Bengaluru Traffic: ಸುಗಮ ಸಂಚಾರಕ್ಕೆ ಸಲಹೆ ಕೋರಿದ ಪೊಲೀಸರು; ನಾಳೆ ಟ್ರಾಫಿಕ್ ಸ್ಟೇಷನ್​​ಗಳಲ್ಲಿ ನಾಗರಿಕ ಸಭೆ

ಫೆ 11ರ ಶನಿವಾರ ಬೆಳಿಗ್ಗೆ 11:30ರಿಂದ 1:30ರವರೆಗೆ ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸಭೆ ನಡೆಯಲಿದೆ.

Bengaluru Traffic: ಸುಗಮ ಸಂಚಾರಕ್ಕೆ ಸಲಹೆ ಕೋರಿದ ಪೊಲೀಸರು; ನಾಳೆ ಟ್ರಾಫಿಕ್ ಸ್ಟೇಷನ್​​ಗಳಲ್ಲಿ ನಾಗರಿಕ ಸಭೆ
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 10, 2023 | 1:25 PM

ಬೆಂಗಳೂರು: ನಗರದ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಇರುವ ಅಡೆತಡೆ ನಿವಾರಿಸಲು ಹಾಗೂ ಅಪಘಾತಗಳನ್ನು ಸಮರ್ಥವಾಗಿ ತಡೆಗಟ್ಟಲು ಸಾರ್ವಜನಿಕರ ಸಹಕಾರವನ್ನು ಸಂಚಾರ ಪೊಲೀಸರು (Bengaluru City Traffic Police) ಕೋರಿದ್ದಾರೆ. ಸಂಚಾರ ಪೊಲೀಸರು ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹಾಗೂ ಬಾಂಧವ್ಯಗಳನ್ನು ಸಾಧಿಸುವ ನಿಟ್ಟಿನಲ್ಲಿ ‘ನಾಗರಿಕ ಸಂಚಾರ ವೇದಿಕೆ’ (Citizens Traffice Fourm Meeting) ಕಾರ್ಯಕ್ರಮವನ್ನು ಫೆ 11ರ ಶನಿವಾರ ಬೆಳಿಗ್ಗೆ 11:30ರಿಂದ 1:30ರವರೆಗೆ ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಡೆಸಲು ಮುಂದಾಗಿದೆ. ಈ ವಿಚಾರವನ್ನು ನಗರದ ವಿಶೇಷ ಪೊಲೀಸ್ ಕಮಿಷನರ್ (ಟ್ರಾಫಿಕ್) ಡಾ ಎಂ.ಎ.ಸಲೀಂ ಪತ್ರಿಕಾ ಹೇಳಿಕೆಯ ಮೂಲಕ ಹಂಚಿಕೊಂಡಿದ್ದಾರೆ.

‘ನಾಗರಿಕ ಸಂಚಾರ ವೇದಿಕೆ’ ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ನಿವಾರಿಸುತ್ತಾರೆ. ಅಷ್ಟೇ ಅಲ್ಲದೆ ಸಂಚಾರವನ್ನು ಸುಗಮಗೊಳಿಸುವ ಹಾಗೂ ರಸ್ತೆ ಸುರಕ್ಷೆಯನ್ನು ವೃದ್ಧಿಸುವ ಸಲಹೆಗಳನ್ನು ಸಹ ಸಾರ್ವಜನಿಕರು ಮುಕ್ತವಾಗಿ ನೀಡಬಹುದಾಗಿದೆ. ಸಾರ್ವಜನಿಕರು ನೀಡುವ ಉತ್ತಮ ಸಲಹೆಗಳನ್ನು ಪರಿಗಣಿಸಿ ಅವುಗಳನ್ನು ನಿಯಮಗಳನ್ನಾಗಿ ಪರಿವರ್ತಿಸಿ ಕಾರ್ಯಗತಗೊಳಿಸಲಾಗುವುದು. ಸಾರ್ವಜನಿಕರು ಸಂಚಾರದ ಬಗ್ಗೆ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರು ತಮ್ಮ ಹಿಂದಿನ ಪ್ರಕರಣಗಳ ಬಗ್ಗೆ ವಿವರ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ’ ಎಂದು ಅವರು ಹೇಳಿದ್ದಾರೆ.

‘ಕಾರ್ಯಕ್ರಮದಲ್ಲಿ ಎಲ್ಲ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಭಾಗವಹಿಸಿ ತಮ್ಮ ಸಲಹೆಗಳನ್ನು ಮುಕ್ತವಾಗಿ ನೀಡಿ ಬೆಂಗಳೂರು ನಗರದಲ್ಲಿ ಸುಗಮ ಸಂಚಾರವನ್ನು ಜಾರಿಗೊಳಿಸಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರೊಂದಿಗೆ ಸಹಕರಿಸಬೇಕು’ ಎಂದು ಅವರು ಕೋರಿದ್ದಾರೆ.

ನಂಬರ್ ಪ್ಲೇಟ್ ಪರಿಶೀಲನೆ

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳ ನಂಬರ್​ ಪ್ಲೇಟ್ ಪರಿಶೀಲಿಸುವ ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ನಿಯಮಗಳಿಗೆ ಅನುಸಾರವಾಗಿ ನಂಬರ್​ ಪ್ಲೇಟ್​ಗಳು ಇಲ್ಲದ ವಾಹನಗಳ ವ್ಹೀಲ್ ಲಾಕ್ ಮಾಡುತ್ತಿದ್ದಾರೆ. ಕೆಲವರು ವಾಹನಗಳ ಮೇಲೆ ದಂಡ ಬೀಳುವುದನ್ನು ತಪ್ಪಿಸಲು ತಪ್ಪು ನಂಬರ್​ಪ್ಲೇಟ್ ಹಾಕಿಕೊಂಡು ಓಡಾಡುತ್ತಿದ್ದರು. ಕೆಲ ಯುವಕರು ವ್ಹೀಲಿಂಗ್ ಸೇರಿದಂತೆ ಹಲವು ರೀತಿಯ ದುಸ್ಸಾಹಸಗಳಿಗೆ ಇಳಿಯುತ್ತಿದ್ದರು. ಇಂಥವಕ್ಕೆ ಕಡಿವಾಣ ಹಾಕಲು ಪೊಲೀಸರು ಇದೀಗ ಮುಂದಾಗಿದ್ದಾರೆ.

ಇದನ್ನೂ ಓದಿ: ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನ 24 ಗಂಟೆಯೊಳಗೆ ಮಾಲೀಕರಿಗೆ ಹಸ್ತಾಂತರ: ಕಮಿಷನರ್ ಡಾ.ಸಲೀಂ

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್