AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.27ರಂದು ಕೆಂಪೇಗೌಡ ಜಯಂತಿ: ಬೆಂಗಳೂರಿನ ಈ ಭಾಗದಲ್ಲಿ ವಾಹನ ಸಂಚಾರ ಮಾರ್ಪಾಡು

ಇದೇ ಜೂನ್ 27ರಂದು ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 224 ಕ್ಷೇತ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಣೆಗೆ ತಲಾ 1 ಲಕ್ಷ ರೂ. ಹಾಗೂ ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಜಯಂತಿ ಆಚರಣೆಗೆ ತಲಾ 1 ಲಕ್ಷ ಅನುದಾನ ನೀಡಲು ತೀರ್ಮಾನಿಸಿದೆ. ಸರ್ಕಾರದಿಂದ ಕೆಂಗೇರಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡಲು ನಿಗದಿ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮ ಸ್ಥಳ ಸುತ್ತ ಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ.

ಜೂ.27ರಂದು ಕೆಂಪೇಗೌಡ ಜಯಂತಿ: ಬೆಂಗಳೂರಿನ ಈ ಭಾಗದಲ್ಲಿ ವಾಹನ ಸಂಚಾರ ಮಾರ್ಪಾಡು
Bengaluru Traffic Police
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jun 25, 2026 | 9:30 PM

Share

ಮುಖ್ಯಾಂಶಗಳು

  • ಜೂನ್ 27ರಂದು ಕೆಂಗೇರಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ವಾಹನ ಸಂಚಾರ ಮಾರ್ಪಾಡು
  • ಶನಿವಾರ MAR ರಸ್ತೆ ಉದ್ಘಾಟನೆ ಮತ್ತು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಈ ಕ್ರಮ
  • ಮಾಗಡಿ ಮುಖ್ಯರಸ್ತೆ ಹಾಗೂ ಕೆಂಗೇರಿ ವ್ಯಾಪ್ತಿಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

ಬೆಂಗಳೂರು, (ಜೂನ್ 25): ಇದೇ ಜೂನ್ 27ರಂದು ಕೆಂಪೇಗೌಡ ಜಯಂತಿಯನ್ನು (kempegowda jayanti 2026) ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರಿನ ಕೆಂಗೇರಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ನಿರ್ಧರಿಸಲಾಗಿದೆ. ಹೀಗಾಗಿ ಕಾರ್ಯಕ್ರಮ ಸ್ಥಳ ಸುತ್ತ ಮುತ್ತ ಮೈಸೂರು ರಸ್ತೆ, ಕೊಮ್ಮಘಟ್ಟ ಮುಖ್ಯರಸ್ತೆ, ಕೆಂಗೇರಿ ಉಪನಗರ, ಮಾಗಡಿ ಮುಖ್ಯರಸ್ತೆ ಹಾಗೂ ಕೆಂಗೇರಿ ವ್ಯಾಪ್ತಿಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ 40 ರಿಂದ 50 ಸಾವಿರ ಜನ ಸೇರುವ ನಿರೀಕ್ಷೆ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸುಮಾರು 40 ರಿಂದ 50 ಸಾವಿರ ಸಾರ್ವಜನಿಕರು ಭಾಗಿ ಸಾಧ್ಯತೆ ಇದೆ. ಹೀಗಾಗಿ ಮುಂಜಾತ್ರಾ ಕ್ರಮವಾಗಿ ಜೂನ್ 27ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4ರವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಇದಕ್ಕೆ ಪರ್ಯಾಯ ಮಾರ್ಗಗಳನ್ನು ಸಹ ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿಷೇಧ ಹಾಗೂ ಪರ್ಯಾಯ ಮಾರ್ಗದ ವಿವರ

  • ಸಂಚಾರ ನಿರ್ಬಂಧ: (ಜೂ.27ರಂದು ಬೆಳಗ್ಗೆ 06:00 ರಿಂದ ಸಂಜೆ 04:00 ಗಂಟೆಯವರೆಗೆ) ಮೈಸೂರು ರಸ್ತೆಯ ಮಾರಿಗೋಲ್ಡ್ ಶಾಲೆಯ ಜಂಕ್ಷನ್ ನಿಂದ ಭೀಮನಕುಪ್ಪೆ ಜಂಕ್ಷನ್ ವರೆಗೆ ಸರಕು ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
  • ಪರ್ಯಾಯ ಮಾರ್ಗ: ಮೈಸೂರು ಮುಖ್ಯ ರಸ್ತೆಯ ಮುಖಾಂತರ ಚಲ್ಲಘಟ್ಟ ಮೆಟ್ರೋ ಸ್ಟೇಷನ್ ಕಡೆಗೆ ಸಾಗಿನೈಸ್ ರಸ್ತೆಯ ಮುಖಾಂತರ ಸರಕು ವಾಹನ ಚಲಿಸಲು ಸೂಚನೆ ನೀಡಿದ್ದಾರೆ.
  • ಕೊಮ್ಮಘಟ್ಟ ಜಂಕ್ಷನ್(ಕೆಂಗೇರಿ ಕ್ಲಬ್) ಕಡೆಯಿಂದ ಹೊಸಕೆರೆ ಗ್ರಾಮದ ಜಂಕ್ಷನ್ ವರೆಗೆ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗ ವಾಗಿ ಪೆರಿಫೆರಲ್ ರಸ್ತೆವರೆಗೆ ಸಂಚರಿಸುವ ಎಲ್ಲಾ ಸರಕು ಸಾಗಾಣಿಕೆ ವಾಹನಗಳು ವಿಶ್ವೇಶ್ವರಯ್ಯ ಲೇಔಟ್ ರಿಂಗ್ ರಸ್ತೆಯ ಉಲ್ಲಾಳು ಮೂಲಕ ಮಾಗಡಿ ರಸ್ತೆಗೆ ಸಂಚರಿಸಬಹುದು.
  • ಮೈಸೂರು ರಸ್ತೆಯ ಮಧು ಜಂಕ್ಷನ್ ನಿಂದ ಕುಂಬಳಗೋಡು ಜಂಕ್ಷನ್‌ ವರೆಗೆ, ನೈಸ್ ರಸ್ತೆಯ ಸೋಂಪುರ ಟೋಲ್ ನಿಂದ ಮಾಗಡಿ ಮುಖ್ಯರಸ್ತೆಯ ಜಂಕ್ಷನ್ ವರೆಗೆ, ಚಲ್ಲಘಟ್ಟ ಮುಖ್ಯರಸ್ತೆ ಹಾಗೂ ಕೆಂಗೇರಿ ಉಪನಗರ ರೈನ್ಬೋ ಬ್ರಿಡ್ಜ್ ನಿಂದ ಕೊಮ್ಮಘಟ್ಟ ಕಡೆಗೆ ಬೆಳಿಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ನಿಧಾನಗತಿಯ ಸಂಚಾರವಿರುತ್ತೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮುನ್ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ