
ಬೆಂಗಳೂರು, ಎಪ್ರಿಲ್ 18: ಬೆಂಗಳೂರು ಸಂಚಾರ ಪೊಲೀಸ್ (Bengaluru Traffic Police) ಪೂರ್ವ ವಿಭಾಗದ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಏಪ್ರಿಲ್ 19 ಮತ್ತು 20ರಂದು ಸಂಚಾರ ನಿರ್ಬಂಧ ವಿಧಿಸಲಾಗಿದೆ. ವಿವೇಕಾನಂದ ರಸ್ತೆ (Vivekananda Road) ಸೋಮೇಶ್ವರ ದೇವಸ್ಥಾನದ (Someshara Temple) ಉತ್ಸವದ ಪ್ರಯುಕ್ತ ಬೆಂಗಳೂರು ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರು ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಸೋಮೆಶ್ವರ ದೇವಸ್ಥಾನದ ವತಿಯಿಂದ ಸೋಮೆಶ್ವರ ದೇವರ ರಥೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವದ ಕಾರ್ಯಕ್ರಮ ಏರ್ಪಡಿಸಿರುವುದರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.
ಇದನ್ನೂ ಓದಿ: ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್: ಲಾರಿ ಮಾಲೀಕರ ಮುಷ್ಕರ ವಾಪಸ್