Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ

ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ ಫೀಲ್ಡ್​ಗೆ ಇಳಿಯಲಿವೆ ಡ್ರೋನ್​ಗಳು. ಡ್ರೋನ್ ಕ್ಯಾಮೆರಾಗಳನ್ನು ಬಳಸಿ ನಗರದ ಟ್ರಾಫಿಕ್ ಅನ್ನು ನಿಯಂತ್ರಿಸಲು ಪೊಲೀಸರಿಗೆ ಗೃಹ ಸಚಿವ ಜಿ ಪರಮೇಶ್ವರ ಸೂಚನೆ.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ
ಡ್ರೋನ್
Follow us
ಆಯೇಷಾ ಬಾನು
|

Updated on: Jun 17, 2023 | 7:33 AM

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ(Traffic Jam) ಇನ್ಮುಂದೆ ಡ್ರೋನ್ ಕ್ಯಾಮರಾಗಳು(Drone Camera) ಸಹಕರಿಸಲಿವೆ. ಪೊಲೀಸರು ಮೊದಲ ಬಾರಿಗೆ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ನಗರದ ಟ್ರಾಫಿಕ್ ಅನ್ನು ನಿಯಂತ್ರಿಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ(Dr G Parameshwar) ತಿಳಿಸಿದ್ದಾರೆ. ಹಾಗೂ ಸಂಚಾರ ವಿಭಾಗದ ಪೊಲೀಸರಿಗೆ ಮೂರು ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ ನೀಡಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳ ಜೊತೆ ತಮ್ಮ ಮೊದಲ ಅಪರಾಧ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ನಾನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಮೂರು ತಿಂಗಳ ಗಡುವನ್ನು ನೀಡಿದ್ದೇನೆ. ನಗರವು ವಿಶ್ವದ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಎಂಬ ಅಪಖ್ಯಾತಿ ಗಳಿಸಿದೆ. ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾದರೆ ನಿಖರ ಕಾರಣ ಪತ್ತೆಗೆ ಪೊಲೀಸರಿಗೆ ಆಡಚಣೆಯಾಗುತ್ತಿದೆ. ಹೀಗಾಗಿ ವಾಹನ ದಟ್ಟಣೆ ತಗ್ಗಿಸಲು ಇನ್ಮುಂದೆ ಡ್ರೋನ್‌ ಕ್ಯಾಮರಾಗಳನ್ನು ಬಳಸಿ ಸಂಚಾರ ನಿರ್ವಹಣೆ ಮಾಡಲಾಗುತ್ತದೆ. ವಾಹನಗಳ ಓಡಾಟಕ್ಕೆ ಅಡ್ಡಿಯಾದರೆ ಕೂಡಲೇ ಡ್ರೋನ್‌ ಬಳಸಿ ಯಾವ ಜಾಗದಲ್ಲಿ ಟ್ರಾಫಿಕ್ ಜಾಮ್ ಆಗಿದೆ ಎಂಬುದನ್ನು ಪತ್ತೆ ಮಾಡಿ ಸಮಸ್ಯೆ ಬಗೆಹರಿಸಬೇಕು. ಪೊಲೀಸ್‌ ನಿಯಂತ್ರಣ ಕೊಠಡಿಗೆ ಈ ಡ್ರೋನ್‌ ಕ್ಯಾಮರಾಗಳು ಸಂಪರ್ಕ ಹೊಂದಿರುತ್ತವೆ. ಸಂಚಾರ ದಟ್ಟಣೆ ಉಂಟಾದ ಸ್ಥಳದಿಂದಲೇ ಇನ್‌ಸ್ಪೆಕ್ಟರ್‌ಗಳ ವಾಹನದಲ್ಲಿ ಆ ಕ್ಯಾಮರಾಗಳನ್ನು ನಿರ್ವಹಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಇನ್ನು ಪ್ರತಿ ದಿನ ಪಿಕ್‌ ಅವರ್‌ಗಳಲ್ಲಿ ಅಂದರೆ ಬೆಳಗ್ಗೆ ಹಾಗೂ ಸಂಜೆ ವೇಳೆ ಎರಡು ಗಂಟೆಗಳು ಸಂಚಾರ ವಿಭಾಗದ ಎಲ್ಲ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಸಂಚಾರ ದಟ್ಟಣೆ ಉಂಟಾದರೆ ಡಿಸಿಪಿ ಹಾಗೂ ಎಸಿಪಿ ಅವರನ್ನು ಸಹ ಹೊಣೆ ಮಾಡಲಾಗುತ್ತದೆ ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್​ ದರ ಏರಿಕೆ ಮಾಡಿದ್ದು ಹಿಂದಿನ ಸರ್ಕಾರ, ನಾವಲ್ಲ: ಗೃಹ ಸಚಿವ ಡಾ ಜಿ ಪರಮೇಶ್ವರ್

ಇದೇ ವೇಳೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು, ”ನಾಲ್ಕು ಸಂಚಾರ ವಿಭಾಗದ ಡಿಸಿಪಿಗಳಿಗೆ ನಾಲ್ಕು ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಿದ್ದು, ಮುಂದಿನ ಒಂದು ವಾರ ಅಥವಾ 10 ದಿನಗಳಲ್ಲಿ ಕ್ಯಾಮೆರಾಗಳನ್ನು ಪಡೆಯಲಾಗುವುದು. ತರಬೇತಿ ನಡೆಯುತ್ತಿದೆ, 10 ಸಂಚಾರ ಉಪವಿಭಾಗಗಳ ಎಲ್ಲಾ ಎಸಿಪಿಗಳು ಮತ್ತು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಹಂತ ಹಂತವಾಗಿ ಡ್ರೋನ್‌ಗಳನ್ನು ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೊಯ್ಸಳ ಪೊಲೀಸರಿಗೆ ಬಾಡಿ ಕ್ಯಾಮ್

ಇನ್ನು ಹೊಯ್ಸಳ ಸಿಬ್ಬಂದಿಗೆ ಇನ್ಮುಂದೆ ಬಾಡಿ ಕ್ಯಾಮರಾ ಅಳವಡಿಕೆ ಮಾಡಿ ಅವರ ಪ್ರತೀ ಸಂಭಾಷಣೆ, ಜನರ ಸಂಭಾಷಣೆ ರೆಕಾರ್ಡ್ ಆಗುತ್ತೆ ಎಂದು ಸಚಿವ ಪರಮೇಶ್ವರ್ ತಿಳಿಸಿದರು.

ನಗರದಾದ್ಯಂತ ಹೈ ರೆಸಲ್ಯೂಷನ್ ಸಿಸಿಟಿವಿ ಕ್ಯಾಮರ ಅಳವಡಿಕೆ

ನಗರದಲ್ಲಿ ಮಹಿಳೆಯರ ಭದ್ರತೆ ಬಗ್ಗೆ ಹೆಚ್ಚು ಗಮನ ಹರಿಸೋಕೆ ಸಚಿವರು ಸೂಚನೆ ನೀಡಿದ್ದಾರೆ. ನಿರ್ಭಯ ಕೇಸ್ ಆದ್ಮೇಲೆ ಹೆಣ್ಣುಮಕ್ಕಳ ಸೇಫ್ಟಿಗೆ ಸೇಫ್ ಸಿಟಿ ಪ್ರಾಜೆಕ್ಟ್ ಮಾಡಲಾಗಿದೆ. ಅದರ ಅಂಗವಾಗಿ ಬೆಂಗಳೂರಿನಲ್ಲಿ ಜನಬಿಡದ ಪ್ರದೇಶ ಹಾಗೂ ಮಹಿಳೆಯರು ಹೆಚ್ಚು ಓಡಾಡೋ ಕಡೆ ಹೈಯೆಂಡ್ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಿದ್ದಾರೆ. ಈಗಾಗಲೇ 7000ಕ್ಕೂ ಹೆಚ್ಚು ಕ್ಯಾಮರಾ ಅಳವಡಿಕೆಗೆ ಯೋಜನೆ ಮಾಡಿಕೊಂಡಿದ್ದು, ಕಮಾಂಡ್ ಸೆಂಟರ್ ಮೂಲಕ ಮಹಿಳೆಯರು ಓಡಾಡೋ ಜಾಗಗಳು, ಸೇಫ್ಟಿ ಐಲೆಂಡ್ ಮೂಲಕ ಬರೋ ಮಾಹಿತಿಗಳ ಬಗ್ಗೆ ಗಮನ ಹರಿಸಲು ಸೂಚಿಸಿದ್ದೇನೆ.‌ ಈಗಾಗಲೇ ಸೇಫ್‌ ಸಿಟಿ ಪ್ರಾಜೆಕ್ಟ್ 70% ಮುಗ್ದಿದ್ದು ಉಳಿದ ಕೆಲಸಗಳು ನಡೀತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು