ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಮೇ 21 ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಹೀಗಾಗಿ ಮುಂಜಾತ್ರಾ ಕ್ರಮವಾಗಿ ಟ್ರಾಫಿಕ್ ಪೊಲೀಸರು, ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ? ಪರ್ಯಾಯ ಮಾರ್ಗಗಳಾವುವು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ
ಪ್ರಾತಿನಿಧಿಕ ಚಿತ್ರ
Edited By:

Updated on: May 20, 2026 | 10:03 PM

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ
ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಇದಕ್ಕೆ ಪರ್ಯಾಯ ಮಾರ್ಗ ಈ ಕೆಳಗಿನಂತಿದೆ ನೋಡಿ.

ಮುಖ್ಯಾಂಶಗಳು

  • NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆ
  • ಕೇಂದ್ರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ನಾಳೆ ಯುವ ಕಾಂಗ್ರೆಸ್ ಪ್ರತಿಭಟನೆ
  • ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
  • ನಾಳೆ (ಮೇ 21) ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಮಾರ್ಗ ಬದಲಾವಣೆ

ವಾಹನ ಸಂಚಾರ ಮಾರ್ಗ ಬದಲಾವಣೆ

ಫ್ರೀಡಂಪಾರ್ಕ್​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ ಕೆ.ಜಿ.ರಸ್ತೆ ಮೂಲಕ ಮೈಸೂರು ಬ್ಯಾಂಕ್​ ವೃತ್ತದಿಂದ ಬಲತಿರುವು ಪಡೆದು ಫ್ರೀಡಂಪಾರ್ಕ್​​ ಕಡೆಗೆ ಬರುವ ವಾಹನಗಳು ಅರಮನೆ ರಸ್ತೆ ಮೂಲಕ ಮಹಾರಾಣಿ ಅಂಡರ್​ಪಾಸ್ ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಪ್ರತಿಭಟನೆಕಾರರು ರೈಲು ನಿಲ್ದಾಣದಿಂದ ಫ್ಲೈಓವರ್ ರಸ್ತೆಯಲ್ಲಿ ಆಗಮಿಸಲಿದ್ದಾರೆ. ಕಾಲ್ನಡಿಗೆಯಲ್ಲಿ ಬರುವುದರಿಂದ ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್​.ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಹಳೇ ಜೆಡಿಎಸ್​​ ಕಚೇರಿ ರಸ್ತೆಯನ್ನು ಬಳಸಲು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ತಾತ್ಕಾಲಿಕವಾಗಿ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್​​ ಜಂಕ್ಷನ್ ಕಡೆಗೆ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಗಾಂಧಿನಗರ ಕಡೆಗೆ ಬರುವ ವಾಹನಗಳು ಈ ರಸ್ತೆ ಬಳಸಬಹುದಾಗಿದೆ. ಇನ್ನು ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್​ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಅರಮನೆ ರಸ್ತೆ, ಕೆ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us