ಸಂಚಾರಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್
ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್ ಹಾಕಲಾಗಿದೆ. ಒಟ್ಟು 2,050 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದ ಪೊಲೀಸರು, 994 ಶಾಲಾ ವಾಹನ, 319 ಬಸ್ಗಳು, 122 ಆಟೋ, 133 ಓಮ್ನಿಗಳು, 332 ವ್ಯಾನ್ ಹಾಗೂ ಇತರೆ 88 ವಾಹನಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆ 177ರ ಅಡಿ ಸಂಚಾರಿ ಪೊಲೀಸರು ದಾಖಲಿಸಿದ್ದಾರೆ.
ಬೆಂಗಳೂರು, ನವೆಂಬರ್ 22: ನಗರದಲ್ಲಿ ಸಂಚಾರಿ ಪೊಲೀಸ (Traffic Police) ರಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್ ಹಾಕಲಾಗಿದೆ. ಒಟ್ಟು 2,050 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದ ಪೊಲೀಸರು, 994 ಶಾಲಾ ವಾಹನ, 319 ಬಸ್ಗಳು, 122 ಆಟೋ, 133 ಓಮ್ನಿಗಳು, 332 ವ್ಯಾನ್ ಹಾಗೂ ಇತರೆ 88 ವಾಹನಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆ 177ರ ಅಡಿ ಸಂಚಾರಿ ಪೊಲೀಸರು ದಾಖಲಿಸಿದ್ದಾರೆ.
ಶಾಲಾ ವಾಹನಗಳ ಅಪಘಾತ ಸಂಭವಿಸಿದರೆ, ಮಕ್ಕಳು ವಾಹನದಿಂದ ಹೊರಗೆ ಬರಲು ಆಗುವುದಿಲ್ಲ. ಚಾಲಕರ ವರ್ತನೆಯಿಂದ ಮಕ್ಕಳ ಜೀವಕ್ಕೆ ಕುತ್ತು ಬರುವ ಸಂಭವ ಹೆಚ್ಚಗಿರುತ್ತದೆ. ಹಾಗಾಗಿ ವಾಹನಗಳನ್ನು ತಡೆದು ಚಾಲಕರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.
ಟಿವಿ9 ವರದಿ ಬಳಿಕ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳು
ಕೊಪ್ಪಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ದುಸ್ಥಿತಿ ವಿಚಾರವಾಗಿ ಟಿವಿ9 ವರದಿ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಡಿಡಿಪಿಐ, ಬಿಇಒ, ಕೆಆರ್ಐಡಿಎಲ್ ಅಧಿಕಾರಿಗೆ ಬಹದ್ದೂರಬಂಡಿ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.
ಹಲವು ಬಾರಿ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಶಾಲಾ ಕಟ್ಟಡ ಕಾಮಗಾರಿ ವಿಳಂಬವಾಗುತ್ತಿದೆ. ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ಗ್ರಾಮಸ್ಥರು ತೋರಿಸಿದ್ದಾರೆ. 3 ತಿಂಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಗ್ರಾಮಸ್ಥರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಸೋರುತ್ತಿರುವ ಸರ್ಕಾರಿ ಶಾಲೆ ಕೊಠಡಿಗಳು; ಪ್ರಾಣ ಭಯದಲ್ಲಿಯೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
ಸದ್ಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ DDPI ಶ್ರೀಶೈಲ್ ಬಿರಾದರ್, KRIDL ಇಂಜಿನಿಯರ್ ಸುರೇಶ್ ಭರವಸೆ ನೀಡಿದ್ದಾರೆ. ಶಾಲಾ ಕೊಠಡಿಗಳ ಮೇಲ್ಚಾವಣಿಗಳು ಕುಸಿಯುವ ಹಂತದಲ್ಲಿದ್ದವು. ಜೀವಭಯದಲ್ಲೇ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರು. ಶಾಲೆಯ ದುಸ್ಥಿತಿ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:14 pm, Wed, 22 November 23