AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ: ಹಲವೆಡೆ ರಸ್ತೆ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ವಿಪಕ್ಷಗಳ ಸಭೆ ನಡೆಯಲಿದೆ. ಈ ನಿಟ್ಟಿನಲ್ಲಿ ಕೆಲವು ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ನಾಳೆಯಿಂದ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ: ಹಲವೆಡೆ ರಸ್ತೆ ಮಾರ್ಗ ಬದಲಾವಣೆ
ನಾಳೆಯಿಂದ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯಲಿರುವ ಹಿನ್ನೆಲೆ ಹಲವೆಡೆ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Rakesh Nayak Manchi|

Updated on:Jul 16, 2023 | 7:57 PM

Share

ಬೆಂಗಳೂರು, ಜುಲೈ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ (Loka Sabhe Election) ಸೋಲಿಸಲು ಒಗ್ಗೂಡಿರುವ ವಿಪಕ್ಷಗಳ ಸಭೆ (Opposition Parties Meeting) ನಾಳೆಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಈ ನಡುವೆ ಕರ್ನಾಟಕ ವಿಧಾನಸಭೆ ಅಧಿನವೇಶನವೂ ನಡೆಯಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಅಧಿವೇಶನ ಹಾಗೂ ತಾಜ್ ವೆಸ್ಟೆಂಡ್​ ಹೊಟೇಲ್​ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ, ಬಿಆರ್ ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ವಾಹನ ಸವಾರರು ಸಂಚರಿಸದೆ ಪರ್ಯಾಯ ಮಾರ್ಗಗಳನ್ನ ಬಳಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಕೆಲವು ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್​ಗೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಹಳೆದೋಸ್ತಿಗಳನ್ನು ಒಗ್ಗೂಡಿಸಲು ಬಿಜೆಪಿ ಸರ್ಕಸ್​​! ಲೋಕಸಭೆಗೆ ಒಂದಾಗೋಣ ಬನ್ನಿ ಎನ್ನುತ್ತಿದೆ‌ ಬಿಜೆಪಿ!

ಲೊಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳು ಒಂದಾಗಿವೆ. ಇದಕ್ಕಾಗಿ ವಿವಿಧ ತಂತ್ರಗಳನ್ನು ಹೆಣೆಯಲು ಆರಂಭಿಸಿವೆ. ಈ ಸಂಬಂಧ ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸಲಿವೆ. ಇದು ಎರಡನೇ ಸಭೆಯಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ‌ ಸಭೆಯು ಜೂನ್ ಅಂತ್ಯದಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿತ್ತು. ಈ ಸಭೆಯಲ್ಲಿ 16 ಪಕ್ಷಗಳ ನಾಯಕರು ಭಾಗಿಯಾಗಿದ್ದರು.

ಆದರೆ ಮೈತ್ರಿ ಕುರಿತು ಒಪ್ಪಂದಕ್ಕೆ ಬರಲು ಸಭೆ ವಿಫಲವಾದ ಕಾರಣ, ವಿರೋಧ ಪಕ್ಷಗಳು ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಿವೆ. ಆರಂಭದಲ್ಲಿ ಜುಲೈ 12 ಅಥವಾ 14 ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಅಂತಿಮವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಚರ್ಚೆಯ ನೇತೃತ್ವದ ಜವಾಬ್ದಾರಿಯನ್ನು ಕಾಂಗ್ರೆಸ್‌ಗೆ ವಹಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Sun, 16 July 23