ಬೆಂಗಳೂರು: ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ; ಇಲ್ಲಿದೆ ಡಿಟೇಲ್ಸ್
ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.
ಬೆಂಗಳೂರು, ಆ.25: ಭಾನುವಾರ(ಆ.27) ನಮ್ಮ ಮೆಟ್ರೋ (Metro) ಸಂಚಾರದಲ್ಲಿ ಬದಲಾವಣೆ ಆಗಲಿದೆ. ಹೌದು, ಸೇಫ್ಟಿ ಟೆಸ್ಟ್ ಹಿನ್ನೆಲೆ ನೇರಳೆ ಮಾರ್ಗದಲ್ಲಿ (Purple Line)ಸಂಚಾರ ವ್ಯತ್ಯಯವಾಗಲಿದೆ. ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು, ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.
1) ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣಗಳ ನಡುವೆ ಮೆಟ್ರೋ ಸ್ಥಗಿತವಾಗಲಿದೆ.
2) ಬೈಯ್ಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ ಸ್ಥಗಿತ
3)ವೈಟ್ಫೀಲ್ಡ್-ಕೆ.ಆರ್.ಪುರಂ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತ
ಈ ಮಾರ್ಗಗಳಲ್ಲಿ ಭಾನುವಾರ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳಿರದೆ, ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಈ ವೇಳೆ ಕೃಷ್ಣ ರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ಭಾನುವಾರ ಬಿಎಮ್ಆರ್ಸಿಎಲ್ ವಿವರವಾದ ಸುರಕ್ಷತಾ ಪರೀಕ್ಷೆ ಕೈಗೊಳ್ಳಲಿದೆ. ಇನ್ನು ಮಧ್ಯಾಹ್ನ 1ರ ನಂತರ ನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಸಂಚಾರವಾಗಲಿದೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:53 pm, Fri, 25 August 23