Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದರಂತೆ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​ ಸವಾಲುಗಳನ್ನು ಪರಿಹರಿಸಲು ಇದೀಗ ಭಾರಿ ವಾಹನಗಳು ಸೇರಿದಂತೆ ಬಸ್​ಗಳಿಗೂ ನಿರ್ಬಂಧ ಹೇರಲಾಗಿದೆ.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ
ಮಾರತಹಳ್ಳಿ ಸರ್ವಿಸ್​ ರಸ್ತೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Feb 08, 2024 | 4:57 PM

ಬೆಂಗಳೂರು, ಫೆ.08: ಸಿಲಿಕಾನ್​ ಸಿಟಿ ಬೆಂಗಳೂರಿನ ಟ್ರಾಫಿಕ್​(Traffic) ಸಮಸ್ಯೆಯನ್ನು ತಡೆಗಟ್ಟಲು ಅದೆಷ್ಟೇ ಪ್ರಯತ್ನ ಮಾಡುತ್ತಿದ್ದರೂ ಆಗುತ್ತಿಲ್ಲ. ಇದೀಗ ಮಾರತಹಳ್ಳಿ(Marathahalli) ಹೊರ ವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಎಚ್​ಎಎಲ್​ ಸಂಚಾರಿ ಪೊಲೀಸರು, ಸರ್ವಿಸ್​ ರಸ್ತೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಅದರಂತೆ ಹಿಂದೂ ಐಟಿಪಿಎಲ್​, ಕಾಡುಗೋಡಿ ಮತ್ತು ವರ್ತೂರು ಕೋಡಿ ಕಡೆಗೆ ಹೋಗುವ ಮಾರ್ಗಗಳನ್ನು ಸಂಪರ್ಕಿಸಲು ಕಾರ್ತಿಕ್​ ನಗರದ ಇಸ್ರೋ ಜಂಕ್ಷನ್​ನಲ್ಲಿ ಭಾರೀ ವಾಹನಗಳು ಯು-ಟರ್ನ್​ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ವಾಹನಗಳಿಗೆ ಈ ನಿಯಮ ಅನುವಹಿಸುವುದಿಲ್ಲ

ಇನ್ನು ನಗರದ ಕಡೆಗೆ ಹೋಗುವ ವಾಹನಗಳು ಇಸ್ರೋ ಜಂಕ್ಷನ್​ನಲ್ಲಿ ಎಡಕ್ಕೆ ತಿರುಗಿ, ಬಳಿಕ ದೊಡ್ಡನೆಕ್ಕುಂಡಿ ಗ್ರಾಮದ ಮೂಲಕ ಎಚ್​ಎಎಲ್​ ವಿಮಾನ ನಿಲ್ದಾಣದ ರಸ್ತೆಯ ಮಾರ್ಗವಾಗಿ ಹೋಗಬಹುದಾಗಿದೆ. ಇನ್ನು ಈ ನಿಷೇಧ, ಶಾಲಾ ವಾಹನಗಳಿಗೆ ಅನುವಹಿಸುವುದಿಲ್ಲ. ಸಾರಿಗೆ ಉದ್ದೇಶಗಳಿಗಾಗಿ ಸೇವಾ ರಸ್ತೆಯನ್ನು ಬಳಸಿಕೊಳ್ಳು ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​​ ಸಮಸ್ಯೆಯನ್ನು ಪರಿಹರಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರಿ ವಾಹನಗಳು ಮತ್ತು ಬಸ್​ಗಳ ಮಾರ್ಗವನ್ನು ಬದಲಾಯಿಸುವ ಮೂಲಕ ಅಧಿಕಾರಿಗಳು ಟ್ರಾಫಿಕ್​ನ್ನು ಸುಗಮಗೊಳಿಸಲು ಮತ್ತು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಒಟ್ಟಾರೆ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ