸರಿನಲ್ಲಿ ನಂಬಿಸಿ ಬರೋಬ್ಬರಿ 93 ಲಕ್ಷ ರೂ ವಂಚಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

ಎಪಿಕೆ ಫೈಲ್, ಮ್ಯೂಲ್ ಅಕೌಂಟ್‌ಗಳ ಮೂಲಕ ಕೃತ್ಯ

ಆರೋಪಿಗಳು ಡೊನೇಷನ್ ಕೊಡುವುದಾಗಿ ನಂಬಿಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ವಂಚನೆಗೆ ಬಳಸಿಕೊಳ್ಳುತ್ತಿದ್ದರು. ನಂತರ ನಕಲಿ ಎಪಿಕೆ ಫೈಲ್‌ಗಳ ಮೂಲಕ ಹಣವನ್ನು ಮ್ಯೂಲ್ ಅಕೌಂಟ್‌ಗಳಿಗೆ (ಬಾಡಿಗೆ ಖಾತೆಗಳಿಗೆ) ವರ್ಗಾವಣೆ ಮಾಡಿಕೊಂಡು, ಬಳಿಕ ಡ್ರಾ ಮಾಡಿಕೊಳ್ಳುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಲ್ಲಿ ಭಾರಿ ವಂಚನೆ, ಮಹಿಳೆಯ ಮಾತಿಗೆ ಮರುಳಾಗಿ 5.95 ಕೋಟಿ ರೂ. ಕಳಕೊಂಡ ವ್ಯಕ್ತಿ

ಬಂಧಿತರಿಂದ ಪೊಲೀಸರು 6 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದು, ಇವುಗಳನ್ನು ಪರಿಶೀಲಿಸಿದಾಗ ಬರೋಬ್ಬರಿ 507 ಮ್ಯೂಲ್ ಅಕೌಂಟ್‌ಗಳ ವಿವರ ಹಾಗೂ ವಂಚನೆಗೆ ಬಳಸುತ್ತಿದ್ದ ಸುಮಾರು 51 ಎಪಿಕೆ ಫೈಲ್‌ಗಳು ಪತ್ತೆಯಾಗಿವೆ.

LIVE TV

ದುಬೈ ಮೂಲದ ಬೋಟಿಮ್ ಆ್ಯಪ್ ಮೂಲಕ ಮಾತುಕತೆ

ಆರೋಪಿಗಳು ವಾಟ್ಸಾಪ್ ಮತ್ತು ಟೆಲಿಗ್ರಾಂನಲ್ಲಿ ಪ್ರತ್ಯೇಕ ಗ್ರೂಪ್‌ಗಳನ್ನು ಮಾಡಿಕೊಂಡು, ಅವುಗಳ ಮೂಲಕ ಮ್ಯೂಲ್ ಅಕೌಂಟ್‌ಗಳ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಆ ಖಾತೆಗಳ ಮಾಹಿತಿಯನ್ನು ಸೈಬರ್ ವಂಚನೆ ಜಾಲದ ಕಿಂಗ್‌ಪಿನ್‌ಗಳಿಗೆ ಹಂಚಿಕೊಳ್ಳುತ್ತಿದ್ದರು. ಪೊಲೀಸರ ಕಣ್ತಪ್ಪಿಸಲು ಹಾಗೂ ಪರಸ್ಪರ ಸಂಪರ್ಕದಲ್ಲಿರಲು ಆರೋಪಿಗಳು ದುಬೈ ಮೂಲದ ಬೋಟಿಮ್ ಆ್ಯಪ್ ಬಳಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ’10 ಲಕ್ಷ ಕೊಟ್ಟರೆ ಒಂದು ಕೋಟಿ ಕೊಡ್ತೀವಿ’: ಕೋಟಿ ಕೋಟಿ ಆಮಿಷ ತೋರಿಸಿ ವಂಚಿಸಿದ್ದ ಖತರ್ನಾಕ್​​ ಗ್ಯಾಂಗ್​​ ಬಂಧನ

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಸೈಬರ್ ಕಮಾಂಡ್ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಹಿಂದಿರುವ ಪ್ರಮುಖ ಕಿಂಗ್‌ಪಿನ್ ಹಾಗೂ ಮಧ್ಯವರ್ತಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ದಸರಾ, ದೀಪಾವಳಿ: ರಾಜ್ಯಾದ್ಯಂತ ಸಿಹಿ ತಿಂಡಿ ಅಂಗಡಿಗಳ ಮೇಲೆ FSSAI ದಾಳಿ
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​ಡಿಕೆಗೆ ಪ್ರಿಯಾಂಕ್ ಕೌಂಟರ್​
‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?
‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?