ಚಾಲಕನಿಗೆ ಹಠಾತ್ ಎದೆನೋವು: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ಸಂಚರಿಸಿತು. ಬೆಂಗಳೂರಿನ ನಾಗವಾರ-ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದಾಗ ಕೇವಲ ನಾಲ್ವರು ಮಾತ್ರ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಬಾಣಸವಾಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಸ್ವಸ್ಥ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಮನಗರ ಸಂಸದ ಡಿ.ಕೆ.ಸುರೇಶ್ ಮತ್ತು ಸಚಿವ ಅಶ್ವತ್ಥ ನಾರಾಯಣ ನಡುವೆ ರಾಮನಗರದಲ್ಲಿ ನಡೆದ ಜಗಳ ಬೆಂಗಳೂರಿನಲ್ಲಿಯೂ ಪ್ರತಿಧ್ವನಿಸಿದೆ. ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಲ್ಲೇಶ್ವರಂನ ಕುವೆಂಪು ಪ್ರತಿಮೆ ಬಳಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಧರಣಿ ನಡೆಸಿದರು.
ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!
ಇದನ್ನೂ ಓದಿ: ಯಾರನ್ನೂ ನಾನು ಟೀಕಿಸಲ್ಲ, ಟೀಕಿಸುವವರನ್ನ ನಾನು ಬಿಡಲ್ಲ: ಡಿಕೆ ಸುರೇಶ್