Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್: ಗೃಹ ಸಚಿವ ಜಿ ಪರಮೇಶ್ವರ ಸುಳಿವು

ವಾಹನ ಟೋಯಿಂಗ್ ಕಿರಿಕಿರಿಯಿಂದ ಪಾರಾಗಿದ್ದ ಬೆಂಗಳೂರು ನಾಗರಿಕರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಂಚಾರ ದಟ್ಟಣೆ ನಿರ್ವಹಣೆ ದೃಷ್ಟಿಯಿಂದ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದದಾರೆ.

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್: ಗೃಹ ಸಚಿವ ಜಿ ಪರಮೇಶ್ವರ ಸುಳಿವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jan 30, 2025 | 9:25 AM

ಬೆಂಗಳೂರು, ಜನವರಿ 30: ಬೆಂಗಳೂರಿನ ವಾಹನ ಮಾಲೀಕರು, ದ್ವಿಚಕ್ರ ವಾಹನ ಸವಾರರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಶಾಕಿಂಗ್ ಸುದ್ದಿ ನೀಡಿದ್ದಾರೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ “ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ” ವಿಷಯದ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಚಾರದಟ್ಟಣೆ ಹೆಚ್ಚು ಇರುವ ಕೆಲವು ರಸ್ತೆಗಳಲ್ಲಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಚಿಂತನೆ ನಡೆಸಿದ್ದೇವೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಅಗತ್ಯ ಇದ್ದಲ್ಲಿ ಇನ್ನಷ್ಟು ಟ್ರಾಫಿಕ್ ಪೊಲೀಸ್ ಸ್ಟೇಷನ್​ಗಳನ್ನು ಆರಂಭಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಸ್ತ್ರಂ ಮೊಬೈಲ್ ಆ್ಯಪ್ ಬಿಡುಗಡೆ, ಬೆಂಗಳೂರು ಟ್ರಾಫಿಕ್ ಪೊಲೀಸ್ ಇತಿಹಾಸ ಸಾರುವ ವಸ್ತು ಸಂಗ್ರಹಾಯ ಲೋಕಾರ್ಪಣೆಗೊಳಿಸಲಾಯಿತು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಟೋಯಿಂಗ್ ನಿಲ್ಲಿಸಿದ್ದ ಏಕೆ?

ಡೆಲಿವರಿ ಬಾಯ್ ಒಬ್ಬ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಟೋಯಿಂಗ್ ಮಾಡಲಾಗಿದ್ದು, ಆತ ತನ್ನ ವಾಹನ ಬಿಡಿಸಿಕೊಳ್ಳಲು ಟೋಯಿಂಗ್‌ ವಾಹನದ ಹಿಂದೆ ಓಡುವ ವಿಡಿಯೋ 2022ರ ಆರಂಭದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆಗ ಟ್ರಾಫಿಕ್ ಪೊಲೀಸರು ಹಾಗೂ ಟೋಯಿಂಗ್‌ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಾಹನಗಳನ್ನು ಸುಖಾಸುಮ್ಮನೆ ಟೋಯಿಂಗ್‌ ವಾಹನದಲ್ಲಿ ಎತ್ತಿಕೊಂಡು ಹೋಗಿ ದಂಡ ವಿಧಿಸಲಾಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.

ಇದನ್ನೂ ಓದಿ: ಅರಮನೆ ಮೈದಾನ ಬಳಕೆಗೆ ಸರ್ಕಾರದ ಸುಗ್ರೀವಾಜ್ಞೆ ಅಸ್ತ್ರ ಯಶಸ್ವಿ: ರಾಜ್ಯಪಾಲರಿಂದ ಅಂಕಿತ

ಈ ಎಲ್ಲ ಬೆಳವಣಿಗೆಗಳ ನಂತರ ಸರ್ಕಾರ ಟೋಯಿಂಗ್ ಸ್ಥಗಿತಗೊಳಿಸಿತ್ತು. ಅದರ ಬದಲಿಗೆ, ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿರುವ ವಾಹನಕ್ಕೆ ವ್ಹೀಲ್ ಕ್ಲ್ಯಾಂಪ್ ಅಳವಡಿಸಿ ವಾಹನ ಮಾಲೀಕರು ಬಂದ ಬಳಿಕ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆ ಅನುಸರಿಸಲಾಗುತ್ತಿದೆ.

ಟ್ರಾಫಿಕ್ ಅಪ್​ಡೇಟ್​ಗೆ ಅಸ್ತ್ರಂ ಮೊಬೈಲ್ ಆ್ಯಪ್

ಬೆಂಗಳೂರಿನ ಸಂಚಾರ ದಟ್ಟಣೆ ಹಾಗೂ ಸಂಚಾರಕ್ಕೆ ಸಂಬಂಧಿಸಿದ ಇತರ ರಿಯಲ್​ಟೈಂ ಅಪ್​​ಡೇಟ್ ಅನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶದಿಂದ ಅಸ್ತ್ರಂ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಅಪಘಾತ, ಸಂಚಾರ ನಿಯಮ ಉಲ್ಲಂಘನೆ, ದಂಡ ಪಾವತಿ ಸೇರಿ ಹಲವು ಆಯ್ಕೆಗಳು ದೊರೆಯಲಿವೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ಇತಿಹಾಸ ಸಾರುವ ವಸ್ತು ಸಂಗ್ರಹಾಯದಲ್ಲಿ ನಗರದ ಸಂಚಾರ ನಿರ್ವಹಣೆಯ ಇತಿಹಾಸ ಮತ್ತು ವಿಕಾಸದ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು